ಸಂಪುಟ ನಿರ್ಣಯ ತಡೆಹಿಡಿಯಬೇಕು: ಶೋಭಾ
Team Udayavani, Mar 28, 2018, 7:00 AM IST
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ ಎರಡು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳು ಹಾಗೂ ಕಳೆದ 15 ದಿನಗಳಲ್ಲಿ ಹಣಕಾಸಿನ ವ್ಯವಸ್ಥೆಯಿಲ್ಲದೆ ಆರಂಭಿಸಿ ರುವ ಕಾಮಗಾರಿ, ಯೋಜನೆಗಳನ್ನು ಕೇಂದ್ರ ಚುನಾವಣಾ ಆಯೋಗ
ತಡೆಹಿಡಿಯಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಳೆದ ಎರಡು ಸಚಿವ ಸಂಪುಟ ಸಭೆಯಲ್ಲಿ ಅನುಷ್ಠಾನಗೊಳಿಸಲಾಗದ ನಿರ್ಣಯಗಳನ್ನು ಕೈಗೊಂಡಿದೆ. ಕೇವಲ ಚುನಾವಣಾ ಗಿಮಿಕ್‌ಗಾಗಿ ಸರ್ಕಾರ ಕೆಲ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರಗಳಿಂದ ಜನರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶವಿಲ್ಲದಿದ್ದರೂ ಮೂಗಿಗೆ ತುಪ್ಪ ಸವರುವ ಕೆಲಸ
ಮಾಡಿದೆ.ಹೀಗಾಗಿ, ಆಯೋಗ ಈ ನಿರ್ಧಾರಗಳನ್ನು ತಡೆಹಿಡಿಯಬೇಕು ಎಂದು ಒತ್ತಾಯಿಸಿದರು.
ಚುನಾವಣೆ ಸಮೀಸುತ್ತಿರುವಂತೆಯೇ ಕಳೆದ 15 ದಿನಗಳಲ್ಲಿ ಮನಬಂದಂತೆ ವರ್ಗಾವಣೆ ಮಾಡಲಾಗಿದೆ. ಗಣಿ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರನ್ನು ರಜೆ ಮೇಲೆ ತೆರಳಲು ಸೂಚಿಸಿರುವುದೇ ಇದಕ್ಕೆ ಸಾಕ್ಷಿ ಎನಿಸಿದೆ. ಎರಡು ವರ್ಷಗಳಿಂದ
ಒಂದೇ ಸ್ಥಾನದಲ್ಲಿರುವ ಅಧಿಕಾರಿಗಳನ್ನು ಮೊದಲು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ಮುಖಂಡರಿಂದ ಕಾನೂನು ಉಲ್ಲಂಘನೆ ಯಾಗುತ್ತಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹಾಗೂ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ನಮ್ಮ ಸರ್ಕಾರ ಇದೆ. ಹೀಗಾಗಿ ಕಡತ ವಿಲೇವಾರಿ ಮಾಡಲಾಗುತ್ತಿದೆ. ಶೋಭಾ ಕರಂದ್ಲಾಜೆಗೆ ಪ್ರಜಾಪ್ರಭುತ್ವದ
ರಾಜಕೀಯ ಗೊತ್ತಿಲ್ಲ. ಹೀಗಾಗಿ ಏನೇನೊ ಮಾತನಾಡುತ್ತಾರೆ.
ಸಿದ್ದರಾಮಯ್ಯ, ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
MUST WATCH
ಹೊಸ ಸೇರ್ಪಡೆ
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.