ಮಾದಕದ್ರವ್ಯ ತಡೆಗೆ ಡೇಟಾ ಬೇಸ್
Team Udayavani, Mar 25, 2018, 6:00 AM IST
ಹೊಸದಿಲ್ಲಿ: ಮಾದಕ ದ್ರವ್ಯ ಕಳ್ಳ ಸಾಗಣೆ ಮಾಡುವವರ ಹಾಗೂ ಈ ಕ್ಷೇತ್ರದಲ್ಲಿನ ಅಪರಾಧಗಳ ವಿರುದ್ಧದ ಸಮಗ್ರ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ನವದೆಹಲಿಯಲ್ಲಿ ಎರಡು ದಿನಗಳ ಕಾಲ ನಡೆದ ಮಾದಕ ವಸ್ತುಗಳ ವಿರುದ್ಧ ಕಾನೂನು ಜಾರಿ ಎಂಬ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಮಾದಕ ದ್ರವ್ಯ ನಿಯಂತ್ರಣ ಕೇಂದ್ರ (ಎನ್ಸಿಬಿ) ಆರಂಭಿಸಲು ಕೇಂದ್ರ ನೆರವು ನೀಡಿದೆ. ಅದರಲ್ಲಿ ಎಷ್ಟು ಪ್ರಮಾಣದಲ್ಲಿ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿದೆ ಎಂಬುದು ಸೇರಿದಂತೆ ಎಲ್ಲಾ ಅಂಶಗಳನ್ನೂ ಕಲೆ ಹಾಕಲಾಗುತ್ತದೆ. ಜಿಲ್ಲಾ ಮಟ್ಟದಲ್ಲೂ ಈ ಮಾಹಿತಿ ವ್ಯವಸ್ಥೆಯನ್ನು ನೋಡಲು ಅವಕಾಶ ಇದೆ ಎಂದರು. ಇದೇ ಮಾದಕ ವಸ್ತುಗಳನ್ನು ಮಾರಾಟ ಮಾಡುವವರ ಆಸ್ತಿ ಜಪ್ತಿ ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದೂ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.