ಕ್ರೀಡಾ ಸಾಧಕ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ: ಮಧ್ವರಾಜ್
Team Udayavani, Mar 23, 2018, 6:00 AM IST
ಮಂಗಳೂರು: ನಗರದ ಉರ್ವ-ಬೋಳೂರಿನಲ್ಲಿ ಸುಮಾರು 6.5 ಕೋ.ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅಂತಾ ರಾಷ್ಟ್ರೀಯ ಮಾದರಿಯ ಶಟಲ್ ಬ್ಯಾಡ್ಮಿಂಟನ್ ಮತ್ತು ಕಬಡ್ಡಿ ಅಂಕಣಕ್ಕೆ ರಾಜ್ಯ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಗುರುವಾರ ಶಿಲಾನ್ಯಾಸ ನೆರವೇರಿಸಿದರು.
ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದಲೇ ಜಾರಿಗೆ ಬಂದಿರುವ ಕ್ರೀಡಾ ನೀತಿಯಡಿ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರುವ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದು. ಕ್ರೀಡೆಗಳಲ್ಲಿ ಭಾಗವಹಿಸುವ ವಿದ್ಯಾ ರ್ಥಿಗಳಿಗೆ ಹಾಜರಾತಿ ಕೊರತೆ ಆಗದಂತೆ ನೋಡಲಾಗುವುದು, ಕ್ರೀಡಾ ಸ್ಪರ್ಧೆಗಳ ವೇಳೆ ಪರೀಕ್ಷೆ ಇದ್ದಾಗ, ವಿದ್ಯಾರ್ಥಿಗಳಿಗೂ ಸ್ಪರ್ಧೆಗಳಲ್ಲಿ ಭಾಗವಹಿಸಲು ಅನುವು ಮಾಡಿಕೊಟ್ಟು, ವಿಶೇಷ ಪರೀಕ್ಷೆಗೆ ಅವಕಾಶ ಒದಗಿಸುವುದು. ವಿವಿಧ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿ ನೀಡುವ ಬಗ್ಗೆ ಕ್ರೀಡಾನೀತಿ ರೂಪಿಸಲಾಗಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾನು ಮಾಡಿದ ಮನವಿಯ ಮೇರೆಗೆ ಕ್ರೀಡಾ ಇಲಾಖೆಗೆ ನೀಡಲಾಗುತ್ತಿದ್ದ 145 ಕೋಟಿ ರೂ.ಗಳ ಬಜೆಟನ್ನು 285 ಕೋಟಿ ರೂ.ಗಳಿಗೆ ಏರಿಕೆ ಮಾಡಿರುವುದರಿಂದ ದ.ಕ. ಜಿಲ್ಲೆಯ ಕ್ರೀಡಾ ಕ್ಷೇತ್ರಕ್ಕೆ 30 ಕೋಟಿ ರೂ. ನೀಡಲು ಸಾಧ್ಯವಾಯಿತು. ನಾವು ಒಲಿಪಿಂಕ್ಸ್‌ನಲ್ಲಿ ಪದಕ ಗೆಲ್ಲಬೇಕೆಂದು ಘೋಷಣೆ ಮಾಡಿದರೆ ಸಾಲದು. ಶಾಲಾ ಹಂತದಲ್ಲಿಯೇ ಮಕ್ಕಳನ್ನು ಕ್ರೀಡಾಪಟುಗಳನ್ನಾಗಿ ಬೆಳೆಸಲು ಪ್ರೇರೇಪಿಸಬೇಕು. ಸರಕಾರಗಳೂ ಕ್ರೀಡಾ ಇಲಾಖೆಗೆ ಸಾಕಷ್ಟು ಅನುದಾನ ಒದಗಿಸುವ ಮೂಲಕ ಮೂಲಭೂತ ಸೌಕರ್ಯಗಳ ಜತೆ ಕ್ರೀಡಾಪಟುಗಳನ್ನು ಬೆಳೆಸಲು ಪ್ರೇರೇಪಿಸಬೇಕು ಎಂದರು.
ಶಾಸಕ ಜೆ.ಆರ್.ಲೋಬೋ ಅಧ್ಯಕ್ಷತೆ ವಹಿಸಿದ್ದರು. ಶ್ರೀ ದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎ. ಸದಾನಂದ ಶೆಟ್ಟಿ, ಮೇಯರ್ ಭಾಸ್ಕರ ಕೆ, ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಪ್ರಮುಖರಾದ ಪ್ರವೀಣ್ ಚಂದ್ರ ಆಳ್ವ, ರಾಧಾಕೃಷ್ಣ, ನಾಗವೇಣಿ, ಶೈಲಜಾ, ಸಬಿತಾ ಮಿಸ್ಕಿತ್, ರತಿಕಲಾ, ಅಮರನಾಥ್ ರೈ, ಪುರುಷೋತ್ತಮ ಪೂಜಾರಿ, ಐವನ್ ಪತ್ರಾವೋ, ವೆಂಕಟೇಶ್, ದೀಪಕ್, ಗಿರಿಧರ್ ಶೆಟ್ಟಿ, ಸುಪ್ರಿತ್ ಆಳ್ವ, ಅಶೋಕ್ ಪೂವಯ್ಯ, ಸಂತೋಷ್ ಶೆಟ್ಟಿ, ರತನ್ ಶೆಟ್ಟಿ, ಡಾ| ಬಿ.ಜಿ. ಸುವರ್ಣ, ರೇಮಂಡ್ ಡಿ’ಸೋಜ, ಪ್ರೇಮನಾಥ ಉಳ್ಳಾಲ್, ಉದಯ್ ಚೌಟ ಉಪಸ್ಥಿತರಿದ್ದರು. ಪ್ರದೀಪ್ ಡಿ’ಸೋಜ ಸ್ವಾಗತಿಸಿದರು. ಪುರುಷೋತ್ತಮ ಭಂಡಾರಿ ನಿರೂಪಿಸಿದರು.
ಕೇಂದ್ರದ ಬಜೆಟ್ ಕೇವಲ 900 ಕೋ.ರೂ.
ದೇಶದ 30 ರಾಜ್ಯಗಳಿಗೆ ಕೇಂದ್ರ ಸರಕಾರದ ಕ್ರೀಡಾ ಬಜೆಟ್ ಕೇವಲ 900 ಕೋಟಿ ರೂ. ಮಾತ್ರ. ಅದೇ ಕರ್ನಾಟಕಕ್ಕಿಂತಲೂ ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ಇಂಗ್ಲೆಂಡ್‌ನಲ್ಲಿ ಕ್ರೀಡಾ ಕ್ಷೇತ್ರಕ್ಕೆ 2,200 ಕೋಟಿ ರೂ. ನೀಡಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಅಲ್ಲಿನ ಕ್ರೀಡಾಪಟುಗಳ ಜತೆ ನಮ್ಮ ಕ್ರೀಡಾಪಟುಗಳು ಸ್ಪರ್ಧೆ ನೀಡುವುದಾದರೂ ಹೇಗೆ ಎಂದು ಮಧ್ವರಾಜ್ ಅವರು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
World Rapid Championships: ಕೊನೆರು ಹಂಪಿ ಚಾಂಪಿಯನ್; ಇರೆನ್ ವಿರುದ್ಧ ಜಯ
World Test Championship: ದಕ್ಷಿಣ ಆಫ್ರಿಕಾ ಫೈನಲ್ ಪ್ರವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yamuna ನದಿಯಲ್ಲಿ ಡಾ| ಮನಮೋಹನ್ ಸಿಂಗ್ ಚಿತಾಭಸ್ಮ ವಿಸರ್ಜನೆ
Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.