ಬಪ್ಪನಾಡು ಬ್ರಹ್ಮಕಲಶೋತ್ಸವ ಸಂಪನ್ನ
Team Udayavani, Mar 26, 2018, 12:14 PM IST
ಮೂಲ್ಕಿ : ಬಪ್ಪನಾಡು ಶ್ರೀ ದುರ್ಗಾಪರಮೆಶ್ವರೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ಮಹಾ ರಥೋತ್ಸವ ನಡೆಯುವ ಮೂಲಕ ಅಷ್ಟಬಂಧ ನವೀಕರಣ ಮತ್ತು ಬ್ರಹ್ಮಕಲಶೋತ್ಸವ ಸಮಾಪನಗೊಂಡಿತು.
ರವಿವಾರ ಮುಂಜಾನೆ ಜಳಕದ ಬಲಿ ಉತ್ಸವ ನಡೆಯಿತು.ಅನಂತರ ಧ್ವಜಾವರೋಹಣ ಜರಗಿತು. ಮುಂಜಾನೆಯಿಂದಲೇ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಹಣ್ಣುಕಾಯಿ ಸೇವೆ ಸಮರ್ಪಿಸಿದರು. ಮಧ್ಯಾಹ್ನ ಅನ್ನ ಸಂತರ್ಪಣೆ ಹಾಗೂ ಮಹಾ ಫಲ ಮಂತ್ರಾಕ್ಷತೆ ಹಾಗೂ ವಿಶೇಷ ಪ್ರಾರ್ಥನೆ ನಡೆಯಿತು. ದೇಗುಲದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಪುತ್ತೂರು ಮಧುಸೂಧನ ತಂತ್ರಿಗಳ ಉಪಸ್ಥಿತಿ ಹಾಗೂ ಅರ್ಚಕರಾದ ಬಿ. ಕೃಷ್ಣದಾಸ್ ಭಟ್ ಮತ್ತು ಶ್ರೀಪತಿ ಉಪಾಧ್ಯಾಯ, ಆಡಳಿತ ಸಮಿತಿಯ ಅಧ್ಯಕ್ಷ ಎನ್.ಎಸ್.ಮನೋಹರ ಶೆಟ್ಟಿ, ಬ್ರಹ್ಮಕಲಶ ಮತ್ತು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಬಪ್ಪನಾಡು ನಾರಾಯಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುನೀಲ್ ಆಳ್ವ ಉಪಸ್ಥಿತರಿದ್ದರು.
ಮೇ 6,7: ಧೃಢ ಕಲಶ
ಬ್ರಹ್ಮಕಲಶೋತ್ಸವದ ಅನಂತರ ಜರಗುವ ಧೃಢ ಕಲಶ ಮೇ 6 ಮತ್ತು 7ರಂದು ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.