ಶಿಕ್ಷಕರ ವರ್ಗಾವಣೆಗೂ ಎಲೆಕ್ಷನ್ ಬಿಸಿ
Team Udayavani, Mar 29, 2018, 6:00 AM IST
ಬೆಂಗಳೂರು : ಆಮೆ ವೇಗದಲ್ಲಿ ಸಾಗುತ್ತಿದ್ದ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಹೆಚ್ಚು ಕಡಿಮೆ ಈಗ ಶಾಶ್ವತವಾಗಿ ಸ್ಥಗಿತಗೊಂಡಿದೆ.
ಮಂಗಳವಾರವಷ್ಟೇ ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ವರ್ಗಾವಣೆ ಪ್ರಕ್ರಿ ಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವರ್ಗಾವಣೆ ಕಷ್ಟಸಾಧ್ಯ ಎಂದೇ ಹೇಳಲಾಗುತ್ತಿದೆ.
ವರ್ಗಾವಣೆಗಾಗಿ ಚಾತಕ ಪಕ್ಷಿಯಂತೆ ಕಾದುಕುಳಿತಿರುವ ಶಿಕ್ಷಕರಿಗೆ ಮತ್ತೆ ನಿರಾಸೆಯಾಗಿದೆ. ಕಡ್ಡಾಯ ವರ್ಗಾವಣೆ ಪಟ್ಟಿ ಬಿಡುಗಡೆ ಮಾಡಿ, ಅರ್ಹರಿಂದ ಆಕ್ಷೇಪಣೆ ಆಹ್ವಾನಿಸಿರುವುದು ಹೊರತುಪಡಿಸಿ ಬೇರೆ ಯಾವುದೇ ಪ್ರಕ್ರಿಯೆ ನಡೆಯುತ್ತಿಲ್ಲ.ಒಂದೇ ಶಾಲೆಯಲ್ಲಿ ಹತ್ತು ವರ್ಷಕ್ಕಿಂತ ಅಧಿಕ ಸೇವೆ ಸಲ್ಲಿಸಿದ ಶಿಕ್ಷಕರನ್ನು ಕಡ್ಡಾಯ ವರ್ಗಾವಣೆ ಮಾಡಲು ಸರ್ಕಾರ ಇತ್ತೀಚೆಗೆ ಶಿಕ್ಷಕರ ವರ್ಗಾವಣೆ ಕಾಯ್ದೆಯಲ್ಲಿ ತಿದ್ದುಪಡಿ ತಂದಿತ್ತು. ಕಡ್ಡಾಯ ವರ್ಗಾವಣೆ ಪಟ್ಟಿ ಸಿದ್ಧಪಡಿಸಿ, ಪ್ರಕಟಿಸಿಯೂ ಆಗಿದೆ. ಆಕ್ಷೇಪಣೆಯನ್ನು ಕರೆಯಲಾಗಿದೆ. ಉಳಿದಂತೆ ಯಾವುದೇ ಪ್ರಕ್ರಿಯೆ ನಡೆಯುತ್ತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉನ್ನತ ಮೂಲ ಸ್ಪಷ್ಟಪಡಿಸಿದೆ.
ದಂಪತಿ ಶಿಕ್ಷಕರ ವರ್ಗಾವಣೆ, ಪರಸ್ಪರ ಮತ್ತು ಕೋರಿಕೆ ವರ್ಗಾವಣೆ ಫೆ.22ರಿಂದ ಆರಂಭವಾಗಿ ಏ.30ರೊಳಗೆ ಕೌನ್ಸೆಲಿಂಗ್ ಪ್ರಕ್ರಿಯೆ ಪೂರ್ಣಗೊಳ್ಳಬೇಕಿತ್ತು. ಅರ್ಜಿ ಸ್ವೀಕರಿಸಿದ ನಂತರದ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಜತೆಗೆ ಇದೀಗ ಚುನಾವಣೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೂಡ ವರ್ಗಾವಣಾ ಪ್ರಕ್ರಿಯೆ ನಡೆಸುವುದು ಅನುಮಾನ ಎಂದು ಹೇಳಲಾಗಿದೆ.
ಶಿಕ್ಷಣ ಇಲಾಖೆ ಈ ಹಿಂದೆ ಹೊರಡಿಸಿದ್ದ ಸುತ್ತೋಲೆ ಪ್ರಕಾರ ಏ.30ರೊಳಗೆ ವರ್ಗಾವಣೆಯ ಪ್ರಕ್ರಿಯೆ ಸಂಪೂರ್ಣ ಮುಗಿಯಲಿದೆ. ಮುಂದಿನ ಶೈಕ್ಷಣಿಕ ವರ್ಷ (2018-19) ಆರಂಭದಲ್ಲಿ ವರ್ಗಾವಣೆ ಪಡೆದ ಶಿಕ್ಷಕರಿಗೆ ಸ್ಥಳ ನಿಯೋಜನೆಯ ಆದೇಶ ನೀಡಲಾಗುತ್ತದೆ ಎಂದು ತಿಳಿಸಲಾಗಿತ್ತು. ಆದರೆ, ವರ್ಗಾವಣೆ ಪ್ರಕ್ರಿಯೆ ಆಮೆ ವೇಗದಲ್ಲಿ ಸಾಗುತ್ತಿರುವುದರಿಂದ ನಿಗದಿತ ವೇಳಾಪಟ್ಟಿಯಂತೆ ಕೌನ್ಸೆಲಿಂಗ್ ನಡೆಯದು.
