ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ
Team Udayavani, Mar 23, 2018, 6:00 AM IST
ಬೆಂಗಳೂರು : ಪ್ರಸ್ತಕ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಶುಕ್ರವಾರದಿಂದ ಆರಂಭಗೊಂಡು ಏಪ್ರಿಲ್ 6ರ ವರೆಗೆ ನಡೆಯಲಿದೆ.
ಪ್ರಥಮ ಭಾಷೆಯ ವಿಷಯಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತ ಭಾಷೆಯ ಪರೀಕ್ಷೆ ಮೊದಲ ದಿನ ನಡೆಯಲಿದೆ. ಪ್ರತಿದಿನ ಬೆಳಗ್ಗೆ 9.30ಕ್ಕೆ ಆರಂಭವಾಗುವ ಪರೀಕ್ಷೆ 12.30ಕ್ಕೆ ಮುಗಿಯಲಿದೆ. ಮಧ್ಯಾಹ್ನದ ಪರೀಕ್ಷೆ 2ಕ್ಕೆ ಆರಂಭವಾಗಿ 5.15ಕ್ಕೆ ಮುಗಿಯಲಿದೆ.
ರಾಜ್ಯದ 2,817 ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಗೆ 8,54,424 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 2,706 ವಿಕಲಚೇತನ ಅಭ್ಯರ್ಥಿಗಳು ಸೇರಿದ್ದಾರೆ. ಅಂಧರು, ಬುದ್ಧಿಮಾಂಧ್ಯರು, ದೈಹಿಕ ಮತ್ತು ಮಾನಸಿಕವಾಗಿ ವಿಕಲಚೇತನರಾಗಿರುವ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿಕಲಚೇತನ ಅಭ್ಯರ್ಥಿಗಳ ಕೋರಿಕೆ ಮತ್ತು ವೈದ್ಯಕೀಯ ಪ್ರಮಾಣ ಪತ್ರದಂತೆ ವಿಶೇಷ ವ್ಯವಸ್ಥೆಯನ್ನು ಮಾಡಲಾಗುತ್ತದೆ.
ರಾಜ್ಯದ 14,385 ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಲಿದ್ದು, 1,011 ಕ್ಲಸ್ಟರ್ ಹಾಗೂ 1807 ನಾನ್ ಕ್ಲಸ್ಟರ್ ಕೇಂದ್ರ ರಚಿಸಿದ್ದು, ಪರೀಕ್ಷಾ ಕೇಂದ್ರಗಳ ಪೈಕಿ 45 ಸೂಕ್ಷ್ಮ ಮತ್ತು 23 ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ 2817 ಪರೀಕ್ಷಾ ಕೇಂದ್ರಗಳಿಗೂ ಸಿಸಿಟಿವಿ ಅಳವಡಿಸಲಾಗಿದೆ ಎಂದು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಳಾ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kundapura: ಹೆಮ್ಮಾಡಿ; 4 ರಸ್ತೆ ಸೇರುವಲ್ಲಿ ಒಂದೂ ತಂಗುದಾಣವಿಲ್ಲ!
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.