ರಾಜ್ಯದಲ್ಲಿ ಇನ್ನೂ ಮೂರು ಸೋಲಾರ್ ಪಾರ್ಕ್ ಸ್ಥಾಪನೆ
Team Udayavani, Mar 29, 2018, 6:45 AM IST
ಬೆಂಗಳೂರು: ಪಾವಗಡದ ಸೋಲಾರ್ ಪಾರ್ಕ್ ಮಾದರಿಯಲ್ಲೇ ಇನ್ನೂ ಮೂರು ಸೋಲಾರ್ ಪಾರ್ಕ್ಗಳನ್ನು ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪ್ರಸ್ತುತ ಪಾವಗಡದ ಸೋಲಾರ್ ಪಾರ್ಕ್ ಇರುವ ಜಾಗದ ಸಮೀಪದಲ್ಲೇ ಮತ್ತೂಂದು ಸೋಲಾರ್ ಪಾರ್ಕ್ ಹಾಗೂ ಗದಗ ಜಿಲ್ಲೆಯ ರೋಣಾ ವಿಧಾನಸಭಾ ಕ್ಷೇತ್ರದಲ್ಲಿ ಅಷ್ಟೇ ಸಾಮರ್ಥ್ಯದ ಸೋಲಾರ್ ಪಾರ್ಕ್ ನಿರ್ಮಿಸಲು 20 ಸಾವಿರ ಕೋಟಿ ಹೂಡಿಕೆ ಮಾಡಲು ಖಾಸಗಿಯವರು ಮುಂದೆ ಬಂದಿದ್ದಾರೆ ಎಂದರು.
ಪಾವಗಡದ ಸೋಲಾರ್ ಪಾರ್ಕ್ ಸಮೀಪದಲ್ಲೇ ಏಳು ಸಾವಿರ ಎಕರೆ ಪ್ರದೇಶದಲ್ಲಿ ಒಂದು ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಗ್ರೀನ್ಕೋ ಸಂಸ್ಥೆ ಮುಂದಾಗಿದ್ದು, 5 ಸಾವಿರ ಕೋಟಿ ಹೂಡಿಕೆ ಮಾಡಲಿದೆ. ರೈತರು ಜಮೀನು ನೀಡಲು ಮುಂದೆ ಬಂದಿದ್ದಾರೆ. ಅದೇ ರೀತಿ ರೋಣಾ ವಿಧಾನಸಭಾ ಕ್ಷೇತ್ರದಲ್ಲೂ ಒಂದು ಸಾವಿರ ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದಿಸಲು ಇದೇ ಸಂಸ್ಥೆ 5 ಸಾವಿರ ಕೋಟಿ ರೂ. ಹೂಡಿಕೆ ಮಾಡಲಿದೆ. ಇದಲ್ಲದೆ, ಬೆಳಗಾವಿಯಲ್ಲಿ ಗ್ರೀನ್ ಕೋ ಕಂಪೆನಿ ಜಲ, ಪವನ ಹಾಗೂ ಸೌರ ವಿದ್ಯುತ್ ಉತ್ಪಾದನೆಗೆ ಸುಮಾರು 10 ಸಾವಿರ ಕೋಟಿ ರೂ. ಹೂಡಿಕೆ ಮಾಡಲಿದ್ದು, 2 ಸಾವಿರ ಮೆಗಾವ್ಯಾಟ್ ತ್ಪಾದನೆಯಾಗಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬಂಡವಾಳ ಹೂಡಿಕೆ ದೃಷ್ಟಿಯಿಂದ ಸೋಲಾರ್ ಪಾರ್ಕ್ಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದ್ದು, ಈ ವಿದ್ಯುತ್ ಖರೀದಿಗೆ ಖಾಸಗಿ ಸಂಸ್ಥೆಯೊಂದಿಗೆ ಸರ್ಕಾರ ಒಪ್ಪಂದ ಮಾಡಿಕೊಳ್ಳುತ್ತಿಲ್ಲ. ಬೇರೆ ರಾಜ್ಯಗಳ ವಿದ್ಯುತ್ ಸ್ಥಾವರಗಳಿಗೆ ಅವರು ವಿದ್ಯುತ್ ಒದಗಿಸಲು ಅವಕಾಶವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.