ಮರವಂತೆ: ಗ್ರಾಮಸಭೆಯಲ್ಲಿ ಅಧಿಕಾರಿಗಳ ಮೌನವ್ರತ
Team Udayavani, Mar 23, 2018, 8:45 AM IST
ಮರವಂತೆ: ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಮಂಡಿಸುವ ನಿರ್ಣಯ ಮತ್ತು ಕೇಳುವ ಪ್ರಶ್ನೆಗಳನ್ನು ಏಳು ದಿನ ಮೊದಲು ಲಿಖೀತವಾಗಿ ನೀಡಬೇಕು ಎಂದು ಗ್ರಾಮ ಪಂಚಾಯತ್ ಕರಪತ್ರದಲ್ಲಿ ಮುದ್ರಿಸಿದ ಸೂಚನೆಗೆ ಮಾ. 20ರಂದು ನಡೆದ ಮರವಂತೆ ಗ್ರಾಮ ಪಂಚಾಯತ್‌ನಲ್ಲಿ ತೀವ್ರ ವಿರೋಧ ವ್ಯಕ್ತವಾಯಿತು.
ಮಾಜಿ ಅಧ್ಯಕ್ಷ ಎಸ್. ಜನಾರ್ದನ ಈ ವಿಷಯ ಪ್ರಸ್ತಾವಿಸಿದಾಗ ಶೇಖರ ಕುಂದರ್ ಇದು ಜನರ ಬಾಯಿ ಮುಚ್ಚಿಸುವ ಯತ್ನ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಸರ್ವಂ ಮೌನಂ ನಿಯಮದಂತೆ ವಸತಿ, ವಾರ್ಡ್ ಸಭೆಗಳನ್ನು ಗ್ರಾಮಸಭೆಗಿಂತ ತಿಂಗಳು ಮೊದಲು ನಡೆಸಬೇಕು. ವಿಶೇಷ ಆಯವ್ಯಯ ಗ್ರಾಮಸಭೆ ನಡೆಸಬೇಕು. ಎಲ್ಲ ವಾಣಿಜ್ಯ ಕಟ್ಟಡಗಳು ಅನುಮತಿ ಪಡೆದುಕೊಳ್ಳಬೇಕು. ನಿಯಮದಂತೆ ತೆರಿಗೆ ವಿಧಿಸಬೇಕು. ಫ್ಲೆಕ್ಸ್‌ಗಳ ಬಳಕೆ ತಡೆಗಟ್ಟಬೇಕು. ಪ್ರಚಾರ ಫಲಕಗಳ ಮೇಲೆ ಶುಲ್ಕ ವಿಧಿಸಬೇಕು. ಗ್ರಾಮವನ್ನು ಪ್ಲಾಸ್ಟಿಕ್‌ಮುಕ್ತಗೊಳಿಸಬೇಕು ಎಂಬ ಗ್ರಾಮಸ್ಥರ ಸಲಹೆಗಳಿಗೆ ಅಧ್ಯಕ್ಷರು, ಸದಸ್ಯರು ಮತ್ತು ಅಧಿಕಾರಿಗಳಿಂದ ಮೌನ ಪ್ರತಿಕ್ರಿಯೆ ವ್ಯಕ್ತವಾಯಿತು.
ಎರಡು ವರ್ಷಗಳ ಹಿಂದೆ ಅಳವಡಿಸಿದ್ದ ಶುದ್ಧ ಕುಡಿಯುವ ನೀರು ಘಟಕ ಕೆಟ್ಟು ಹೋಗಿದ್ದರೂ ಕ್ರಮ ಕೈಗೊಳ್ಳದಿರುವ ಪ್ರಶ್ನೆಗೂ ಉತ್ತರ ದೊರೆಯಲಿಲ್ಲ. ಎಂ. ಶಂಕರ ಖಾರ್ವಿ ಸ್ಮಶಾನ ನಿರ್ಮಾಣದ ಅಗತ್ಯದ ಕುರಿತು, ಗಣಪತಿ ಖಾರ್ವಿ ಎಲ್ಲ ಅನುದಾನದ ವಿವರ ಇರುವ ಫಲಕ ಪ್ರದರ್ಶಿಸುವ ಕುರಿತು, ವಿಜಯ ಕ್ರಾಸ್ತಾ ಲೋ ವೋಲ್ಟೆàಜ್ ಕುರಿತು, ದೇವಿದಾಸ ಶ್ಯಾನುಭಾಗ್ ಮೆಸ್ಕಾಂ ಬಿಲ್ಲಿಂಗ್ ನ್ಯೂನತೆ ಕುರಿತು, ರಮೇಶ ವಿದ್ಯುತ್ ಸಂಪರ್ಕ ಕುರಿತು, ರಾಜು, ಸಂತೋಷ್ ಗಾಂಧಿನಗರವನ್ನು ಎರಡು ವಾರ್ಡ್‌ಗಳ ನಡುವೆ ವಿಭಾಗಿಸಿರುವುದರ ಕುರಿತು ಗಮನ ಸೆಳೆದರು.
