ಎಂಆರ್ಪಿಎಲ್: ಭೂ ಸ್ವಾಧೀನ ವಿರೋಧಿಸಿ ಪ್ರತಿಭಟನೆ
Team Udayavani, Mar 23, 2018, 3:04 PM IST
ಗಣೇಶ್ಪುರ : ಎಂಆರ್ ಪಿಎಲ್ ಸಂಸ್ಥೆಯು ಈ ಹಿಂದೆ ಪಾಲಿಸಬೇಕಿದ್ದ ನ್ಯಾಯಯುತ ಬೇಡಿಕೆಗಳನ್ನು ಪರಿಗಣಿಸದೆ ಮತ್ತೆ ಸಾವಿರ ಎಕ್ರೆಯಷ್ಟು ಭೂಮಿ ಸ್ವಾಧೀನಕ್ಕೆ ಹೊರಟಿರುವುದನ್ನು ವಿರೋಧಿಸಿ ನಾಗರಿಕ ಹೋರಾಟ ಸಮಿತಿ ಜೋಕಟ್ಟೆ ಹಾಗೂ ಎಂಆರ್ಪಿಎಲ್ ವಿಸ್ತರಣೆ ವಿರೋಧಿ ಸಮಿತಿ ಎಂಆರ್ ಪಿಎಲ್ ಕಾರ್ಗೊಗೇಟ್ ಮುಂಭಾಗ ಗುರುವಾರ ಹಗಲು ರಾತ್ರಿ ಪ್ರತಿಭಟನೆ ಆಯೋಜಿಸಿತ್ತು.
ಪ್ರತಿಭಟನೆಯಲ್ಲಿ ಮಾತನಾಡಿದ ಹೋರಾಟ ಸಮಿತಿಯ ಮುನೀರ್ ಮಾತನಾಡಿ, ಜೋಕಟ್ಟೆ ಭಾಗದಲ್ಲಿ ಮಾಲಿನ್ಯದಿಂದ ತಿನ್ನುವ ಅನ್ನದಿಂದ ಹಿಡಿದು ಕುಡಿಯುವ ನೀರಿನವರೆಗೆ ಮುಟ್ಟದಂತಾಗಿದೆ. ಸ್ಥಳೀಯರಿಗೆ ಉದ್ಯೋಗ ನೀಡದೆ ಸತಾಯಿಸಲಾಗುತ್ತಿದೆ. ವಿಷಾನಿಲ ಸೇವನೆಯಿಂದ ಆರೋಗ್ಯ ಸ್ಥಿತಿ ಹದಗೆಡುತ್ತಿದೆ, ಇದರ ನಡುವೆ ಕೃಷಿಕರಿಗೆ ಸರಿಯಾದ ಮಾಹಿತಿ ನೀಡದೆ ಮತ್ತೆ ಭೂ ಕಬಳಿಕೆ ಮಾಡಲು ಸಂಸ್ಥೆ ಹೊರಟಿರುವುದು ಸರಿಯಲ್ಲ ಎಂದರು.
ಆದೇಶ ಜಾರಿಗೆ ತರಲಿ
ಮೊದಲು ಜೋಕಟ್ಟೆ, ಕಳವಾರು ಪ್ರದೇಶದ ಜನತೆಯ ಸಮಸ್ಯೆ ಬಗೆ ಹರಿಸಲು ಸರಕಾರ ನೀಡಿರುವ ಆದೇಶವನ್ನು ಜಾರಿಗೆ ತರಲಿ. ಅಲ್ಲಿಯವರೆಗೂ ಬೇರೆ ಭೂ ಸ್ವಾಧೀನಕ್ಕೆ ಸಮಿತಿ ಅವಕಾಶ ನೀಡುವುದಿಲ್ಲ ನಿರಂತರ ಹೋರಾಟ ನಡೆಸಲಿದೆ ಎಂದು ತಿಳಿಸಿದರು. ಹೋರಾಟ ಸಮಿತಿ ಮುಖಂಡರಾದ ಇಮ್ತಿಯಾಝ್, ಅಬೂಬಕರ್ ಬಾವಾ, ಸುಲೋಚನಾ, ಶೇಖರ್, ಭವಾನಿ, ಯಮುನಕ್ಕಾ, ಆಮಿನಮ್ಮ, ಅಜ್ಮಲ್ ಅಹ್ಮದ್, ಶ್ರೀನಾಥ್ ಕುಲಾಲ್, ಎಂ.ಡಿ. ಇಸ್ಮಾಯಿಲ್, ಇಕ್ಬಾಲ್ ಮತ್ತಿತರರು
ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.