ಏ.7ರಿಂದ ದೇಶಾದ್ಯಂತ ಸರಕು,ಸಾಗಣೆ ವಾಹನಗಳ ಮುಷ್ಕರ
Team Udayavani, Mar 25, 2018, 6:30 AM IST
ಬೆಂಗಳೂರು: ಸರಕು ಸಾಗಣೆ ವಾಹನಗಳಿಗೆ ಥರ್ಡ್ ಪಾರ್ಟಿ ವಿಮೆ ಪ್ರೀಮಿಯಂ ಮೊತ್ತವನ್ನು ಏಕಪಕ್ಷೀಯವಾಗಿ ಹೆಚ್ಚಿಸಿರುವುದನ್ನು ಖಂಡಿಸಿ ಅಖೀಲ ಭಾರತ ಸರಕು ಸಾಗಣೆ ಮಾಲೀಕರ ಸಂಘಗಳ ಒಕ್ಕೂಟ ಏ. 7ರಿಂದ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ.
ಇದಕ್ಕೆ ಕರ್ನಾಟಕ ಸರಕು ಸಾಗಣೆ ವಾಹನಗಳ ಮಾಲೀಕರ ಸಂಘ ಕೂಡ ಬೆಂಬಲ ವ್ಯಕ್ತಪಡಿಸಿದ್ದು,7ರಂದು ಮಧ್ಯರಾತ್ರಿಯಿಂದಲೇ ರಾಜ್ಯಾದ್ಯಂತ ಸರಕು ಸಾಗಣೆ ವಾಹನಗಳ ಕಾರ್ಯಾಚರಣೆ ಸ್ಥಗಿತಗೊಳ್ಳಲಿದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಬಿ. ಚೆನ್ನಾರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದೇಶದಲ್ಲಿ ಸುಮಾರು 1 ಕೋಟಿ ಸರಕು ಸಾಗಣೆ ವಾಹನಗಳಿದ್ದು, ರಾಜ್ಯದಲ್ಲಿ ಸುಮಾರು ಆರು ಲಕ್ಷ ಈ ಮಾದರಿಯ ವಾಹನಗಳಿವೆ. ಮುಷ್ಕರದಿಂದ ಈ ಎಲ್ಲ ವಾಹನಗಳ ಸಂಚಾರ ಸ್ತಬ್ದಗೊಳ್ಳಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.