ಇಂದಿನಿಂದ ಎಸ್ಸೆಸೆಲ್ಸಿ ಪರೀಕ್ಷೆ: 40 ಸಾವಿರ ಪರೀಕ್ಷಾರ್ಥಿಗಳು
Team Udayavani, Mar 23, 2018, 12:23 PM IST
ಮೈಸೂರು: ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಪ್ರಮುಖ ಘಟ್ಟ ಹಾಗೂ ಜಿಲ್ಲೆಯ ಶೈಕ್ಷಣಿಕ ಪ್ರಗತಿಯನ್ನು ಬಿಂಬಿಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶುಕ್ರವಾರದಿಂದ ಆರಂಭವಾಗಲಿದ್ದು, ಜಿಲ್ಲೆಯಲ್ಲಿ 40,516 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.
ಪರೀಕ್ಷೆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದು, ಈ ಬಾರಿ ಪರೀಕ್ಷೆಗೆ ಹಾಜರಾಗುತ್ತಿರುವ 40,516 ವಿದ್ಯಾರ್ಥಿಗಳಲ್ಲಿ 19,289 ಬಾಲಕರು ಹಾಗೂ 21,227 ಬಾಲಕಿಯರಿದ್ದಾರೆ. ಅಲ್ಲದೆ 3,278 ಪುನರಾವರ್ತಿತ ಹಾಗೂ 1090 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆಯ ಮೊದಲ ದಿನವಾದ ಶುಕ್ರವಾರ ಬೆಳಗ್ಗೆ 9.30ರಿಂದ 12.30ರವರೆಗೆ ಪ್ರಥಮ ಭಾಷೆಯ ಪರೀಕ್ಷೆಗಳು ನಡೆಯಲಿದೆ. ಜಿಲ್ಲೆಯ 186 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ನಗರದಲ್ಲಿ 51 ಹಾಗೂ ಏಳು ತಾಲೂಕಿನಿಂದ 135 ಸೇರಿದಂತೆ ಒಟ್ಟು 186 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ನಗರದ ಮರಿಮಲ್ಲಪ್ಪ, ಸದ್ವಿದ್ಯಾ, ಮಹಾರಾಣಿ, ಮಹಾರಾಜ, ಮಹಾಜನ, ಜೆಎಸ್‌ಎಸ್, ಸೇಂಟ್ ಫಿಲೋಮಿನಾ, ಸಂತ ತೆರೇಸಾ ಸೇರಿದಂತೆ 51 ಪರೀಕ್ಷಾ ಕೇಂದ್ರಗಳಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲೆಯ ಆಯ್ದ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮಗಳು ನಡೆಯದಂತೆ ಹಾಗೂ ಪಾರದರ್ಶಕತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.