ಲಿಂಗಾಯತ ಧರ್ಮ: ಸಂಪುಟದಲ್ಲಿಂದು ಚರ್ಚೆ
Team Udayavani, Mar 23, 2018, 7:00 AM IST
ಬೆಂಗಳೂರು: ಲಿಂಗಾಯತ ಹಾಗೂ ವೀರಶೈವ (ಬಸವ ತತ್ವ ಪಾಲಿಸುವ) ಪ್ರತ್ಯೇಕ ಧರ್ಮ ಘೋಷಣೆ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಕಾನೂನು ಇಲಾಖೆಯ ಅಭಿಪ್ರಾಯ ಪಡೆದಿದೆ.
ಕಳೆದ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡಲು ಕೇಂದ್ರ
ಸರ್ಕಾರಕ್ಕೆ ಶಿಫಾರಸು ಮಾಡಲು ತೀರ್ಮಾನ ಮಾಡಲಾಗಿತ್ತು. ಅದರಲ್ಲಿ ಲಿಂಗಾಯತದ ಜೊತೆಗೆ ಬಸವ ತತ್ವ ಪಾಲಿಸುವ
ವೀರಶೈವರನ್ನೂ ಸೇರಿಸಲಾಗಿತ್ತು. ಆ ರೀತಿಯ ತೀರ್ಮಾನದಿಂದ ಕಾನೂನಿನ ತೊಡಕು ಉಂಟಾಗುತ್ತಾ? ಎನ್ನುವ ಕುರಿತಂತೆ ಕಾನೂನು ಇಲಾಖೆಯ ಅಭಿಪ್ರಾಯಕ್ಕೆ ಕಳುಹಿಸಿ ಕೊಡಲಾಗಿತ್ತು. ಕಾನೂನು ಇಲಾಖೆ ಗುರುವಾರ ತನ್ನ ಅಭಿಪ್ರಾಯ ತಿಳಿಸಿದ್ದು, ಶುಕ್ರವಾರದ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
ಪಾಸ್ವಾನ್ ವಿರೋಧ: ಕರ್ನಾಟಕದಲ್ಲಿ ಲಿಂಗಾಯತ-ವೀರಶೈವ ಸಮುದಾಯಕ್ಕೆ ಪ್ರತ್ಯೇಕ ಧರ್ಮ ಎಂಬ ಮಾನ್ಯತೆ ನೀಡುವ ಪ್ರಸ್ತಾಪಕ್ಕೆ ಲೋಕಜನಶಕ್ತಿ ಪಕ್ಷ ಒಪ್ಪುವುದಿಲ್ಲ ಎಂದು ಕೇಂದ್ರ ಸಚಿವ ಹಾಗೂ ಪಕ್ಷದ ಅಧ್ಯಕ್ಷ ರಾಮ್ ವಿಲಾಸ್ ಪಾಸ್ವಾನ್ ನವದೆಹಲಿಯಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
MUST WATCH
ಹೊಸ ಸೇರ್ಪಡೆ
T20 series: ಪಾಕಿಸ್ಥಾನಕ್ಕೆ ವೈಟ್ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.