ಸೇವೆ ನೀಡದ ಎಟಿಎಂಗಳ ತಿಥಿ ಮಾಡಿ ಜನರ ಆಕ್ರೋಶ


Team Udayavani, Mar 24, 2018, 1:30 PM IST

ray-1.jpg

ರಾಯಚೂರು: ಗ್ರಾಹಕರಿಗೆ ಸದಾ ಕಾಲ ಹಣವಿಲ್ಲ ಎಂಬ ಫಲಕ ತೋರಿಸಿ ಸೇವೆ ಅಲಭ್ಯವಾಗಿರುವ ಎಟಿಎಂಗಳ ತಿಥಿ ಮಾಡುವ ಮೂಲಕ ಜನಾಂದೋಲನಾ ಮಹಾಮೈತ್ರಿ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.

ಸ್ಟೇಷನ್‌ ರಸ್ತೆಯಲ್ಲಿ ಎಟಿಎಂ ಎದುರು ಸಾಂಪ್ರದಾಯಬದ್ಧವಾಗಿ ತಿಥಿ ಮಾಡುವ ವಿಧಿ ವಿಧಾನ ನೆರವೇರಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಅವೈಜ್ಞಾನಿಕ ಆರ್ಥಿಕ ನೀತಿಗಳು ಜಾರಿಗೊಳಿಸುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ತೊಂದರೆ ಉಂಟು ಮಾಡಿದೆ. ನೋಟು ರದ್ಧತಿ ಹಾಗೂ ಜಿಎಸ್‌ಟಿ ಮೂಲಕ ದೇಶದಲ್ಲಿ ಭಾರಿ ಆರ್ಥಿಕ ಬದಲಾವಣೆ ತರುವುದಾಗಿ ಹೇಳಿದ್ದ ಪ್ರಧಾನಿ, ನೀಡಿದ ಯಾವುದೇ ಭರವಸೆ ಈಡೇರಿಸಲಿಲ್ಲ ಎಂದು ದೂರಿದರು.

ಜನ ತಮ್ಮ ಖಾತೆಗಳಲ್ಲಿ ಇಟ್ಟ ಹಣ ಪಡೆಯಬೇಕಾದರೂ ಸಿಗದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಎಟಿಎಂಗಳು ಸದಾ ನೋ ಕ್ಯಾಶ್‌ ಬೋರ್ಡ್‌ ನೇತು ಹಾಕಿಕೊಂಡಿವೆ.  ಇದರಿಂದ ದೈನಂದಿನ ಚಟುವಟಿಕೆ ನಿಭಾಯಿಸಲಾಗದೆ ಗ್ರಾಹಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳೇ ಕಾರಣ ಎಂದು ದೂರಿದರು.. ಹಳೇ ನೋಟು ರದ್ದತಿ ಹಾಗೂ ಆನ್‌ಲೈನ್‌ ಹಣ ಚಲಾವಣೆ ಮತ್ತು ಆಧಾರ್‌ ಜೋಡಣೆ ನಿಜವಾದ ಉದ್ದೇಶ ಬಯಲಾಗಿದೆ. ಜನರು ತಾವು ಹೊಟ್ಟೆ ಬಟ್ಟೆ ಕಟ್ಟಿ ಉಳಿಸಿಟ್ಟ ಬ್ಯಾಂಕ್‌ ಹಣ ಜನರಿಗೆ ಸಿಗುತ್ತಿಲ್ಲ.ರೈತರು ಬೆಳೆದ ಬೆಳೆ ಮಾರಿದರೂ ಹಣವೂ ಬ್ಯಾಂಕ್‌ನಲ್ಲಿ ಸಿಗುತ್ತಿಲ್ಲ ಎಂದು ದೂರಿದರು.

6.5 ಲಕ್ಷ ಕೋಟಿ ಹಣವನ್ನು ತಿರುಗಿ ಬಾರದ ಸಾಲ ಎಂದು ಮನ್ನಾ ಮಾಡಲಾಗಿದೆ. ದೇಶದ ಆರ್ಥಿಕತೆ ಹಾಳು ಮಾಡಿದ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಜನರು ಬೀದಿಗಿಳಿದು ಹೋರಾಡುವ ಅನಿವಾರ್ಯತೆ ಎದುರಾಗಿದೆ ಎಂದು ದೂರಿದರು. 

ಜನಾಂದೋಲನಗಳ ಮಹಾಮೈತ್ರಿ ಸದಸ್ಯರಾದ ಡಾ| ವಿ.ಎ. ಮಾಲಿಪಾಟೀಲ, ಜಿ. ಅಮರೇಶ, ಬಿ.ಬಸವರಾಜ, ಎಂ.ಆರ್‌. ಬೇರಿ, ಭಂಡಾರಿ ವೀರಣ್ಣ ಶೆಟ್ಟಿ, ಖಾಜಾ ಅಸ್ಲಾಂ ಅಹ್ಮದ್‌, ಜಾನ್‌ ವೆಸ್ಲಿ, ಕೆ. ರಾಮಕೃಷ್ಣ, ಅಡವಿರಾವ, ಅಡಿವೆಪ್ಪ. ಬಸವರಾಜ, ಗುರುರಾಜ ಇದ್ದರು. 

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.