ಜನಾಂದೋಲನ ಮಹಾಮೈತ್ರಿ ಆಭ್ಯರ್ಥಿಗಳಿಗೆ ಆಶೀರ್ವದಿಸಿ

Team Udayavani, Mar 27, 2018, 5:31 PM IST

ray-1.jpg

ಮುದಗಲ್ಲ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನಾಂದೋಲನಗಳ ಮಹಾಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸಿ ಆಯ್ಕೆ ಮಾಡುವ ಮೂಲಕ ಎಲ್ಲ ರಾಜಕೀಯ ಪಕ್ಷಗಳಿಗೆ ಮತದಾರರು ತಕ್ಕ ಉತ್ತರ ನೀಡಬೇಕು ಎಂದು ಲಿಂಗಸುಗೂರು ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಆರ್‌. ಮಾನಸಯ್ಯ ಹೇಳಿದರು.

ಸ್ಥಳೀಯ ಪುರಸಭೆ ಆವರಣದಲ್ಲಿ ಜನಾಂದೋಲನ ಮಹಾಮೈತ್ರಿಯಿಂದ ಹಮ್ಮಿಕೊಂಡಿದ್ದ ಜನಾಧಿಕಾರಕ್ಕಾಗಿ ಜನರ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಇದಕ್ಕೆ ಬಿಜೆಪಿ ಕೂಡ ಹೊರತಾಗಿಲ್ಲ. ಬಿಜೆಪಿ ಕೋಮು ಸೌಹಾರ್ದ ಕೆಡಿಸುವ ಹುನ್ನಾರ ನಡೆಸಿದೆ. ಅಲ್ಪಸಂಖ್ಯಾತರ, ದಲಿತರ ಮತ್ತು ಹಿಂದುಳಿದ ವರ್ಗಗಳ ಆಹಾರ ಪದ್ಧತಿ ಟೀಕಿಸುತ್ತಾ ಗೋರಕ್ಷಣೆ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ ಎಂದು ದೂರಿದರು.

ಪ್ರಧಾನಿ ನರೇಂದ್ರ ಮೋದಿ 2014ರ ಚುನಾವಣೆಯಲ್ಲಿ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ದೇಶದಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ, ವಿದೇಶದಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಜಮೆ ಮಾಡುವುದಾಗಿ ಹೇಳಿದ್ದರು ಆದರೆ ಯಾವೊಂದು ಭರವಸೆ ಈಡೇರಿಸದೇ ದೇಶದ ಜನರನ್ನು ವಂಚಿಸಿದ್ದಾರೆ. ನೋಟ್‌ ಬ್ಯಾನ್‌ ಮಾಡಿ ಜನರ ಜೀವನದ ಮೇಲೆ ಪ್ರಹಾರ ನಡೆಸಿದರು. ಒಂದು ರೀತಿ ತುರ್ತು ಪರಿಸ್ಥಿತಿ ಹೇರಿದರು. ಬಡವರು ಬ್ಯಾಂಕ್‌ ಮುಂದೆ ಸರದಿಯಲ್ಲಿ ನಿಲ್ಲುವಂತಾಯಿತು. ಆದರೆ ಕಪ್ಪು ಹಣದ ಕುಳಗಳು ಯಾರೊಬ್ಬರೂ ಬ್ಯಾಂಕ್‌ ಮುಂದೆ ನಿಂತುಕೊಳ್ಳಲಿಲ್ಲ. ದೊಡ್ಡ
ಕಪ್ಪು ಧನಿಕರು ಬ್ಯಾಂಕ್‌ ಹಿಂಬಾಗಿಲಿನಿಂದ ಕಪ್ಪು ಹಣವನ್ನು ಬಿಳಿಯಾಗಿಸಿಕೊಂಡರು. ಪ್ರತಿಯೊಂದು ಬಾಷಣದಲ್ಲಿ ನನಗೆ 60 ತಿಂಗಳನ್ನ ಕೊಡಿ ಸಾಕು, ನಾನು ದೇಶದ ಚೌಕಿದಾರನಾಗಿ ಸೇವೆ ಮಾಡುತ್ತೇನೆ ಅಂತ ಹೇಳುತ್ತಾರೆ. ಆದರೆ ನೀರವ್‌ ಮೋದಿ, ವಿಜಯ ಮಲ್ಯರಂತಹ ಉದ್ಯಮಿಗಳು ದೇಶದ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದರೂ, ನಮ್ಮ ದೇಶದ ಚೌಕಿದಾರ ಪ್ರಧಾನಿ ನೋಡಿಕೊಂಡು ಸುಮ್ಮನೆ ಕೂಡುತ್ತಾರೆ ಎಂದು ಟೀಕಾಪ್ರಹಾರ ನಡೆಸಿದರು. ಮತದಾರರು ಈ ಬಾರಿ ಜನಾಂದೋಲನ ಮಹಾಮೈತ್ರಿ ಅಭ್ಯರ್ಥಿಗಳಿಗೆ ಆಶೀರ್ವದಿಸುವ ಮೂಲಕ ಪರ್ಯಾಯ ಶಕ್ತಿ ಸೃಷ್ಟಿಗೆ ಮುಂದಾಗಬೇಕು ಎಂದು
ಕರೆ ನೀಡಿದರು. ಮುಖಂಡರಾದ ಎಂ.ಆರ್‌. ಬೇರಿ, ಅಮರಣ್ಣ ಗುಡಿಹಾಳ, ರಾಘವೇಂದ್ರ ಕುಷ್ಟಗಿ, ತಾಜುದ್ದೀನ್‌ ಹುಮನಾಬಾದ, ಎಂ.ಡಿ. ಅಮೀರ ಅಲಿ, ಜಿ. ಶೇಖರಯ್ಯ, ಕೆ.ನಾಗಲಿಂಗಸ್ವಾಮಿ, ಜಿ.ತಿಪ್ಪರಾಜ, ಅಬ್ದುಲ್‌ ಹಮೀದ್‌, ಡಿ.ಜಿ. ಶಿವು, ವೆಲ್ಫೆಧೀರ್‌ ಪಾರ್ಟಿ ಮುಖಂಡರು ಇದ್ದರು. 

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.