ಪರಿತ್ಯಕ್ತ ಮಕ್ಕಳ ರಕ್ಷಣೆಗೆ “ಮಮತೆಯ ತೊಟ್ಟಿಲು’ ಉದ್ಘಾಟನೆ
Team Udayavani, Mar 23, 2018, 7:00 AM IST
ಉಡುಪಿ: ಪರಿತ್ಯಕ್ತ ಮಕ್ಕಳ ರಕ್ಷಣೆಗಾಗಿ ಉಡುಪಿ ರೋಟರಿ ಪ್ರಾಯೋಜಕತ್ವದಲ್ಲಿ ಜಿಲ್ಲಾ ಸರಕಾರಿ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಕಾರದೊಂದಿಗೆ ಉಡುಪಿಯ ಕೆ.ಎಂ. ಮಾರ್ಗದಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ನೀಡಲಾಗಿರುವ ಮಮತೆಯ ತೊಟ್ಟಿಲನ್ನು ಮಾ. 22ರಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಉದ್ಘಾಟಿಸಿದರು.
ಅನಿವಾರ್ಯತೆ ಇನ್ನಿತರ ಕಾರಣಗಳಿಂದಾಗಿ ತಾಯಿಯು ಮಗುವನ್ನು ಬಿಟ್ಟು ಬಿಡುತ್ತಾಳೆ. ಆದರೆ ಮಾತೃ ವಾತ್ಸಲ್ಯ ಮರೆಯಾಗುವುದಿಲ್ಲ. ಮಗು ಕಸದ ತೊಟ್ಟಿ ಸೇರುವ ಬದಲು ಮಮತೆಯ ತೊಟ್ಟಿಲಿನಲ್ಲಿ ಸೇರಿದರೆ ಅದರ ಭವಿಷ್ಯವೂ ಎಲ್ಲರಂತಾಗಬಹುದು. ಮಗುವಿಗೆ ಇಂದು ಅತೀ ಹೆಚ್ಚು ಬೇಡಿಕೆ ಇದೆ ಎಂದು ಸಚಿವರು ಹೇಳಿದರು.
ಶಿಶುಗಳ ರಕ್ಷಣೆಗೆ ಮಮತೆಯ ತೊಟ್ಟಿಲು ಎನ್ನುವ ಕರಪತ್ರವನ್ನು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು ಬಿಡುಗಡೆ ಮಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಉಡುಪಿ ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಚಯರ್‌ಮನ್ ಬಿ.ಕೆ. ನಾರಾಯಣ್, ಡಾ| ಬಿ.ಆರ್. ಶೆಟ್ಟಿ ಸರಕಾರಿ ಆಸ್ಪತ್ರೆಯ ಡಾ| ಜಗದೀಶ್ ಶರ್ಮಾ, ಡಾ| ಚಂದ್ರಶೇಖರ್ ಅಡಿಗ, ಶೇಖರ್ ಅಡಿಗ, ಡಾ| ವಿಜಯಾ ವೈ.ಬಿ. ಉಪಸ್ಥಿತರಿದ್ದರು.ರೋಟರಿ ಅಧ್ಯಕ್ಷ ರಾಮಚಂದ್ರ ಉಪಾಧ್ಯಾಯ ಸ್ವಾಗತಿಸಿದರು. ಸುಬ್ರಹ್ಮಣ್ಯ ಕಾರಂತ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.