ಜಯಾ ಆಸ್ಪತ್ರೆಯಲ್ಲಿದ್ದ 75 ದಿನವೂ ಸಿಸಿಟಿವಿ ಸ್ವಿಚ್ಡ್ ಆಫ್
Team Udayavani, Mar 23, 2018, 9:35 AM IST
ಚೆನ್ನೈ: ತೀವ್ರ ಅನಾರೋಗ್ಯದಿಂದ 2016ರಲ್ಲಿ ನಿಧನರಾದ ತಮಿಳುನಾಡಿನ ಅಂದಿನ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 75 ದಿನಗಳ ಕಾಲವೂ ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾಗಳನ್ನು ಸ್ವಿಚ್ ಆಫ್ ಮಾಡಲಾಗಿತ್ತು. ಹೀಗೆಂದು ಅಪೋಲೋ ಆಸ್ಪತ್ರೆಯ ಸ್ಥಾಪಕ ಡಾ| ಪ್ರತಾಪ್ ರೆಡ್ಡಿ ಗುರುವಾರ ತಿಳಿಸಿದ್ದಾರೆ. ಜಯಾ ಅವರು ಚಿಕಿತ್ಸೆ ಪಡೆಯುತ್ತಿದ್ದಾಗಿನ ವಿಡಿಯೋವೊಂದು ಬಹಿರಂಗವಾದ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿದೆ.
ಜಯಾ ಚಿಕಿತ್ಸೆ ವೇಳೆ ಸಿಸಿಟಿವಿ ಕೆಮರಾಗಳನ್ನು ಸ್ವಿಚ್ ಆಫ್ ಮಾಡಿದ್ದೆವು. ಅವರನ್ನು ಸಾರ್ವಜನಿಕರೆಲ್ಲರೂ ನೋಡುವುದು ಬೇಡ ಎಂಬುದು ಇದರ ಉದ್ದೇಶವಾಗಿತ್ತು. ಜತೆಗೆ, ತುರ್ತುನಿಗಾ ಘಟಕದಲ್ಲಿದ್ದ ಇತರ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಿದ್ದೆವು. ಆ ಮೂಲಕ ಜಯಾ ಅವರಷ್ಟೇ ಆ ಐಸಿಯುನಲ್ಲಿ ಇರುವಂತೆ ನೋಡಿಕೊಳ್ಳಲಾಯಿತು ಎಂದೂ ರೆಡ್ಡಿ ತಿಳಿಸಿದ್ದಾರೆ. ನಾವು ಜಯಲಲಿತಾರನ್ನು ಉಳಿಸಲು ನಮ್ಮಿಂದ ಸಾಧ್ಯವಾದ ಎಲ್ಲಾ ಪ್ರಯತ್ನಗಳನ್ನೂ ಮಾಡಿದ್ದೇವೆ. ಅವರೂ ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸುತ್ತಿದ್ದರು. ಆದರೆ ಅನಿರೀಕ್ಷಿತವಾಗಿ ತೀವ್ರ ಹೃದಯಾಘಾತದಿಂದ ಅವರು ನಿಧನ ಹೊಂದಿದರು ಎಂದಿದ್ದಾರೆ ರೆಡ್ಡಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.