ರಾಹುಲ್‌ ಹೇಳಿಕೆ ಬೌದ್ಧಿಕ ದಿವಾಳಿತನದ್ದು: ಎಚ್‌ಡಿಕೆ ಕಿಡಿ


Team Udayavani, Mar 26, 2018, 6:35 AM IST

HD-Kumarswamy-700.jpg

ಬೆಂಗಳೂರು: ಜೆಡಿಎಸ್‌ ಎಂದರೆ ಜಾತ್ಯತೀತ ಜನತಾ ದಳ ಪಕ್ಷವಲ್ಲ, ಜನತಾ ದಳ “ಸಂಘ’ ಎಂಬ ಎಐಸಿಸಿ ಅಧ್ಯಕ್ಷ ರಾಹುಲ್‌ 
ಗಾಂಧಿ ಹೇಳಿಕೆ ಬೌದ್ಧಿಕ ದಿವಾಳಿತನದ್ದು ಎಂದು ಕಿಡಿ ಕಾರಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್‌ ಜಾತ್ಯತೀತ ಪಕ್ಷವಲ್ಲ ಎನ್ನುತ್ತಿರುವ ರಾಹುಲ್‌ ಗಾಂಧಿ ಅವರು ಮೊದಲು ಕಾಂಗ್ರೆಸ್‌ ಜಾತ್ಯತೀತ ಪಕ್ಷವೇ ಎಂಬುದನ್ನು ಪ್ರಶ್ನಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

ಜೆಡಿಎಸ್‌ ಜಾತ್ಯತೀತ ಪಕ್ಷ ಅಲ್ಲ ಎನ್ನುವುದಾದರೆ ನಮ್ಮ ಪಕ್ಷದ ಬೆಂಬಲದೊಂದಿಗೆ ಅಧಿಕಾರ ಹಿಡಿದವರಿಂದ ನೈತಿಕತೆ ಹೆಸರಿನಲ್ಲಿ ರಾಜೀನಾಮೆ ಕೊಡಿಸಿ. ಬಿಬಿಎಂಪಿಯಲ್ಲಿ ಜೆಡಿಎಸ್‌ ಜತೆಗಿನ ಮೈತ್ರಿ ಬಗ್ಗೆ ನಿಮ್ಮ ನಿಲುವು ಸ್ಪಷ್ಟಪಡಿಸಿ. ಜೆಡಿಎಸ್‌ ಬೆಂಬಲದೊಂದಿಗೆ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್‌ ಶಾಸಕರಿಂದ ರಾಜೀನಾಮೆ ಕೊಡಿಸಿ ಎಂದು ರಾಹುಲ್‌ ಗಾಂಧಿ ಅವರಿಗೆ ಸವಾಲು ಹಾಕಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ತನ್ನ ಧರ್ಮ, ದೈವದ ಮೇಲೆ ಆಳವಾದ ನಂಬಿಕೆ, ಅಪಾರ ಗೌರವ ಹೊಂದಿದ್ದಾಗ್ಯೂ ಇತರ ಧರ್ಮ, ದೈವದ ಬಗ್ಗೆ ಗೌರವ ಹೊಂದಿರುವುದು, 

ಎಲ್ಲ ಜಾತಿಗಳನ್ನು ಸಮಾನವಾಗಿ ಕಾಣುವುದು ಜಾತ್ಯತೀತತೆ. ಆದರೆ ಮತಕ್ಕಾಗಿ ಅಲ್ಪಸಂಖ್ಯಾಕರನ್ನು ಓಲೈಸುತ್ತಾ, ಬಹುಸಂಖ್ಯಾಕರು ತಮ್ಮ ಕಿಸೆಯಲ್ಲಿದ್ದಾರೆಂದು ಭಾವಿಸಿಕೊಂಡು ಶತಶತ ಮಾನಗಳಿಂದಲೂ ಅವರನ್ನು ಕಡೆಗಣಿಸಿಕೊಂಡು ಬಂದಿರುವ ಕಾಂಗ್ರೆಸ್‌ನದ್ದು ಯಾವ ಜಾತ್ಯತೀತತೆ ಎಂದು ಪ್ರಶ್ನಿಸಿದ್ದಾರೆ.

ಬಹುಸಂಖ್ಯಾಕರನ್ನು ಕಡೆಗಣಿಸಿದ ನಿಮ್ಮ ನಡವಳಿಕೆಯಿಂದಾಗಿಯೇ ಇಂದು ಕಾಂಗ್ರೆಸ್‌ ಅಳಿವಿನ ಅಂಚಿನಲ್ಲಿದೆ. ಮುಳುಗುವಾಗಲಾದರೂ ಕಾಂಗ್ರೆಸ್‌ಗೆ ಸಮರ್ಥ ಮತ್ತು ನಿಜ ಜಾತ್ಯತೀತ ನಾಯಕನ ಅಗತ್ಯವಿತ್ತು. ಆದರೆ ನಿಮ್ಮಂಥ ಅಪ್ರಬುದ್ಧರನ್ನು ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಕಾಂಗ್ರೆಸ್‌ ಮುಕ್ತ ಭಾರತ ಮಾಡಲು ಹೊರಟಿರುವ ಬಿಜೆಪಿಗೆ ನೀವು ಸುಲಭದ ತುತ್ತಾಗಲಿದ್ದೀರಿ ಎಂದು ರಾಹುಲ್‌ ಗಾಂಧಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ನೀವು ನಂಬಿದ್ದ ಡೋಂಗಿ ಜಾತ್ಯತೀತವಾದ ನಿಮಗೆ ಪಾಠ ಕಲಿಸುತ್ತಿದ್ದಂತೆ ಇಂದು ದೇಗುಲ, ಮಠ ಮಂದಿರಗಳಿಗೆ ಹೋಗುತ್ತಿದ್ದೀರಿ. ಮುಂದೊಂದು ದಿನ ಈ ಕಪಟ ನಡವಳಿಕೆಗಳಿಗೂ ಜನ ಉತ್ತರ ಕೊಡಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೀರಶೈವ ಲಿಂಗಾಯತರನ್ನು ಒಡೆದು ನಿಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಸವಣ್ಣರ ಹೆಸರನ್ನು, ಬಸವತತ್ವವನ್ನು ದುರ್ಬಳಕೆ ಮಾಡಿಕೊಂಡ ನಿಮ್ಮಂಥ ಪಕ್ಷದವರಿಂದ ಬುದ್ಧಿ ಹೇಳಿಸಿಕೊಳ್ಳವಷ್ಟು ದಾರಿದ್ರÂ ಜೆಡಿಎಸ್‌ಗೆ ಬಂದಿಲ್ಲ. ದೇಶದಲ್ಲಿ ನಿಮ್ಮನ್ನು ಜನ ಮುಳುಗಿಸುತ್ತಿದ್ದಾರೆ. ರಾಜ್ಯದಲ್ಲಿ ತೇಲಿಕೊಂಡಿದ್ದೀರಾದರೂ ಮುಂದೆ ಇಲ್ಲಿಯೂ ಮುಳುಗಿ ಅಸ್ತಂಗತರಾಗುತ್ತೀರಿ ಎಂದು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-katte

Kodagu; ದೇವಸ್ಥಾನ ಪ್ರವೇಶ ನಿರಾಕರಣೆ: ವಿವಿಧೆಡೆ ಕೊಡವರಿಂದ ರಸ್ತೆ ತಡೆ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

BJP-Gov

ಪೊಲೀಸ್‌ ಅಧಿಕಾರಿಗಳ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಎಂಎಲ್‌ಸಿ ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.