ವರುಣಾದಲ್ಲಿ ಬಿಎಸ್ವೈ ಪುತ್ರನ ಸ್ಪರ್ಧೆ ಅಂತಿಮವಾಗಿಲ್ಲ
Team Udayavani, Mar 28, 2018, 12:40 PM IST
ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರ ಎದುರಾಳಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂಬುದು ವದಂತಿಯಷ್ಟೇ. ಪಕ್ಷದಿಂದ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದು ಕ್ಷೇತ್ರ ಬಿಜೆಪಿ ಮುಖಂಡರು ಸ್ಪಷ್ಟಪಡಿಸಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿದ್ದು, ಬಹಳಷ್ಟು ಟಿಕೆಟ್ ಆಕಾಂಕ್ಷಿಗಳಿದ್ದೇವೆ. ಇದರ ಮಧ್ಯೆ ಸಿದ್ದರಾಮಯ್ಯ ಅವರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎನ್ನುವ ಕಾರಣಕ್ಕೆ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಿದರೆ ಸ್ವಾಗತಿಸುತ್ತೇವೆ. ಆದರೆ, ಈವರೆಗೆ ಪಕ್ಷದೊಳಗೆ ಅಂತಹ ಬೆಳವಣಿಗೆ ನಡೆದಿಲ್ಲ ಎಂದು ಕ್ಷೇತ್ರದ ಬಿಜೆಪಿ ಮುಖಂಡರಾದ ಜಿಪಂ ಮಾಜಿ ಅಧ್ಯಕ್ಷ ಕೆ.ಎನ್.ಪುಟ್ಟಬುದ್ದಿ ತಿಳಿಸಿದರು.
ಯಾರೆ ಅಭ್ಯರ್ಥಿಯಾದರು ಗೆಲುವಿಗೆ ಶ್ರಮ: ಕಳೆದ ಆರು ತಿಂಗಳಿಂದ ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಪಕ್ಷದ ಪರ ಪ್ರಚಾರ ನಡೆಸಿದ್ದೇವೆ. ಪ್ರಧಾನಿ ಮೋದಿ ಅವರ ಜನಪರ ಕಾರ್ಯಕ್ರಮಗಳು, ಸಿದ್ದರಾಮಯ್ಯ ಜನವಿರೋಧಿ ಆಡಳಿತ, ಯಡಿಯೂರಪ್ಪ ಸರ್ಕಾರ ಜಾರಿಗೆ ತಂದ ಜನಪರ ಯೋಜನೆಗಳ ಬಗ್ಗೆ ಕ್ಷೇತ್ರದ ಜನರಿಗೆ ಮನವರಿಕೆ ಮಾಡಿಕೊಟ್ಟಿದ್ದು, ಕ್ಷೇತ್ರದ ಮತದಾರರು ಬಿಜೆಪಿ ಪರ ಒಲವು ತೋರಿದ್ದಾರೆ. ಅಂತಿಮವಾಗಿ ಯಾರೇ ಅಭ್ಯರ್ಥಿಯಾದರೂ ಅವರ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು.
ವೀರಶೈವ-ಲಿಂಗಾಯತ ಬೇರೆ ಬೇರೆಯಲ್ಲ. ಆದರೆ, ಕೇವಲ ಅವರ ವೈಯಕ್ತಿಕ ಹಿತಾಸಕ್ತಿಗಾಗಿ ಯಡಿಯೂರಪ್ಪ ಅವರ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದರು. ಪಕ್ಷದ ಮುಖಂಡರಾದ ಕಾ.ಪು.ಸಿದ್ದಲಿಂಗಸ್ವಾಮಿ, ಎಸ್.ಡಿ.ಮಹೇಂದ್ರ, ಆಶೋಕ್, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಜಿಪಂ ಸದಸ್ಯ ಗುರುಸ್ವಾಮಿ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.