ಸಂಘಟನೆ ಸಾಮಾಜಿಕ ಕೊಂಡಿಯಾಗಲಿ
Team Udayavani, Mar 22, 2018, 12:32 PM IST
ಜೇವರ್ಗಿ: ಸಂಘಟನೆಗಳು ಸಮಾಜಮುಖೀಯಾಗಿ ಕಾರ್ಯ ಮಾಡಬೇಕು. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಉನ್ನತೀಕರಣಕ್ಕೆ ಸಂಪರ್ಕದ ಕೊಂಡಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ರೈತ ಮುಖಂಡ ಕೇದಾರಲಿಂಗಯ್ಯ ಹಿರೇಮಠ ಹೇಳಿದರು.
ತಾಲೂಕಿನ ಇಜೇರಿ ಗ್ರಾಮದಲ್ಲಿ ಬುಧವಾರ ಡಾ|ವಿಷ್ಣು ಸೇನಾ ಸಮಿತಿ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ಡಾ| ವಿಷ್ಣುವರ್ಧನ ವೃತ್ತ ಉದ್ಘಾಟನೆ, ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸಮಾಜ ಸೇವಾ ರತ್ನ ಪ್ರಶಸ್ತಿ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಡಾ| ರಾಜಕುಮಾರ ಹಾಗೂ ಡಾ| ವಿಷ್ಣುವರ್ಧನ ನಾಡಿನ ಎರಡು ಅಮೂಲ್ಯ ರತ್ನಗಳು. ಕನ್ನಡ ಚಿತ್ರರಂಗಕ್ಕೆ ಇವರಿಬ್ಬರ ಪಾತ್ರ ಹಿರಿದು. ಅವರ ನೆನಪಿನಲ್ಲಿ ಇಂತಹ ಸಾಮಾಜಿಕ ಕಾರ್ಯಕ್ರಮ ಆಯೋಜಿಸಿರುವ ಸಮಿತಿ ಮುಖಂಡರ ಕಾರ್ಯ ಶ್ಲಾಘನೀಯ ಎಂದರು.
ಉತ್ತರ ಕರ್ನಾಟಕ ಕರವೇ ಅಧ್ಯಕ್ಷ ಡಾ| ಶರಣು ಗದ್ದುಗೆ ಮಾತನಾಡಿ, ಅನ್ಯ ಭಾಷೆಗಳನ್ನು ದ್ವೇಷಿಸದೆ ಕನ್ನಡ ಭಾಷೆ ಪ್ರೀತಿಸಬೇಕು, ಬೆಳೆಸಬೇಕು, ಪೋಷಿಸಬೇಕು ಎಂದರು.
ಇದೆ ವೇಳೆ ಶಿವಶರಣಪ್ಪಗೌಡ ಯಂಕಂಚಿ, ಪತ್ರಕರ್ತ ವಿಜಯಕುಮಾರ ಕಲ್ಲಾ, ನಾಗಪ್ಪಗೌಡ ಕಲ್ಲಹಂಗರಗಾ, ಶಂಕರಲಿಂಗ ಪೂಜಾರಿ, ಯಮನಪ್ಪ ಸಾಥಖೇಡ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಯಲಗೋಡ-ಮೋರಟಗಿ ವಿರಕ್ತ ಮಠದ ಗುರುಲಿಂಗ ದೇವರು ಸಾನ್ನಿಧ್ಯ ವಹಿಸಿದ್ದರು. ಜಿಪಂ ಸದಸ್ಯ ಶಾಂತಪ್ಪ ಕೂಡಲಗಿ ವೃತ್ತ ಉದ್ಘಾಟಿಸಿದರು. ಸಮಿತಿ ತಾಲೂಕು ಅಧ್ಯಕ್ಷ ಬಸವರಾಜ ಬಾಗೇವಾಡಿ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಅಧ್ಯಕ್ಷ ಶಿವಣಗೌಡ ಹಂಗರಗಿ, ತಾಪಂ ಉಪಾಧ್ಯಕ್ಷ ಗೊಲ್ಲಾಳಪ್ಪ ಕರಕಿಹಳ್ಳಿ, ಗ್ರಾಪಂ ಅಧ್ಯಕ್ಷ ಗುಂಡಪ್ಪ ಗೌಡಗೇರಿ, ರಾಜಶೇಖರ ಸೀರಿ, ಎಸ್.ಎಸ್.ಸಲಗರ, ಮಹಿಬೂಬ ಇನಾಮದಾರ, ಭಗವಂತ್ರಾಯ ಬೆಣ್ಣೂರ, ಶ್ರೀಶೈಲ ದ್ಯಾಮಗೊಂಡ, ಅಲ್ಲಾ ಪಟೇಲ ಹೂಡಾ, ಸದಾನಂದ ಪಾಟೀಲ, ಸಮಿತಿ ಜಿಲ್ಲಾಧ್ಯಕ್ಷ ಮಹೇಶ ವಿಶ್ವಕರ್ಮ, ಉಪಅಧ್ಯಕ್ಷ ಕೊಟ್ರೇಶ ಬಾರ್ಕಿ, ಶಿವಶಂಕರ ಜವಳಗಿ ಮುಖ್ಯ ಅತಿಥಿಗಳಾಗಿದ್ದರು.
ಬಸವರಾಜ ಬಾಗೇವಾಡಿ ಸ್ವಾಗತಿಸಿದರು, ಬಿ.ಎಚ್.ಮಾಲಿಪಾಟೀಲ ನಿರೂಪಿಸಿ, ವಂದಿಸಿದರು. ವಿಷ್ಣು ಸೇನಾ ಸಮಿತಿಯ 50ಕ್ಕೂ ಹೆಚ್ಚು ಕಾರ್ಯಕರ್ತರು ರಕ್ತದಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.