ಏಕತೆಯಿದ್ದರೆ ಗೆಲುವು ಸುಲಭ: ಪ್ರಧಾನ್‌


Team Udayavani, Mar 26, 2018, 10:34 AM IST

26-March-3.jpg

ಕಾವೂರು: ಬೂತ್‌ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಪಕ್ಷ ಗೆಲ್ಲಬೇಕು ಎಂಬ ಏಕಮನಸ್ಸಿದ್ದರೆ ಮಂಗಳೂರು ಉತ್ತರ ಗೆದ್ದಂತೆ, ಇದು ರಾಜ್ಯಕ್ಕೆ ಅನ್ವಯಿಸಿದರೆ ಇಡೀ ರಾಜ್ಯವೇ ಗೆದ್ದಂತೆ ಎಂದು ಕೇಂದ್ರ ನೈಸರ್ಗಿಕ ಅನಿಲ ಮತ್ತು ಪೆಟ್ರೋಲಿಯಂ ಇಲಾಖೆಯ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದರು.

ಕಾವೂರಿನಲ್ಲಿ ರವಿವಾರ ಬಿಜೆಪಿ ಮಂಗಳೂರು ಉತ್ತರ ಮಂಡಲದ ಬೂತ್‌ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಕೇಂದ್ರದ ಸೌಲಭ್ಯ ರಾಜ್ಯಕ್ಕೆ ಪರಿಣಾಮಕಾರಿಯಾಗಿ ಸಿಗಬೇಕಾದರೆ ರಾಜ್ಯದಲ್ಲಿ ಅಧಿಕಾರ ಹಿಡಿಯಬೇಕು ಎಂದರು.

ಛಲ, ಒಗ್ಗಟ್ಟಿನಿಂದ ಜಯ
ಚುನಾವಣೆ ಮತ್ತು ಯುದ್ಧಕ್ಕೆ ಹೆಚ್ಚಿನ ವ್ಯತ್ಯಾಸವಿಲ್ಲ. ಛಲ ಹಾಗೂ ಒಗ್ಗಟ್ಟಿನ ಏಕ ಗುರಿಯಿದ್ದರೆ ಯುದ್ಧ ಜಯಿಸಬಹುದು. ಬಿಜೆಪಿ ಕಾರ್ಯಕರ್ತರ ಹತ್ಯೆ ಮಾಡುವ, ಧರ್ಮವನ್ನು ಒಡೆಯುವ, ಓಲೈಕೆಯ ಸರಕಾರ ಈಗಿನ ಕಾಂಗ್ರೆಸ್‌. ಇದರ ಆಡಳಿತವನ್ನು ಕಿತ್ತೆಸೆಯುವ ಮೂಲಕ ಬಿಜೆಪಿ ಕಾರ್ಯಕರ್ತರು ಕೇಂದ್ರದ ಸೌಲಭ್ಯವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಶ್ರಮಿಸಬೇಕು ಎಂದರು.

ಮೋದಿ ಸರಕಾರ ವಿವಿಧ ಜನಪರ ಯೋಜನೆ ಮೂಲಕ ಮನೆ ಮಾತಾಗಿದೆ. ಕೇಂದ್ರವು ಪ್ರತೀ ವ್ಯವಸ್ಥೆಯನ್ನು ಮನೆ ಮನೆಗೆ ಮುಟ್ಟಿಸಲು ಕಟಿಬದ್ಧವಾಗಿದೆ ಎಂದರು.

ಉತ್ತರ ಮಂಡಲದ ಅಧ್ಯಕ್ಷ ಡಾ| ಭರತ್‌ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್‌, ವಿಧಾನ ಪರಿಷತ್‌ ವಿಪಕ್ಷ ಮುಖ್ಯ ಸಚೇತಕ ಕ್ಯಾ| ಗಣೇಶ್‌ ಕಾರ್ಣಿಕ್‌, ಸುರೇಂದ್ರನ್‌, ಬ್ರಿಜೇಶ್‌ ಚೌಟ, ಉದಯಕುಮಾರ್‌, ಸತೀಶ್ಚಂದ್ರ, ಕಿಶೋರ್‌ ಕುಮಾರ್‌, ಸುಧೀರ್‌ ಶೆಟ್ಟಿ ಕಣ್ಣೂರು ಉಪಸ್ಥಿತರಿದ್ದರು. ಅಶೋಕ್‌ ಕೃಷ್ಣಾಪುರ ನಿರೂಪಿಸಿದರು.

ಮಂಗಳೂರು ಆರ್ಥಿಕ ಕೇಂದ್ರವಾಗಲಿದೆ
ದೇಶದಲ್ಲಿ ಕುಳಿತುಕೊಳ್ಳುವ ಕುರ್ಚಿಯಿಂದ ಹಿಡಿದು ಧರಿಸುವ ಬಟ್ಟೆಯವರೆಗೆ ಪೆಟ್ರೋಲಿಯಂನ ಪೂರಕ ವಸ್ತುಗಳಾಗಿವೆ. ದ.ಭಾರತದಲ್ಲಿ ಅತೀ ದೊಡ್ಡ ತೈಲ ಸಂಸ್ಕರಣಾ ಘಟಕ ಮಂಗಳೂರಿನಲ್ಲಿದೆ. ಈಗ ಇದೇ ಭಾಗದಲ್ಲಿ ಪೆಟ್ರೋಲಿಯಂ ಕಾಂಪ್ಲೆಕ್ಸ್‌ ಬರಲಿದೆ. ಇದರಿಂದ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಾವಿರಾರು ಉದ್ಯೋಗ, ಪೂರಕ ಸಣ್ಣ ಸಣ್ಣ ಕೈಗಾರಿಕಾ ಘಟಕಗಳು ಅಸ್ತಿತ್ವಕ್ಕೆ ಬರಲಿವೆ. ಇದರ ಜತೆಗೆ ಉಕ್ಕಿನ ಕಾರ್ಖಾನೆ ನಿರ್ಮಿಸುವ ಯೋಜನೆಯಿದೆ. ಇದರಿಂದ ಮಂಗಳೂರು ಆರ್ಥಿಕ ಕೇಂದ್ರವಾಗಿ ಪ್ರಸಿದ್ಧಿಯಾಗಲಿದೆ.
ಧರ್ಮೇಂದ್ರ ಪ್ರಧಾನ್‌,
  ಸಚಿವ, ಕೇಂದ್ರ ನೈಸರ್ಗಿಕ ಅನಿಲ ಮತ್ತು
  ಪೆಟ್ರೋಲಿಯಂ ಇಲಾಖೆ 

ಟಾಪ್ ನ್ಯೂಸ್

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Lawrence Bishnoi’s brother Anmol Bishnoi arrested in America

Anmol Bishnoi: ಅಮೆರಿಕದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಬಂಧನ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

Untitled-1

Kasaragod: ಅಪರಾಧ ಸುದ್ದಿಗಳು

Shirva1

Shirva: ಹಿಂದೂ ಜೂನಿಯರ್‌ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.