ಕಲಾಕ್ಷೇತ್ರದ ಒಡನಾಟ ಮೆಲುಕು ಹಾಕಿದ ಉಮಾಶ್ರೀ

Team Udayavani, Mar 23, 2018, 11:49 AM IST

kalakhetra.jpg

ಬೆಂಗಳೂರು: ಕಲಾ ಸೇವೆಯ ಆರಂಭದ ದಿನಗಳವು. ಆಗ ನಿತ್ಯ ಕಲಾಕ್ಷೇತ್ರಕ್ಕೆ ಬಂದುಹೋಗುವುದು ರೂಢಿಯಾಗಿತ್ತು. ಇಲ್ಲಿನ ಕ್ಯಾಂಟೀನ್‌ನಲ್ಲಿ ಟೀ-ಬನ್ನು ತಿಂದು, ಇದೇ ಆವರಣದಲ್ಲಿರುವ ವೇದಿಕೆಯಲ್ಲಿ ಕಲಾ ಅಭ್ಯಾಸದಲ್ಲಿ ತೊಡಗಿಕೊಳ್ಳುತ್ತಿದ್ದೆವು. ಒಂದೇ ಒಂದು ದಿನ ಇಲ್ಲಿಗೆ ಭೇಟಿ ನೀಡದಿದ್ದರೂ ಅನಾಥ ಪ್ರಜ್ಞೆ ಕಾಡುತ್ತಿತ್ತು ಎಂದು ನಟಿ, ಸಚಿವೆ ಉಮಾಶ್ರೀ ನೆನಪಿನ ಬುತ್ತಿ ಬಿಚ್ಚಿಟ್ಟರು.

– ಹೀಗೆ ನೆನಪಿನ ಬುತ್ತಿ ಬಿಚ್ಚಿಟ್ಟವರು ನಟಿ ಉಮಾಶ್ರೀ. ದಶಕಗಳ ಹಿಂದೆ ತಮ್ಮ ಕಲಾ ಸೇವೆಗೆ ವೇದಿಕೆಯಾಗಿದ್ದ ರವೀಂದ್ರ ಕಲಾಕ್ಷೇತ್ರದ ಸುವರ್ಣ ಸಂಭ್ರಮದಲ್ಲಿ ಗುರುವಾರ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಕಲಾಕ್ಷೇತ್ರದಲ್ಲಿನ ಕಳೆದ ಕ್ಷಣಗಳನ್ನು ಮೆಲುಕು ಹಾಕಿದರು. 

ಪ್ರತಿಯೊಬ್ಬ ಕಲಾವಿದನೂ ರವೀಂದ್ರ ಕಲಾಕ್ಷೇತ್ರದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಕಲಾಕ್ಷೇತ್ರಕ್ಕೆ ನಿತ್ಯ ಭೇಟಿ ನೀಡದಿದ್ದರೆ ಅನಾಥ ಭಾವ ನಮ್ಮನ್ನು ಕಾಡುತ್ತಿತ್ತು. ಇಲ್ಲಿನ ಕ್ಯಾಂಟೀನ್‌ನಲ್ಲಿ ಟೀ, ಬನ್ನು ದೊರೆಯುತ್ತಿತ್ತು. ಪ್ರಸ್ತುತ ಅನೇಕ ಬದಲಾವಣೆಗಳಾಗಿವೆ. ಈ ವೇದಿಕೆಯೊಂದಿಗಿನ ಒಡನಾಟ ಮರೆಯಲು ಸಾಧ್ಯವೇ ಇಲ್ಲ ಎಂದರು.

ರವೀಂದ್ರ ಕಲಾಕ್ಷೇತ್ರವು ಬೆಂಗಳೂರಿನಲ್ಲಿದೆ ಎಂಬ ಕಾರಣಕ್ಕೆ ಹೆಚ್ಚಿನ ಮಾನ್ಯತೆ ನೀಡಲಾಗುತ್ತಿದೆ ಎನ್ನುವುದು ಸರಿ ಅಲ್ಲ. ಈ ಕಲಾಕ್ಷೇತ್ರ ಕಲಾವಿದರ ಜೀವನಾಡಿಯಾಗಿದ್ದು, ಭಾವನಾತ್ಮಕ ಸಂಬಂಧ ಹೊಂದಿದೆ. ರವೀಂದ್ರ ಕಲಾಕ್ಷೇತ್ರದಿಂದ ಕಲಾಸೇವೆ ಆರಂಭಿಸಿದ ಅನೇಕರು ಪ್ರಸ್ತುತ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲೂ ಖ್ಯಾತಿ ಗಳಿಸಿದ್ದಾರೆ. ಈ ವೇದಿಕೆ ಕಲಾ ಜೀವನಕ್ಕೆ ಮಾರ್ಗದರ್ಶಕವಾಗಿದೆ. ಇದು ರಾಜ್ಯಕ್ಕೆ ಕಲಾಕ್ಷೇತ್ರದ ಕೊಡುಗೆ ಎಂದು ಶ್ಲಾಘಿಸಿದರು. 

