ಪೇಜಾವರ ಶ್ರೀ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
Team Udayavani, Mar 24, 2018, 9:00 AM IST
ಉಡುಪಿ/ ಹೂವಿನಹಡಗಲಿ: ತಾಂತ್ರಿಕ ದೋಷ ಕಂಡುಬಂದಿದ್ದರಿಂದ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಶುಕ್ರವಾರ ದಿಢೀರ್ ಭೂಸ್ಪರ್ಶ ಮಾಡಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹೊಳಲು ಗ್ರಾಮದ ಸಾಧನಾ ಶಾಲೆಯ ಮೈದಾನದಲ್ಲಿ ಶುಕ್ರವಾರ ಸಂಜೆ ಹೆಲಿಕಾಪ್ಟರ್ ದಿಢೀರ್ ಭೂಸ್ಪರ್ಶ ಮಾಡಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ.
ಹೊಸಪೇಟೆಯ ಕೊಟ್ಟೂರೇಶ್ವರ ಮಠದ ಡಾ| ಸಂಗನ ಬಸವ ಸ್ವಾಮೀಜಿಗಳು ಆಯೋಜಿಸಿದ್ದ ಸರ್ವಧರ್ಮ ರಥೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪೇಜಾವರ ಶ್ರೀಗಳು ಶುಕ್ರವಾರ ಬೆಳಗ್ಗೆ ಹೊಸಪೇಟೆಗೆ ಆಗಮಿಸಿದ್ದರು. ಪೇಜಾವರ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಉಡುಪಿಯಿಂದ ಇಲ್ಲಿಗೆ ಆಗಮಿಸಲು ವಿಜಯನಗರದ ಮಾಜಿ ಶಾಸಕ ಆನಂದ್ ಸಿಂಗ್ ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಶ್ರೀಗಳು ವಾಪಸ್ ಉಡುಪಿಗೆ ತೆರಳಲು ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಸ್ವಲ್ಪ ದೂರ ಸಾಗಿ ಹೊಳಲು ಗ್ರಾಮ ಸಮೀಪಿಸುತ್ತಿದ್ದಂತೆ ಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದನ್ನು ಅರಿತ ಪೈಲಟ್ ಕೂಡಲೇ ಹತ್ತಿರದ ಸಾಧನಾ ಸನಿವಾಸ ಶಾಲೆಯ ಮೈದಾನದಲ್ಲಿ ಕಾಪ್ಟರ್ ಇಳಿಸುವ ಮೂಲಕ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿಸಿದ್ದಾರೆ. ಶಾಲಾ ಮೈದಾನದಲ್ಲಿ ಹೆಲಿಕಾಪ್ಟರ್ ದಿಢೀರ್ ಇಳಿಯುತ್ತಿದ್ದಂತೆ ಶಾಲಾ ಮುಖ್ಯಸ್ಥರು ಹಾಗೂ ಸಿಬಂದಿ ಮೈದಾನದತ್ತ ಆಗಮಿಸಿದ್ದಾರೆ. ಕಾಪ್ಟರ್ ನಲ್ಲಿ ಶ್ರೀಗಳು ಇರುವುದನ್ನು ಕಂಡು ಯೋಗಕ್ಷೇಮ ವಿಚಾರಿಸಿದರು.
ಒಂದು ಗಂಟೆಗೂ ಹೆಚ್ಚು ಸಮಯ ಮೈದಾನದಲ್ಲಿ ಇದ್ದ ಶ್ರೀಗಳು ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ‘ಇದು ಅನಿರೀಕ್ಷಿತ ಘಟನೆ. ಇದರಿಂದ ಯಾರೂ ಭಯಭೀತರಾಗಬಾರದು. ನಾವು ಆರೋಗ್ಯವಾಗಿದ್ದೇವೆ’ ಎಂದು ಪೇಜಾವರ ಶ್ರೀಗಳು ತಿಳಿಸಿದರು. ಕಾಪ್ಟರ್‌ನಲ್ಲಿ ಕಾಣಿಸಿಕೊಂಡ ದೋಷವನ್ನು ಸರಿಪಡಿಸಿದ ಅನಂತರ ಶ್ರೀಗಳು ಉಡುಪಿಗೆ ಪ್ರಯಾಣ ಬೆಳೆಸಿದರು ಮತ್ತು ರಾತ್ರಿ ಬಪ್ಪನಾಡು ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.