ಜೆಡಿಎಸ್ ತೊರೆಯಲು ಮುಂದಾಗಿರುವ ಬೆಂಬಲಿಗರು
Team Udayavani, Mar 27, 2018, 6:45 AM IST
ಬೆಂಗಳೂರು: ಜೆಡಿಎಸ್ನ ಏಳು ಮಾಜಿ ಶಾಸಕರು ಪಕ್ಷ ತೊರೆದು ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಅವರ ಕ್ಷೇತ್ರಗಳಲ್ಲಿ ಜೆಡಿಎಸ್ನ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನೂ ತಮ್ಮ ಜತೆ ಕರೆದೊಯ್ಯಲು ಮುಂದಾಗಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಸಮ್ಮುಖ ಜೆಡಿಎಸ್ನ ಏಳು ಮಾಜಿ ಶಾಸಕರು ಸೇರ್ಪಡೆ ಸಂದರ್ಭದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರಾಗಿದ್ದ ಎಚ್.ಎಂ.ಶಕೀಲ್ ನವಾಜ್ ಸೇರಿ ಹಲವರು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದು, ಸದ್ಯದಲ್ಲೇ ಕೆಪಿಸಿಸಿ ಕಚೇರಿಯಲ್ಲಿ ಜಮೀರ್ ಅಹಮದ್, ಚೆಲುವರಾಯಸ್ವಾಮಿ ಸೇರಿ ಏಳು ಮಾಜಿ ಶಾಸಕರು,ಎಂ.ಸಿ.ನಾಣಯ್ಯ ಸೇರಿ ಮೂವರು ಮಾಜಿ ವಿಧಾನಪರಿಷತ್ ಸದಸ್ಯರ ಸಾಕಷ್ಟು ಬೆಂಬಲಿಗರು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಕಾಂಗ್ರೆಸ್ ಸೇರಲಿದ್ದಾರೆಂದು ಮೂಲಗಳು ತಿಳಿಸಿವೆ.
ಈ ಮಧ್ಯೆ, ಮಾಜಿ ಶಾಸಕರ ಜತೆ ಹೋಗಲಿರುವ ಬೆಂಬಲಿಗರನ್ನು ತಡೆಯುವ ಕಾರ್ಯವೂ ಜೆಡಿಎಸ್ನಿಂದ ಆಗುತ್ತಿದ್ದು ನಾಗಮಂಗಲ, ಮಾಗಡಿ, ಚಾಮರಾಜಪೇಟೆ ಮುಖಂಡರ ಜತೆ ಖುದ್ದು ದೇವೇಗೌಡ, ಕುಮಾರಸ್ವಾಮಿ ಸಂಪರ್ಕದಲ್ಲಿದ್ದಾರೆಂದು ಹೇಳಲಾಗಿದೆ.
ಅಲ್ಪಸಂಖ್ಯಾತರ ಮುಖಂಡರನ್ನು ನೇರವಾಗಿ ತಮ್ಮ ನಿವಾಸಕ್ಕೆ ಕರೆಸಿ ಮಾತನಾಡುತ್ತಿರುವ ದೇವೇಗೌಡರು, ತಮ್ಮ
ಅಧಿಕಾರವಧಿಯಲ್ಲಿ ಅಲ್ಪಸಂಖ್ಯಾತರಿಗಾಗಿ ಕೈಗೊಂಡಿರುವ ಕ್ರಮಗಳನ್ನು ಮನವರಿಕೆ ಮಾಡಿಕೊಟ್ಟು, ಪಕ್ಷದಲ್ಲೇ ಉಳಿಯುವಂತೆ ಮನವೊಲಿಸುತ್ತಿದ್ದಾರೆಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.