ಜಿಲ್ಲಾ ಪಂಚಾಯತ್ ಸದಸ್ಯ ಕೆ. ಬಾಬು ಶೆಟ್ಟಿ ಫ್ಲೆಕ್ಸ್ ಗಳ ಕುರಿತು ಗ್ರಾಮಸ್ಥರ ನಿಲುವನ್ನು ಬೆಂಬಲಿಸಿದರು. ಗ್ರಾಮದಲ್ಲಿ ಯಾವುದೇ ಕಾಮಗಾರಿ ನಡೆಸುವ ಮುನ್ನ ಸಂಬಂಧಿಸಿದವರು ಗ್ರಾ.ಪಂ.ಗೆ ಸೂಕ್ತ ಮಾಹಿತಿ ನೀಡದಿದ್ದರೆ, ಕಾಮಗಾರಿ ನಡೆಸಲು ಬಿಡಬಾರದು ಎಂದರು. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುಸಜ್ಜಿತ ಕಟ್ಟಡ ನಿರ್ಮಿಸುವ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ತಾ.ಪಂ. ಸದಸ್ಯ ಜಗದೀಶ ಪೂಜಾರಿ ತಾಲೂಕು ಪಂಚಾಯತ್‌ನಿಂದ ನೀಡಲಾದ ಅನುದಾನದ ವಿವರ ನೀಡಿದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ. ಅಧ್ಯಕ್ಷತೆ ವಹಿಸಿ ಮಾತನಾಡಿ, ಒಂದು ವರ್ಷದ ಹಿಂದೆ ನಿರ್ಮಿಸಿದ್ದ ತ್ಯಾಜ್ಯ ನಿರ್ವಹಣಾ ಘಟಕವನ್ನು ಈಗ ಅಭಿವೃದ್ಧಿ ಪಡಿಸಿದ್ದು ಕಾರ್ಯಾರಂಭವಾಗುತ್ತದೆ ಎಂದರು.
ವೈದ್ಯಾಧಿಕಾರಿ ಸನ್ಮಾನ್ ಶೆಟ್ಟಿ, ಮೆಸ್ಕಾಂ ಅಧಿಕಾರಿ ವಿಜಯೇಂದ್ರ, ಪಶು ವೈದ್ಯ ಅರುಣ್, ಅಂಗನವಾಡಿ ಮೇಲ್ವಿಚಾರಕಿ ಸವಿತಾ ಶೆಟ್ಟಿ, ಗ್ರಾಮ ಕರಣಿಕ ಮಹಾಂತೇಶ್ ಮಾಹಿತಿ ನೀಡಿದರು.
ಉಪಾಧ್ಯಕ್ಷ ಗಣೇಶ ಪೂಜಾರಿ, ಸದಸ್ಯರು, ಮಾರ್ಗದರ್ಶಿ ಅಧಿಕಾರಿ ಡಾ. ಶಂಕರ ಶೆಟ್ಟಿ, ಎಎಸ್‌ಐ ವೆಂಕಟೇಶ ಗೊಲ್ಲ, ಅಭಿವೃದ್ಧಿ ಅಧಿಕಾರಿ ವೀರಶೇಖರ ಉಪಸ್ಥಿತರಿದ್ದರು.ಕಾರ್ಯದರ್ಶಿ ದಿನೇಶ್ ಶೇರೆಗಾರ್ ಸ್ವಾಗತಿಸಿ, ವಂದಿಸಿದರು. ಕರ ಸಂಗ್ರಾಹಕ ಶೇಖರ್ ಮರವಂತೆ ವರದಿ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ
Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.