ದ್ವಿತೀಯ ಪಿಯುಸಿ ಭೌತಶಾಸ್ತ್ರಕ್ಕೆ 6, ಇಂಗ್ಲಿಷ್ಗೆ 3 ಕೃಪಾಂಕ
Team Udayavani, Mar 23, 2018, 6:15 AM IST
ಬೆಂಗಳೂರು :ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಯ ಭೌತಶಾಸ್ತ್ರದ ಗೊಂದಲಮಯ ಪ್ರಶ್ನೆಗೆ 5+1 ಹಾಗೂ ಇಂಗ್ಲಿಷ್ನ ಗೊಂದಲಮಯ ಪ್ರಶ್ನೆಗೆ 3 ಕೃಪಾಂಕ ನೀಡಲು ತಜ್ಞರ ಸಮಿತಿ ಮಾಡಿರುವ ಶಿಫಾರಸಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಒಪ್ಪಿಗೆ ಸೂಚಿಸಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಪರೀಕ್ಷಾ ತಿದ್ದುಪಡಿ ಕಾಯ್ದೆ 2017ರ ನಿಯಮ 22(ಬಿ), ಉಪನಿಯಮ (2) ರಂತೆ ತಜ್ಞರ ಸಮಿತಿಯ ಶಿಫಾರಸಿಗೆ ಅನುಗುಣವಾಗಿ ಕೃಪಾಂಕ ನೀಡಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರು ಮಂಗಳವಾರ ತಿಳಿಸಿದ್ದರು. ಆದರೆ, ಎಷ್ಟು ಕೃಪಾಂಕ ನೀಡಬೇಕು ಎಂಬುದನ್ನು ಸ್ಪಷ್ಟವಾಗಿ ಸೂಚಿಸಿರಲಿಲ್ಲ. ವಿಷಯ ತಜ್ಞರ ಸಮಿತಿಯು ನೀಡಿರುವ ಶಿಫಾರಸಿನಂತೆ ಆಂಗ್ಲ ಭಾಷೆಯ ಒಂದು ಅಂಕದ ಮೂರು ಕಡ್ಡಾಯ ಪ್ರಶ್ನೆಗೆ ತಲಾ ಒಂದೊಂದು ಅಂಕದಂತೆ 3 ಕೃಪಾಂಕ ಹಾಗೂ ಭೌತಶಾಸ್ತ್ರ ವಿಷಯಕ್ಕೆ 5+1 ಕೃಪಾಂಕ ನೀಡಲು ಇಲಾಖೆ ನಿರ್ಧರಿಸಿದೆ ಎಂದು ನಿರ್ದೇಶಕಿ ಸಿ.ಶಿಖಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೌಲ್ಯಮಾಪಕರು ಮಾದರಿ ಉತ್ತರ ಪತ್ರಿಕೆಯಂತೆ ಮೌಲ್ಯಮಾಪನ ಮಾಡಲಿದ್ದಾರೆ. ಇಲಾಖೆ ಸೂಚಿಸಿರುವ ವಿಷಯ ಮತ್ತು ಪ್ರಶ್ನೆ ಹೊರತುಪಡಿಸಿ ಬೇರೆ ಯಾವುದಕ್ಕೂ ಕೃಪಾಂಕ ನೀಡದಂತೆ ಎಲ್ಲಾ ಮೌಲ್ಯಮಾಪಕರಿಗೂ ಸೂಚಿಸಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.