ಉಂಡ ಮನೆಗೆ ಕನ್ನ ಹಾಕಿದವ ಸಿಕ್ಕಿ ಬಿದ್ದ


Team Udayavani, Mar 22, 2018, 12:22 PM IST

unda-manege.jpg

ಬೆಂಗಳೂರು: ಕೆಲಸಕ್ಕಿದ್ದ ಮನೆಯಲ್ಲೇ ಲಕ್ಷಾಂತರ ರೂ. ಮೌಲ್ಯದ ವಜ್ರ, ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದ ಬಿಹಾರ ಮೂಲದ ಜಿತೇಂದ್ರ (21) ಎಂಬಾತನನ್ನು ಅಶೋಕ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಸ್ಟೀಲ್‌ ಉದ್ಯಮಿ ವಿಕಾಸ್‌ ಗುಪ್ತಾ ಎಂಬುವವರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ, ಅವರ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಜಿತೇಂದ್ರನನ್ನು ಬಂಧಿಸಿದ್ದು, ಆತನಿಂದ 40 ಲಕ್ಷ ರೂ. ಮೌಲ್ಯದ ವಜ್ರ ಹಾಗೂ ಚಿನ್ನಾಭರಣಗಳು ಹಾಗೂ ಕದ್ದೊಯ್ದಿದ್ದ ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

ರೈಲ್ವೆ ನಿಲ್ದಾಣದಲ್ಲಿ ಸಿಕ್ಕಿಬಿದ್ದ: ಕಳೆದ 6 ತಿಂಗಳ ಹಿಂದೆ ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ ಆರೋಪಿ ಜಿತೇಂದ್ರ ನಾಲ್ಕು ತಿಂಗಳಿನಿಂದ ಬಲೀì ಸ್ಟ್ರೀಟ್‌ನಲ್ಲಿರುವ ವಿಕಾಸ್‌ ಗುಪ್ತಾ ಅವರ ಮನೆಯಲ್ಲಿ ಅಡುಗೆ ಮಾಡುವ ಕೆಲಸಕ್ಕೆ ಸೇರಿಕೊಂಡಿದ್ದ.

ಸಂಬಂಧಿಕರೊಬ್ಬರ ಮದುವೆ ನಿಶ್ಚಯವಾಗಿದ್ದರಿಂದ ವಿಕಾಸ್‌ ಗುಪ್ತಾ ಅವರು ಖಾಸಗಿ ಬ್ಯಾಂಕ್‌ನಲ್ಲಿಟ್ಟಿದ್ದ ಪತ್ನಿ ಹಾಗೂ ಅವರ 40 ಲಕ್ಷ ರೂ. ಮೌಲ್ಯದ ವಜ್ರ, ಚಿನ್ನಾಭರಣ ಹಾಗೂ 3.5 ಲಕ್ಷ ರೂ.ಗಳನ್ನು ಮಾ. 13ರಂದು ತಂದು ಮನೆಯ ಕಬೋರ್ಡ್‌ನಲ್ಲಿದ್ದನ್ನು ಜಿತೇಂದ್ರ ನೋಡಿದ್ದ.

ಚಿನ್ನಾಭರಣ ಹಾಗೂ ಹಣ ಕದ್ದು ಊರಿಗೆ ಹೋಗುವ ಸಂಚು ರೂಪಿಸಿದ್ದ ಜಿತೇಂದ್ರ. ಅದೇ ದಿನ ರಾತ್ರಿ ಮೊದಲನೇ ಮಹಡಿಗೆ ಕಿಟಕಿ ಮೂಲಕ ಪ್ರವೇಶಿಸಿ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದ. ಆದರೆ ಮಾರನೇ ದಿನ ಈ ಘಟನೆ ಬೆಳಕಿಗೆ ಬಂದಿತ್ತು.

ಜಿತೇಂದ್ರ ಇದ್ದಕ್ಕಿದ್ದಂತೆ ಫೋನ್‌ ಸ್ವಿಚ್‌ ಆಫ್ ಮಾಡಿಕೊಂಡಿದ್ದರಿಂದ ಅನುಮಾನಗೊಂಡ ಪೊಲೀಸರು ತನಿಖೆ ಚುರುಕುಕೊಳಿಸಿದ್ದರು. ಕಳವು ಮಾಡಿದ ದಿನ ರೈಲಿನ ಮೂಲಕ ಚೆನ್ನೈಗೆ ತೆರಳಿದ್ದ ಆರೋಪಿ ಎರಡು ದಿನ ಅಲ್ಲಿಯೇ ಉಳಿದುಕೊಂಡು, ಪುನ: ಯಶವಂತಪುರಕ್ಕೆ ಬಂದು ಅಲ್ಲಿಂದ ಪಾಟ್ನಾ ತೆರಳಲು ಆಗಮಿಸಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಬ್ಯಾಗ್‌ನಲ್ಲಿಯೇ ಇತ್ತು ಆಭರಣ!: ಆರೋಪಿ ಜಿತೇಂದ್ರನಿಗೆ ಇಲ್ಲಿಯೇ ಆಭರಣ ಮಾರಾಟ ಮಾಡಿದರೆ ಸಿಕ್ಕಿಬೀಳುವ ಭಯವಿತ್ತು. ಹೀಗಾಗಿ ಚೆನೈಗೆ ತೆರಳಿದ್ದ ಅಲ್ಲಿ ಭಾಷೆ ಸಮಸ್ಯೆಯಾಗಿದ್ದರಿಂದ, ಪಾಟ್ನಾದಲ್ಲಿಯೇ ಮಾರಾಟ ಮಾಡಿ ಸೆಟಲ್‌ ಆಗುವ ಯೋಜನೆ ರೂಪಿಸಿದ್ದೆ ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ . ಹೀಗಾಗಿ, ಬ್ಯಾಗ್‌ನಲ್ಲಿಯೂ ಅಷ್ಟೂ ಆಭರಣ ಇಟ್ಟುಕೊಂಡಿದ್ದ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

12(1

Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

1-sn

Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.