ಬಂಗಾರಪ್ಪ ಹೆಸರಿನಲ್ಲಿ ಮತಯಾಚಿಸೋದು ನಿಲ್ಲಿಸಿ

Team Udayavani, Mar 29, 2018, 6:20 AM IST

Kumar-Bangarappa.jpg

ಶಿವಮೊಗ್ಗ: “ಬಂಗಾರಪ್ಪನವರ ಹೆಸರು ಹೇಳಿಕೊಂಡು ಚುನಾವಣಾ ಪ್ರಚಾರ ನಡೆಸುವುದನ್ನು ಶಾಸಕ ಮಧು ಬಂಗಾರಪ್ಪ ಹಾಗೂ ಗೀತಾ ಶಿವರಾಜ್‌ ಕುಮಾರ್‌ ನಿಲ್ಲಿಸಬೇಕು. ಜೆಡಿಎಸ್‌ ಪಕ್ಷದ ಹೆಸರಿನಲ್ಲಿ ಪ್ರಚಾರ ಕೈಗೊಳ್ಳಲಿ. ಇದನ್ನು ಯಾರೂ ಪ್ರಶ್ನಿಸುವುದಿಲ್ಲ’ ಎಂದು ಕುಮಾರ್‌ ಬಂಗಾರಪ್ಪ ತಾಕೀತು ಮಾಡಿದ್ದಾರೆ.

ನಗರದಲ್ಲಿ ಬುಧವಾರ ಮಾತನಾಡಿ, “ಇಷ್ಟು ದಿನ ಎಲ್ಲವನ್ನೂ  ಸಹಿಸಿಕೊಂಡಿದ್ದೆ. ಕುಟುಂಬದ ವಿಚಾರ ಬಹಿರಂಗವಾಗಬಾರದು ಎಂದುಕೊಂಡಿದ್ದೆ. ಆದರೆ, ಪದೇ ಪದೆ ಮಾನಸಿಕವಾಗಿ ಘಾಸಿಗೊಳಿಸುತ್ತಿದ್ದಾರೆ. ಹೆತ್ತ ತಂದೆ ತಾಯಿಯನ್ನು ಕಡೆಗಣಿಸುವ ಮಗ ನಾನಲ್ಲ. ಅಂತಹ ಮನಃಸ್ಥಿತಿಯೂ ನನಗಿಲ್ಲ. ಆದರೂ ತಮ್ಮ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿರುವುದು ದುರಂತ. ರಾಜಕೀಯವಾಗಿ ತಮ್ಮ ಮಧ್ಯೆ ಏನೇ ಭಿನ್ನಾಭಿಪ್ರಾಯವಿರಲಿ, ಕೌಟುಂಬಿಕವಾಗಿ ನಾವೆಲ್ಲರೂ ಒಂದಾಗಿರಬೇಕು. ಆದರೆ, ಇದಕ್ಕೆ ಕೆಲವರು ಆಸ್ಪದ ನೀಡುತ್ತಿಲ್ಲ. ಕುಟುಂಬದ ಮಧ್ಯೆ ಹುಳಿ ಹಿಂಡುವ ಕೆಲಸದಲ್ಲಿ ನಿರತರಾಗಿದ್ದಾರೆ’ ಎಂದು ದೂರಿದರು.

ವಾಸ್ತವದಲ್ಲಿ ತಂದೆ-ತಾಯಿಯನ್ನು ಮಧು ಬಂಗಾರಪ್ಪ  ಬ್ಲ್ಯಾಕ್‌ವೆುàಲ್‌ ಮಾಡಿ ಕರೆದುಕೊಂಡು ಹೋಗಿದ್ದೇ ಹೊರತು, ಹೊರಹಾಕಿದ್ದಲ್ಲ. ತಮ್ಮ ಮೇಲಿನ ಆರೋಪ ಸತ್ಯಕ್ಕೆ ದೂರ ಎಂದರು.  ಜೊತೆಗೆ, ರಾಜಕೀಯವಾಗಿಯೂ ಬಂಗಾರಪ್ಪ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಹೋದರ ಹಾಗೂ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದರು. ಈ ಕುರಿತು ಮಾಜಿ ಸಚಿವ ಹರತಾಳು ಹಾಲಪ್ಪ ಅವರಲ್ಲಿ ಸಂಪೂರ್ಣ ಮಾಹಿತಿ ಇದೆ. ಇದೇ ಕಾರಣಕ್ಕೆ ಅವರನ್ನು ಪ್ರಕರಣವೊಂದರಲ್ಲಿ ಸಿಲುಕಿಸಲಾಯಿತು ಎಂದು ಆರೋಪಿಸಿದರು.