ಹವ್ಯಾಸಕ್ಕೆಂದು ಬಂದವರೂ ಕಲೆಯನ್ನು ಜೀವನೋಪಾಯಕ್ಕಾಗಿ ಆರಂಭಿಸಿ, ಅದರಲ್ಲಿ ಆಸ್ಮಿತೆ ಕಾಪಾಡಿಕೊಳ್ಳುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಪ್ರಯೋಗಗಳಿಗೆ ತೆರೆದುಕೊಳ್ಳುತ್ತಾ, ಗುಣಮಟ್ಟದ ವಿಚಾರದಲ್ಲಿ ಎಂದಿಗೂ ರಾಜಿಯಾಗದೆ ಯಶಸ್ಸು ಸಾಧಿಸಬೇಕು ಎಂದು ಸಲಹೆ ನೀಡಿದರು.

ಅರಳಿದ ಆಕರ್ಷಕ ಪ್ರತಿಮೆ: ಇದೇ ವೇಳೆ ಶಿಲ್ಪವನದಲ್ಲಿ ನೂತನವಾಗಿ ನಿರ್ಮಿಸಿರುವ 15 ಅಡಿ ಎತ್ತರದ ಕವಿ ರವೀಂದ್ರನಾಥ ಟ್ಯಾಗೋರ್‌ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ಕಲಾಕ್ಷೇತ್ರಕ್ಕೆ ರವೀಂದ್ರನಾಥ ಟ್ಯಾಗೋರ್‌ ಅವರ ಹೆಸರಿಟ್ಟಿರುವುದರ ಹಿಂದೆ ಅದರದೇ ಆದ ಇತಿಹಾಸವಿದೆ. ಟ್ಯಾಗೋರ್‌ ಅವರ ಬೃಹತ್‌ ಪ್ರತಿಮೆ ನಿರ್ಮಾಣ ಕ್ಲಿಷ್ಟಕರ ಎನ್ನಲಾಗಿತ್ತು.

ಆದರೆ ಶಿಲ್ಪಿಗಳಾದ ವೆಂಕಟಾಚಲಪತಿ, ಎಲ್‌.ನರಸಿಂಹ ಮತ್ತು ಬಿ.ಸಿ.ಶಿವಕುಮಾರ್‌ ಕೈಯಿಂದ ಬಹಳ ಆಕರ್ಷಕವಾದ ಪ್ರತಿಮೆ ಅರಳಿದೆ ಎಂದು ಹೇಳಿದರು. ಇಲಾಖೆ ನಿರ್ದೇಶಕ ಎನ್‌.ಆರ್‌. ವಿಶುಕುಮಾರ್‌, ರಂಗಕರ್ಮಿ ಕೆ.ಎನ್‌.ನಾಗರಾಜ ಮೂರ್ತಿ, ರವೀಂದ್ರ ಕಲಾಕ್ಷೇತ್ರ ಸುವರ್ಣ ಸಂಭ್ರಮ ಸಮಿತಿ ಅಧ್ಯಕ್ಷ ಶ್ರೀನಿವಾಸ ಜಿ.ಕಪ್ಪಣ್ಣ, ಸದಸ್ಯ ಕಾರ್ಯದರ್ಶಿ ಅಶೋಕ ಎನ್‌. ಚಲವಾದಿ ಮತ್ತಿತರರಿದ್ದರು.

ಟಾಪ್ ನ್ಯೂಸ್

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Bowler-Siraj

IPL Auction: ಗುಜರಾತ್‌ ಟೈಟಾನ್ಸ್‌ ಪಾಲಾದ ಸಿರಾಜ್‌; ಆರ್‌ಸಿಬಿಗೆ ಹೃದಯಸ್ಪರ್ಶಿ ಸಂದೇಶ

sambit-patra

EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

court

Kasaragod: 300 ಪವನ್‌ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Bowler-Siraj

IPL Auction: ಗುಜರಾತ್‌ ಟೈಟಾನ್ಸ್‌ ಪಾಲಾದ ಸಿರಾಜ್‌; ಆರ್‌ಸಿಬಿಗೆ ಹೃದಯಸ್ಪರ್ಶಿ ಸಂದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.