ಕಲೆ ಸಂರಕ್ಷಣೆಗೆ ಜಾನಪದ ಘಟಕ ಸ್ಥಾಪನೆ: ಧನಲಕ್ಷ್ಮೀ

Team Udayavani, Mar 22, 2018, 3:23 PM IST

7_57.jpg

ಬೀದರ: ಮಹಿಳೆ ಮೇಲಾಗುವ ದೌರ್ಜನ್ಯ, ಅತ್ಯಾಚಾರ, ಶೋಷಣೆ ಹತ್ತಿಕ್ಕಲು ಪ್ರತಿ ಗ್ರಾಮ ಮಟ್ಟದಲ್ಲೂ ಜಾನಪದ ಘಟಕ ತೆರೆದು ಅಲ್ಲಿ ಕಲೆ, ಸಾಹಿತ್ಯ ಮತ್ತು ಸಂಗೀತ ಸಂರಕ್ಷಿಸುವುದು ಜಾನಪದ ಪರಿಷತ್‌ ಉದ್ದೇಶವಾಗಿದೆ ಎಂದು ಪರಿಷತ್‌ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಡಾ|ಧನಲಕ್ಷ್ಮೀ ಪಾಟೀಲ ಹೇಳಿದರು.

ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಕರ್ನಾಟಕ ಜಾನಪದ ಪರಿಷತ್‌ ಮನ್ನಳ್ಳಿ ವಲಯ ಮಹಿಳಾ ಘಟಕ ಹಾಗೂ ಜಾನಪದ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಾನಪದ ಸಂಸ್ಕೃತಿ ಜೀವಂತವಾಗಿಡುವಲ್ಲಿ ಮಹಿಳೆ ಪಾತ್ರ ಪ್ರಮುಖವಾಗಿದೆ.

ಪ್ರಾಚೀನ ಕಾಲವನ್ನು ಜನಪದ ಕಾಲ ಎಂದು ಕರೆಯಲ್ಪಡುತ್ತದೆ. ಬೆಳಗ್ಗೆಯಿಂದ ಸಂಜೆವರೆಗೆ ಗರತಿ ತನ್ನ ಏರು ಧ್ವನಿಯಲ್ಲಿ ಯಾವುದಾದರೊಂದು ಹಾಡು ಹಾಡುತ್ತ, ಇಡೀ ಕುಟುಂಬವನ್ನು ಸಂತೋಷಪಡಿಸುತ್ತಿದ್ದರು. ಪರಸ್ಪರ ಪ್ರೀತಿ, ವಿಶ್ವಾಸ, ಐಕ್ಯತೆ ಹಾಗೂ ಮಾನವಿಯ ಮೌಲ್ಯಗಳ ಬೆಳವಣಿಗೆಗೆ ಜಾನಪದ ಬದುಕು ಶ್ರೇಷ್ಠವಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಜಾನಪದ ಬುಡಕಟ್ಟು ಹಾಗೂ ಕಲಾ ಪರಿಷತ್‌ ಕಾರ್ಯದರ್ಶಿ ರಾಜಕುಮಾರ ಹೆಬ್ಟಾಳೆ ಮಾತನಾಡಿ, ಜಾನಪದ ಜೀವಂತಿಕೆಗೆ ಗ್ರಾಮೀಣ ಕಲಾವಿದರ ಕೊಡುಗೆ ಬಹಳಷ್ಟಿದೆ. ಆದರೆ ಯುವ ಕಲಾವಿದರ ಕೊರತೆ ಎದ್ದು ಕಾಣುತ್ತಿರುವ ಇಂದಿನ ದಿನಮಾನಗಳಲ್ಲಿ ನಗರ ಮತ್ತು ಪಟ್ಟಣಗಳಲ್ಲಿ ಯುವಜನರ ಸರ್ವಾಂಗಿಣ ವಿಕಾಸಕ್ಕೆ ಪಠ್ಯೇತರ ಚಟುವಟಿಕೆಗಳು ಹೆಚ್ಚು ಹಮ್ಮಿಕೊಳ್ಳುವ ಅಗತ್ಯತೆ ಇದೆ ಎಂದು ಹೇಳಿದರು.

ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ರಾಜಕುಮಾರ ಪಸಾರ ಮಾತನಾಡಿ, ಈಗ ಯುವ ಜನರು ಮೊಬೈಲ್‌ ವೀಕ್ಷಣೆಯಲ್ಲಿ ಕಾಲಹರಣ ಮಾಡುತ್ತ ನೈಜ ಸಂಸ್ಕೃತಿ ಮರೆಯುತ್ತಿರುವರು. ಪಾಶ್ಚಾತ್ಯರು ನಮ್ಮ ಸಂಸ್ಕೃತಿ ಅನುಸರಿಸಿದರೆ ಭಾರತೀಯರು ಪರಕೀಯರ ಜೀವನ ಅನುಕರಿಸುತ್ತಿದ್ದು, ಇಂಥ ದುರಂತ ತಪ್ಪಿಸಬೇಕಿದೆ ಎಂದು ಹೇಳಿದರು.

ತಾಪಂ ಸದಸ್ಯ ಚಂದ್ರಕಾಂತ ಮಡಕಿ ಮಾತನಾಡಿ, ಜಿಲ್ಲೆಯಲ್ಲಿ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿ ಜೀವಂತವಾಗಿಡಲು ಪರಿಷತ್‌ ಪಾತ್ರ ಬಹಳಷ್ಟಿದೆ. ಈ ಭಾಗದಲ್ಲಿ ಜಾನಪದ ಘಟಕಗಳ ಸ್ಥಾಪನೆಗೆ ಹಾಗೂ ದೇಶಿ ಸಂಸ್ಕೃತಿ, ಸಂಪ್ರದಾಯಗಳ ರಕ್ಷಣೆಗೆ ಸರ್ವ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಪರಿಷತ್‌ ಬೀದರ ದಕ್ಷಿಣ ಕ್ಷೇತ್ರದ ಅಧ್ಯಕ್ಷ ರಾಜಕುಮಾರ ಮಡಕಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ರಾಗಾ, ಎನ್‌ಎಸ್‌ಎಸ್‌ಕೆ ನಿರ್ದೇಶಕ ಚಂದ್ರಕಾಂತ ವಗದಾಳೆ, ಎಪಿಎಂಸಿ ನಿರ್ದೇಶಕ ಅನಿಲ ಪನ್ನಾಳೆ, ಪ್ರಗತಿಪರ ರೈತ ವೀರಭೂಷಣ ನಂದಗಾಂವ, ಬಿಎಸ್‌ಎಸ್‌ಕೆ ನಿರ್ದೇಶಕ ಅಶೋಕ ಮೂಲಗೆ, ಪ್ರಮುಖರಾದ ಜಗನ್ನಾಥ ಮೂಲಗೆ, ಶಿವಶರಣಪ್ಪ ಗಣೇಶಪುರ, ಎಸ್‌.ಬಿ. ಕುಚಬಾಳ ಇದ್ದರು.

ಚನ್ನಬಸವ ಕಾಮಣ್ಣ ಸ್ವಾಗತಿಸಿದರು. ಶ್ರೀಕಾಂತ ತೂಗೆ ನಿರೂಪಿಸಿದರು. ವಿವೇಕಾನಂದ ಕೋಟೆ ವಂದಿಸಿದರು. ನಂತರ ಓಂ ಡ್ಯಾನ್ಸ್‌ ಅಕಾಡೆಮಿಯಿಂದ ಸುಗ್ಗಿ ಕುಣಿತ ಹಾಗೂ ಬರೂರ ರಾಮರೆಡ್ಡಿ ತಂಡದಿಂದ ಚಕ್ರ ಭಜನೆ ನಡೆಯಿತು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.