ನಟಿ ಜಯಂತಿ ಆರೋಗ್ಯ ವಿಚಾರಿಸಿದ ನಟರು
Team Udayavani, Mar 29, 2018, 6:05 AM IST
ಬೆಂಗಳೂರು: ಹಿರಿಯ ನಟಿ ಜಯಂತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅವರಿಗೆ ಅಳವಡಿಸಲಾಗಿದ್ದ ಕೃತಕ ಉಸಿರಾಟದ ವ್ಯವಸ್ಥೆಯನ್ನು ತೆಗೆಯಲಾಗಿದೆ. ಸದ್ಯಕ್ಕೆ ತೀವ್ರ ಚಿಕಿತ್ಸಾ ಘಟಕದಲ್ಲೇ ಚಿಕಿತ್ಸೆ ಮುಂದುವರಿಸಲಾಗಿದ್ದು, ಅವರ ಆರೋಗ್ಯ ಚೇತರಿಕೆಯಲ್ಲಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಬುಧವಾರ ಬೆಳಗ್ಗೆ ಚಿತ್ರರಂಗದ ಅನೇಕ ಗಣ್ಯರು ವಿಕ್ರಮ್ ಆಸ್ಪತ್ರೆಗೆ ಭೇಟಿ ನೀಡಿ, ಜಯಂತಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಶಿವರಾಜಕುಮಾರ್ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಅವರೊಂದಿಗೆ ಮಾತನಾಡಿದ್ದಾರೆ ಎಂದು ಜಯಂತಿ ಅವರ ಪುತ್ರ ಕೃಷ್ಣ ಕುಮಾರ್ “ಉದಯವಾಣಿ’ಗೆ ತಿಳಿಸಿದ್ದಾರೆ.
ಹಿರಿಯ ನಟರಾದ ಶ್ರೀನಿವಾಸ ಮೂರ್ತಿ, ಶ್ರೀನಾಥ್, ಹೇಮಾ ಚೌಧರಿ ಸೇರಿದಂತೆ ಇನ್ನೂ ಅನೇಕ ಕಲಾವಿದರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಕಳೆದ ಎರಡು ದಿನಗಳಿಗೆ ಹೋಲಿಸಿದರೆ, ಬುಧವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ಕೃಷ್ಣ ಕುಮಾರ್ ಹೇಳಿದ್ದಾರೆ.
ಅಸ್ತಮಾದಿಂದ ಬಳಲುತ್ತಿದ್ದ ಜಯಂತಿ ಅವರು ಭಾನುವಾರ ರಾತ್ರಿ ತೀವ್ರ ಅಸ್ವಸ್ಥಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಸಂಜೆಯ ಹೊತ್ತಿಗೆ ಅವರ ಆರೋಗ್ಯದ ಕುರಿತು ಊಹಾಪೋಹಗಳು ಹರಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.