ಡಾ| ಮೀನಾಕ್ಷೀ,ಡಾ| ಜಿ.ಪಿ.ಕುಸುಮಾರಿಗೆ ಮೊಗವೀರ ಸಾಧನಾ ಪ್ರಶಸ್ತಿ
Team Udayavani, Mar 23, 2018, 4:44 PM IST
ಮುಂಬಯಿ: ದಕ್ಷಿಣ ಕನ್ನಡ ಜಿಲ್ಲೆಯ ಮೊಗವೀರ ಯುವ ವೇದಿಕೆಯ ವಾರ್ಷಿಕ ಮೊಗವೀರ ಸಾಧನಾ ಪ್ರಶಸ್ತಿಗೆ ಸಾಂಸ್ಕೃತಿಕ ಕ್ಷೇತ್ರದ ಸಾಧಕಿ, ಅರುಣೋದಯ ಕಲಾನಿಕೇತನ ಮುಂಬಯಿ ಇದರ ನೃತ್ಯ ಗುರು, ನಿರ್ದೇಶಕಿ ಡಾ| ಮೀನಾಕ್ಷೀ ರಾಜು ಶ್ರೀಯಾನ್ ಮತ್ತು ಸಾಹಿತ್ಯ ಕ್ಷೇತ್ರದ ಸಾಧಕಿ ಡಾ| ಜಿ. ಪಿ. ಕುಸುಮಾ ಇವರು ಆಯ್ಕೆಯಾಗಿದ್ದು, ಮಾ. 11 ರಂದು ಸಂಜೆ ಬಂಟರ ಭವನ ಸುರತ್ಕಲ್ ಇಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಪ್ರದಾನಿಸಿ ಶುಭ ಹಾರೈಸಲಾಯಿತು.
ಅದೇ ರೀತಿ ಕ್ರೀಡಾ ಕ್ಷೇತ್ರದ ಸಾಧಕ ಕಮಲಾಕ್ಷ ಅಮೀನ್ ಬೋಳಾರ, ವೈದ್ಯಕೀಯ ಕ್ಷೇತ್ರದಲ್ಲಿ ಡಾ| ಭರತ್‌ರಾಜ್ ಬೊಕ್ಕಪಟ್ಣ ಹಾಗೂ ಮೀನುಗಾರಿಕಾ ಕ್ಷೇತ್ರದ ಸಾಧಕ ರಘುನಾಥ್ ಎಸ್. ಪುತ್ರನ್ ಇವರಿಗೂ ಪ್ರಶಸ್ತಿಯನ್ನು ಪ್ರದಾನಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಮೊಗವೀರ ಯುವ ವೇದಿಕೆಯ ವತಿಯಿಂದ ಮೊಗವೀರ ಕುಲಗುರು ಮಾಧವ ಮಂಗಳ ಪೂಜರಾರ ಸವಿನೆನಪಿಗಾಗಿ ಮೊಗವೀರ ಸಾಧನಾ ಪ್ರಶಸ್ತಿಯನ್ನು ಪ್ರತೀ ವರ್ಷ ನೀಡಲಾಗುತ್ತದೆ.
ನಗರದ ಪ್ರತಿಷ್ಠಿತ ಅರುಣೋದಯ ಕಲಾನಿಕೇತನದ ನೃತ್ಯ ಗುರು, ನಿರ್ದೇಶಕಿ ಡಾ| ಮೀನಾಕ್ಷೀ ರಾಜು ಶ್ರೀಯಾನ್ ಇವರದ್ದು ಅಪ್ರತಿಮ ಪ್ರತಿಭೆ. ನಾಟ್ಯವನ್ನೇ ಉಸಿರಾಗಿಸಿಕೊಂಡು ಕಳೆದ ಐದು ದಶಕಗಳ ಹಿಂದೆ ಸ್ಥಾಪನೆಗೊಂಡ ಸಂಸ್ಥೆಯನ್ನು ಇಂದಿಗೂ ಅಚ್ಚುಕಟ್ಟಾಗಿ ಮುನ್ನಡೆಸುತ್ತಿರುವ ಮೀನಾಕ್ಷೀ ರಾಜು ಶ್ರೀಯಾನ್ ಇವರು ಸಾವಿರಾರು ಮಕ್ಕಳಿಗೆ ಜಾತಿ, ಮತ, ಬೇಧವನ್ನು ಮರೆತು ಭರತನಾಟ್ಯ ಹಾಗೂ ಇನ್ನಿತರ ನೃತ್ಯ ಪ್ರಕಾರಗಳನ್ನು ಧಾರೆ ಎರೆಯುತ್ತಿದ್ದಾರೆ. ಮುಂಬಯಿ ಸೇರಿದಂತೆ ಇನ್ನಿತರ ಉಪನಗರಗಳಲ್ಲಿ ಶಾಖೆಗಳನ್ನು ಹೊಂದಿರುವುದಲ್ಲದೆ, ಪ್ರತೀ ವರ್ಷ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳಿಗೆ ವೇದಿಕೆಯನ್ನು ಕಲ್ಪಿಸಿಕೊಡುತ್ತಿದ್ದಾರೆ. ಇವರ ಹಲವಾರು ಶಿಷ್ಯೆಯಂದಿರು ವಿದೇಶದಲ್ಲಿ ನೆಲೆಸಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಭರತನಾಟ್ಯವನ್ನು ವಿದೇಶಿಯರಿಗೆ ಕಲಿಸಿಕೊಡುತ್ತಿದ್ದಾರೆ. ದೇಶದ ವಿವಿಧ ರಾಜ್ಯಗಳು ಸೇರಿದಂತೆ ವಿದೇಶಿ ನೆಲದಲ್ಲೂ ನೃತ್ಯ ರೂಪಕ ಸೇರಿದಂತೆ ವೈವಿಧ್ಯಮಯ ನೃತ್ಯ ಪ್ರಕಾರಗಳನ್ನು ಪ್ರದರ್ಶಿಸಿದ ಹೆಗ್ಗಳಿಕೆ ಡಾ| ಮೀನಾಕ್ಷೀ ರಾಜು ಶ್ರೀಯಾನ್ ಇವರದ್ದಾಗಿದೆ. ಮೀನಾಕ್ಷೀ ರಾಜು ಶ್ರೀಯಾನ್ ಇವರು ಉತ್ತಮ ಸಂಘಟಕಿಯಾಗಿಯೂ ಹೆಸರು ಮಾಡಿದವರು. ಅವರ ಸಿದ್ಧಿ-ಸಾಧನೆಗಳಿಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳಲ್ಲದೆ, ವಿವಿಧ ಜಾತಿಯ, ತುಳು-ಕನ್ನಡಪರ ಸಂಘಟನೆ ಗಳ ಸಮ್ಮಾನ-ಪುರಸ್ಕಾರಗಳು ಲಭಿಸಿವೆ.
ಮುಂಬಯಿ ವಿಶ್ವವಿದ್ಯಾಲಯದ ಎಂ.ಎ, ಎಂ.ಫಿಲ್, ಪಿಎಚ್.ಡಿ ಪದವಿ ಪಡೆದಿರುವ ಜಿ. ಪಿ. ಕುಸುಮಾ ಅವರು ಕವಯತ್ರಿ, ಲೇಖಕಿ, ಅನುವಾದಕಿ, ರಂಗನಟಿಯಾಗಿ ಮುಂಬಯಿ ಕನ್ನಡಿಗರ ಸಾಂಸ್ಕೃತಿಕ ಬದುಕಿನಲ್ಲಿ ಹಾಸುಹೊಕ್ಕಾಗಿದ್ದಾರೆ. ತುಳು-ಕನ್ನಡ ಎರಡೂ ಭಾಷೆಯಲ್ಲಿ ಸಾಹಿತ್ಯ ಕೃಷಿ ಮಾಡುತ್ತಿರುವ ಇವರು ಮುಂಬಯಿಯ ಸಿಟಿ ಸಿವಿಲ್ ಮತ್ತು ಸೆಶನ್ ಕೋರ್ಟಿನಲ್ಲಿ ಉದ್ಯೋಗಿಯಾಗಿದ್ದಾರೆ. ಅಖೀಲ ಭಾರತ ಸಾಹಿತ್ಯ ಸಮ್ಮೇಳನವೂ ಸೇರಿದಂತೆ ಅನೇಕ ಸಂಘ-ಸಂಸ್ಥೆಗಳಲ್ಲಿ ತಮ್ಮ ಕವನ ಮತ್ತು ಪ್ರಬಂಧ ಮಂಡನೆಯನ್ನು ಮಾಡಿದ್ದಾರೆ. ಹಲವಾರು ಪ್ರಶಸ್ತಿ, ಪ್ರತಿಭಾ ಪುರಸ್ಕಾರಗಳನ್ನು ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.