ರಾಜ್‌ ಕುಟುಂಬದಲ್ಲೂ ಹುಳಿ ಹಿಂಡುವ ಕೆಲಸ
“ಎಲ್ಲರೂ ಒಟ್ಟಾಗಿರಬೇಕು ಎಂದು ರಾಜ್‌ಕುಮಾರ್‌ ಕುಟುಂಬ ಪ್ರಯತ್ನ ಮಾಡುತ್ತದೆ. ಆದರೆ ಕೆಲವರು ಕುಟುಂಬ ಒಡೆಯುವ ಕೆಲಸ ಮಾಡುತ್ತಿದ್ದಾರೆ.  ರಾಜ್‌ ಕುಮಾರ್‌ ಕುಟುಂಬದಲ್ಲೂ ಹುಳಿ ಹಿಂಡುವ ಕೆಲಸದಲ್ಲಿ ತೊಡಗಿದ್ದಾರೆ’ ಎಂದು ಕುಮಾರ್‌ ಬಂಗಾರಪ್ಪ ಹೇಳಿದರು.

ಕಳೆದ ಚುನಾವಣೆಯಲ್ಲಿ ಬಂಗಾರಪ್ಪರ ಹೆಸರನ್ನು ಮುಂದಿಟ್ಟುಕೊಂಡು ಅನುಕಂಪದ ಆಧಾರದ ಮೇಲೆ ಮತ ಯಾಚಿಸಿದರು. ಅಷ್ಟೇ ಅಲ್ಲದೆ, ಅನಾರೋಗ್ಯಕ್ಕೆ ಈಡಾಗಿದ್ದ ತಮ್ಮ ತಾಯಿಯನ್ನು ಪ್ರಚಾರಕ್ಕೆ ಕರೆದೊಯ್ದರು. ಇದು ನಿಜಕ್ಕೂ ಬೇಸರದ ಸಂಗತಿ ಎಂದರು. ಶಾಸಕ ಮಧು ಬಂಗಾರಪ್ಪ ತಮ್ಮ ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳಲಿ. ರಾಜಕೀಯದಲ್ಲಿ ಹಿರಿಯರಾಗಿರುವ ಯಡಿಯೂರಪ್ಪ ಕುರಿತು ಅತ್ಯಂತ ಕೆಟ್ಟ ಪದಗಳನ್ನು ಬಳಕೆ ಮಾಡುತ್ತಿದ್ದಾರೆ. ಇದು ಖಂಡನೀಯ. ಜೊತೆಗೆ ಸಚಿವ ಅನಂತ್‌ ಕುಮಾರ್‌ ಹೆಗಡೆಯವರನ್ನೂ ಬಿಟ್ಟಿಲ್ಲ. ರಾಮಚಂದ್ರಾಪುರ ಮಠದ ಶ್ರೀಗಳ ಕುರಿತಾಗಿಯೂ ಅತ್ಯಂತ ಕೆಟ್ಟದಾಗಿ ನಾಲಿಗೆ ಹರಿಯಬಿಟ್ಟಿದ್ದಾರೆ. ಇಂತಹವರು ಜೆಡಿಎಸ್‌ ಶಾಸಕರಾಗಿರುವುದು ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

“40 ಪರ್ಸೆಂಟ್‌ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ

Congress: “40 ಪರ್ಸೆಂಟ್‌ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.