ಲೇಔಟ್‌ ಸಮಸ್ಯೆ ಪರಿಹಾರಕ್ಕೆ ಸರಕಾರದ ಮೇಲೆ ಒತ್ತಡ : ಭರವಸೆ

Team Udayavani, Mar 26, 2018, 10:50 AM IST

SOMEVADA-25-3.jpg

ಮಡಿಕೆೇರಿ: ಲೇಔಟ್‌ ಅನುಮೋದನೆ ಮೂಲಕವೆ ಮನೆ ನಿರ್ಮಿಸಬೇಕೆನ್ನುವ ಸರಕಾರದ ನೂತನ ಆದೇಶ ಮಡಿಕೇರಿ ನಗರದ ಜನತೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಈ ಬಗ್ಗೆ  ಸರ್ಕಾರದ ಮೇಲೆ ಒತ್ತಡ ಹೇರಿ ನಿಯಮವನ್ನು ಸಡಿಲಗೊಳಿಸಲು ಮನವಿ ಮಾಡಲಾಗುವುದೆಂದು ನಗರಸಭೆಯ ಅಧ್ಯಕ್ಷರಾದ ಕೂಡಕಂಡಿ ಕಾವೇರಮ್ಮ ಸೋಮಣ್ಣ ಹಾಗೂ ಮೂಡಾ ಅಧ್ಯಕ್ಷರಾದ ಎ.ಸಿ.ಚುಮ್ಮಿ ದೇವಯ್ಯ ಭರವಸೆ ನೀಡಿದ್ದಾರೆ. ಕೊಡಗು ಪ್ರಸ್‌ಕ್ಲಬ್‌ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ನಗರಸಭೆ ಪ್ರತಿನಿಧಿಗಳು ಹಾಗೂ ಮೂಡಾ ಅಧ್ಯಕ್ಷರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮೂಡಾಕ್ಕೆ ಸರಕಾರದಿಂದ ಬಂದಿರುವ ಹೊಸ ಆದೇಶದ ಬಗ್ಗೆ ಉಪಾಧ್ಯಕ್ಷ‌ ಟಿ.ಎಸ್‌. ಪ್ರಕಾಶ್‌ ಗಮನ ಸೆಳೆೆದರು. ನಗರದಲ್ಲಿ ಬ್ರಿಟೀಷರ ಕಾಲದಿಂದಲು ವಾಸವಿರುವ ನಿವಾಸಿಗಳಿಗೆ ಸರ್ಕಾರದ ಸಿಂಗಲ್‌ ಲೇಜೌಟ್‌ ಪ್ಲಾನ್‌ನಿಂದ ಗೊಂದಲ ಸೃಷ್ಟಿಯಾಗಿದೆ. ಈ ಆದೇಶದಂತೆ ಯಾರೇ ಮನೆ ನಿರ್ಮಿಸುವುದಾದರು ಲೇಜೌಟ್‌ ಅನುಮೋದನೆ ಪಡೆಯಬೇಕು. ಒಂದು ವೇಳೆ ಲೇಜೌಟ್‌ ಇಲ್ಲದೆ ಹೋದಲ್ಲಿ ಸ್ವಂತ ನಿವೇಶನವನ್ನು ಸಿಂಗಲ್‌ ಲೇಜೌಟ್‌ ಪ್ಲಾನ್‌ಗೆ ಅಳವಡಿಸಿ ಅನುಮೋದನೆ ಪಡೆಯಬೇಕು. ಆದರೆ, 4 ರಿಂದ 5 ಸೆಂಟ್‌ ಜಾಗ ಹೊಂದಿರುವ ಮತ್ತು ಬ್ರಿಟೀಷರ ಕಾಲದಿಂದ ವಾಸವಿರುವವರಿಗೆ ಸರ್ಕಾರದ ಆದೇಶದಂತೆ ನಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಪ್ರಕಾಶ್‌ ಅವರು ತಿಳಿಸಿದರು.

ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕೆ.ಎಸ್‌.ರಮೇಶ್‌ ಅವರು ಮಾತನಾಡಿ, ಸರ್ಕಾರದ ಈ ಆದೇಶದಿಂದಾಗಿ ಯಾರೂ ಮನೆ ನಿರ್ಮಿಸಿಕೊಳ್ಳಲಾಗದ ಸಂಕಷ್ಟದಲ್ಲಿದ್ದು, 500ಕ್ಕೂ ಹೆಚ್ಚು ಮನೆಗಳು ನಿರ್ಮಾಣವಾಗದೆ ಬಾಕಿ ಉಳಿದಿದೆಯೆಂದು ವಿಷಾದ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಮೂಡಾ ಅಧ್ಯಕ್ಷ ಎ.ಸಿ. ಚುಮ್ಮಿ ದೇವಯ್ಯ, ಈ  ಆದೇಶ ಇಡೀ ರಾಜ್ಯಕ್ಕೆ ಅನ್ವಯವಾಗುತ್ತಿದ್ದು, ಗುಡ್ಡಗಾಡು ಪ್ರದೇಶವಾದ ಕೊಡಗಿನಲ್ಲಿ ಇದು ಸಮಸ್ಯೆಯಾಗಿ ಪರಿಣಮಿಸಿದೆ. ಈ ಬಗ್ಗೆ ಸರ್ಕಾರದ ಗಮನ ಸೆಳೆೆಯುವ ಅಗತ್ಯವಿದೆ ಎಂದರು.
 ಬೆಳಗಾವಿ ಅಧಿವೇಶನದಲ್ಲಿ ಶಾಸಕ ಕೆ.ಜಿ.ಬೋಪಯ್ಯ ಅವರು ಕೇಳಿದ ಪ್ರಶ್ನೆಗೆ ಸಂಬಂಧಿಸಿದ ಸಚಿವರು, ಮಡಿಕೇರಿಯಲ್ಲಿ ಮನೆ ನಿರ್ಮಾಣಕ್ಕೆ 11 ಅರ್ಜಿಗಳು ಮಾತ್ರ ಬಂದಿದ್ದು, ಈ ಅರ್ಜಿಗಳನ್ನು ತಿರಸ್ಕರಿಸಲಾಗಿದೆಯೆಂದು ಮಾಹಿತಿಯನ್ನು ನೀಡಿದ್ದರು ಎಂದು ಚುಮ್ಮಿ ದೇವಯ್ಯ ತಿಳಿಸಿದರು. ನಗರಸಭಾ ಅಧ್ಯಕ್ಷೆ ‌ ಕಾವೇರಮ್ಮ ಸೋಮಣ್ಣ ಮಾತನಾಡಿ, ಲೇಜೌಟ್‌ ಗೊಂದಲದ ಬಗ್ಗೆ ಸರ್ಕಾರದ ಗಮನ ಸೆಳೆೆದು ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಇದೇ ಸಂದರ್ಭ ಮಾತನಾಡಿದ ಚುಮ್ಮಿ ದೇವಯ್ಯ, ಮೂಡಾದ ಮೂಲಕ ಲೇಜೌಟ್‌ ಅನುಮೋದನೆ ಪಡೆದ ನಿವೇಶನಗಳನ್ನು ಮಾತ್ರ ಸಾರ್ವಜನಿಕರು ಖರೀದಿಸುವಂತೆ ಸಲಹೆ ನೀಡಿದರು. ಕೆಲವು ಕಡೆ ಅನುಮೋದನೆ ಇಲ್ಲದೆ ಲೇ ಜೌಟ್‌ಗಳಲ್ಲಿ ಏನೂ ಅರಿಯದವರು ನಿವೇಶನ ಖರೀದಿಸಿದ್ದು, ಮುಂದಿನ ದಿನಗಳಲ್ಲಿ ಇದು ಸಂಕಷ್ಟಕ್ಕೆ ಎಡೆಮಾಡಿಕೊಡಲಿದೆ ಎಂದು ಅವರು ತಿಳಿಸಿದರು.

ನಗರಸಭೆಯಲ್ಲಿ ನಡೆದಿರುವ ಕಂದಾಯ ಸಂಗ್ರಹದಲ್ಲಿನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ನಗರಸಭೆಯ ಎಸ್‌ಡಿಪಿಐ ಸದಸ್ಯ ಅಮಿನ್‌ ಮೊಹಿಸಿನ್‌ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿನ ಅಭಿವೃದ್ಧಿಯ ಹಿನ್ನಡೆಗೆ ಹೊಂದಾಣಿಕೆಯ ಕೊರತೆಯೆ ಕಾರಣವೆಂದು ಕೆ.ಎಸ್‌. ರಮೇಶ್‌ ಅಭಿಪ್ರಾಯಪಟ್ಟರು. ಜೆಡಿಎಸ್‌ನಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್‌ನ ಬಂಡಾಯ ಸದಸ್ಯ ಕೆ.ಎಂ. ಗಣೇಶ್‌ ಮಾತನಾಡಿ, ನಗರಸಭೆೆಗೆ ಸರ್ಕಾರದ ಕೊಡುಗೆ ಶೂನ್ಯವೆಂದು ಆರೋಪಿಸಿದರು. ಯಾವುದೇ ಸರ್ಕಾರ ಬಂದರು ಪ್ರತಿ ವರ್ಷ ನೀಡುವ ಅನುದಾನವನ್ನು ನೀಡುತ್ತದೆ. ವಿಶೇಷವಾಗಿ ಈ ಸರ್ಕಾರ ಏನೂ ನೀಡಿಲ್ಲವೆಂದು ಟೀಕಿಸಿ, ತಾನು ಕಾಂಗ್ರೆಸ್‌ ತೊರೆದು ಜೆಡಿಎಸ್‌ ಸೇರಿರುವ ಹಿನ್ನೆಲೆಯಲ್ಲಿ ಅಧ್ಯಕ್ಷರು ತನ್ನ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ತನ್ನ ವಾರ್ಡ್‌ನ ಕೆಲಸ ಕಾರ್ಯಗಳಿಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಿದರು.

ಟೀಕೆಗೆ ಉತ್ತರಿಸಿದ ಕಾವೇರಮ್ಮ ಸೋಮಣ್ಣ, ಕಾನೂನು ಬದ್ಧವಾಗಿ ಕಾರ್ಯಗಳು ಸುಸೂತ್ರ ವಾಗಿ ನಡೆಯುತ್ತಿದೆ. ಬೆಳಗ್ಗೆ 5.30ಕ್ಕೆ ನಗರ ಸಭೆಯ ಕಾರ್ಯಗಳಿಗೆ ಹಾಜರಾಗುವ ನಾನು ರಾತ್ರಿ 7.30ರವರೆಗು ಕರ್ತವ್ಯ ನಿರತಳಾಗಿರುತ್ತೇನೆ. ಯಾರಿಗೂ ಅಂಜುವುದಿಲ್ಲವೆಂದು ತಿಳಿಸಿದ ಕಾವೇರಮ್ಮ ಸೋಮಣ್ಣ, ಫಾರಂ ನಂ.3 ಗೊಂದಲವನ್ನು ನಿವಾರಿಸುವ ಭರವಸೆ ನೀಡಿದರು.ಕೊಡಗು ಪ್ರಸ್‌ ಕ್ಲಬ್‌ ಅಧ್ಯಕ್ಷ ಅಜ್ಜಮಾಡ ರಮೇಶ್‌ ಕುಟ್ಟಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ಟಾಪ್ ನ್ಯೂಸ್

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.