ದಂತ ವೈದ್ಯಕೀಯ ಕ್ಷೇತ್ರದಲ್ಲಿ ವಿಪುಲ ಅವಕಾಶ: ಪ್ರೊ| ಕ್ರಿಸ್‌ ಲೂಕಾ


Team Udayavani, Mar 24, 2018, 9:40 AM IST

Dental-23-3.jpg

ಮಂಗಳೂರು: ಆರೋಗ್ಯ ಸೇವಾ ಕ್ಷೇತ್ರದಲ್ಲಿ ದಂತ ವೈದ್ಯಕೀಯ ವಿಭಾಗವು ಮಹತ್ತರ ಸ್ಥಾನವನ್ನು ಹೊಂದಿದ್ದು, ಇಲ್ಲಿರುವ ವಿಪುಲ ಅವಕಾಶಗಳನ್ನು ಸಮರ್ಪಕವಾಗಿ ದಂತ ವೈದ್ಯರು ಬಳಸಿಕೊಳ್ಳಬೇಕು ಎಂದು ಇಂಗ್ಲೆಂಡ್‌ನ‌ ಯುನಿವರ್ಸಿಟಿ ಆಫ್‌ ಪೋರ್ಟ್ಸ್ಮೌತ್‌ ಡೆಂಟಲ್‌ ಆಕಾಡೆಮಿಯ ನಿರ್ದೇಶಕ ಪ್ರೊ| ಕ್ರಿಸ್‌ ಲೂಕಾ ಅವರು ಹೇಳಿದರು.

ನಗರದ ಡಾ| ಟಿ.ಎಂ.ಎ. ಪೈ ಇಂಟರ್‌ನ್ಯಾಶನಲ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ಶುಕ್ರವಾರ ಜರಗಿದ ಮಂಗಳೂರಿನ ಮಣಿಪಾಲ ದಂತ ವೈದ್ಯಕೀಯ ಕಾಲೇಜಿನ (ಎಂಕೋಡ್ಸ್‌) ವಾರ್ಷಿಕ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ಕ್ಷೇತ್ರದಲ್ಲೂ ಉನ್ನತ ಸಾಧನೆಗಳಿಗೆ ಅವಕಾಶಗಳಿವೆ. ಅದೇ ರೀತಿ ದಂತ ವೈದ್ಯಕೀಯ ಕ್ಷೇತ್ರದಲ್ಲೂ ಕೂಡ ಇವೆ. ಪ್ರತಿ ರೋಗಿಗೂ ನೀಡುವ ಚಿಕಿತ್ಸೆ ಹೊಸ ಹೊಸ ವಿಚಾರಗಳನ್ನು ತಿಳಿಸಿಕೊಡುತ್ತದೆ ಎಂದರು. ಜ್ಞಾನಕ್ಕೆ ಮಿತಿ ಎಂಬುದಿಲ್ಲ. ಪ್ರಸ್ತುತ ಕಾಲಘಟ್ಟದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಆವಿಷ್ಕಾರಗಳು, ಸಂಶೋಧನೆಗಳು ತ್ವರಿತಗತಿಯಲ್ಲಿ ಆಗುತ್ತಿವೆ. ಆದುದರಿಂದ ಜ್ಞಾನದ ಉನ್ನತೀಕರಣ ಅತೀ ಅಗತ್ಯ. ಈ ನಿಟ್ಟಿನಲ್ಲೂ ದಂತ ವೈದ್ಯಕೀಯ ಪದವೀಧರರು ಗಮನ ಹರಿಸಬೇಕು ಎಂದವರು ಹೇಳಿದರು.

ಮಾಹೆ ಸಹ ಉಪಕುಲಪತಿ (ಮಂಗಳೂರು ಕ್ಯಾಂಪಸ್‌) ಡಾ| ವಿ. ಸುರೇಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಹಉಪಕುಲಪತಿ ಡಾ| ಪೂರ್ಣಿಮಾ ಬಾಳಿಗ ಅವರು ಕಾಲೇಜಿನ ಮ್ಯಾಗಸಿನ್‌ ಬಿಡುಗಡೆಗೊಳಿಸಿದರು. ಮಂಗಳೂರಿನ ಮಣಿಪಾಲ ದಂತ ವೈದ್ಯಕೀಯ ಕಾಲೇಜಿನ ಡೀನ್‌ ಡಾ| ದಿಲೀಪ್‌ ನಾೖಕ್‌ ಕಾಲೇಜಿನ ಸಾಧನೆಗಳನ್ನು ವಿವರಿಸಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ಅಸೋಸಿಯೇಟೆಡ್‌ ಡೀನ್‌ ಡಾ| ಆಶಿತಾ ಉಪ್ಪೂರು ಸ್ವಾಗತಿಸಿದರು. ಅಸೋಸಿಯೇಟೆಡ್‌ ಡೀನ್‌ ಡಾ| ಪ್ರೇಮಲತಾ ಶೆಟ್ಟಿ, ವಿದ್ಯಾರ್ಥಿ ನಾಯಕ ಆಯನ್‌ ಉಪಸ್ಥಿತರಿದ್ದರು. ಡಾ| ಆರತಿ ರಾವ್‌ ಮುಖ್ಯಅತಿಥಿಯನ್ನು ಪರಿಚಯಿಸಿದರು. ಡಾ| ನಂದಿತಾ ಹಾಗೂ ಡಾ| ಕಾರ್ತಿಕ್‌ ಶೆಟ್ಟಿ ನಿರೂಪಿಸಿದರು.

ವಿಶ್ವ ಮನ್ನಣೆ
ಮಣಿಪಾಲ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿವೆ. ಮಣಿಪಾಲ ದಂತ ವೈದ್ಯಕೀಯ ಕಾಲೇಜುಗಳು ಪ್ರತಿಷ್ಠಿತ ದಂತ ವೈದ್ಯಕೀಯ ಸಂಸ್ಥೆಗಳಾಗಿ ಮನ್ನಣೆಗೆ ಪಾತ್ರವಾಗಿವೆ. ಅತ್ಯಾಧುನಿಕ ಸೌಲಭ್ಯಗಳು, ಉತ್ತಮ ಬೋಧಕ ವರ್ಗ ಇಲ್ಲಿದೆ ಎಂದು ಪ್ರೊ| ಕ್ರಿಸ್‌ ಲೂಕಾ ಶ್ಲಾಘಿಸಿದರು.

ಟಾಪ್ ನ್ಯೂಸ್

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

6

Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.