ವರ್ಗಾವಣೆ ಪ್ರಕ್ರಿಯೆ ಸಕಾಲದಲ್ಲಿ ಪ್ರಾರಂಭವಾಗದೆ ವಿಳಂಬವಾಗಲು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಹಾಗೂ ಇಲಾಖೆ ಪ್ರಧಾನ ಕಾರ್ಯದರ್ಶಿ ನಡುವೆ ಸಮನ್ವಯದ ಕೊರತೆಯೂ ಕಾರಣ ಎಂದು ಹೇಳಲಾಗಿದೆ.
ವರ್ಗಾವಣೆ ಸಾಫ್ಟ್ವೇರ್ ಸಮಸ್ಯೆಯೂ ವರ್ಗಾವಣೆ ಪ್ರಕ್ರಿಯೆ ವಿಳಂಬವಾಗಲು ಕಾರಣವಾಗಿದೆ. ಶಿಕ್ಷಕರ ವರ್ಗಾವಣೆ ಸಾಫ್ಟ್ವೇರ್ ಸರ್ವರ್ ಸಮಸ್ಯೆಯಿಂದಾಗಿ ಒಪನ್ ಆಗುತ್ತಿಲ್ಲ. ಸಾಫ್ಟ್ವೇರ್ ಸಮಸ್ಯೆಯನ್ನು ಆದಷ್ಟು ಬೇಗ ಸರಿಪಡಿಸುವಂತೆ ತಾಂತ್ರಿಕ ವಿಭಾಗದ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದಾರೆ.
ಶಿಕ್ಷಕರ ಒತ್ತಡವೂ ಇದೆ:
ಈ ನಡುವೆ, ನಗರ ಪ್ರದೇಶದ (ಎ ವಲಯ) ಒಂದೇ ಶಾಲೆಯಲ್ಲಿ 10 ವರ್ಷಕ್ಕಿಂತ ಅಧಿಕ ಸೇವೆ ಸಲ್ಲಿಸಿದ ಶಿಕ್ಷಕರನ್ನು ಕಡ್ಡಾಯ ವರ್ಗಾವಣೆ ಮಾಡುವುದಾಗಿ ತಿದ್ದುಪಡಿ ತಂದಿರುವುದು ಹತ್ತಾರೂ ವರ್ಷದಿಂದ ಬೀಡುಬಿಟ್ಟಿದ್ದ ಶಿಕ್ಷಕರಿಗೆ ನುಂಗಲಾರದ ತುತ್ತಾಗಿದ್ದು ಅವರು ಗ್ರಾಮೀಣ ಭಾಗಕ್ಕೆ (ಸಿ ವಲಯ) ಹೋಗಲು ಇಷ್ಟಪಡುತ್ತಿಲ್ಲ. ಹೀಗಾಗಿ, ಕೆಲವರು ವರ್ಗಾವಣೆ ಪ್ರಕ್ರಿಯೆಗೆ ತಾತ್ಕಾಲಿಕ ತಡೆ ನೀಡುವ ಪ್ರಯತ್ನವೂ ನಡೆಸುತ್ತಿದ್ದಾರೆ.
ವರ್ಗಾವಣೆ ಪ್ರಕ್ರಿಯೆ ಪೂರ್ಣವಾಗಿ ಸ್ಥಗಿತಗೊಂಡಿಲ್ಲ. ಪೂರ್ವಭಾವಿ ಪ್ರಕ್ರಿಯೆಗಳು ನಡೆಯುತ್ತಿವೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ವರ್ಗಾವಣೆ ಪ್ರಕ್ರಿಯೆ ನಿಲ್ಲಿಸುವಂತೆ ನಮಗೆ ಯಾವುದೇ ಸೂಚನೆ ಬಂದಿಲ್ಲ.
– ಬಸವರಾಜ್ , ನಿರ್ದೇಶಕರು, ಪ್ರಾಥಮಿಕ ಶಿಕ್ಷಣ ಇಲಾಖೆ
ಏಪ್ರಿಲ್ ಮೊದಲ ವಾರದಿಂದ ಕೌನ್ಸೆಲಿಂಗ್ ನಡೆಯಬೇಕು. ಚುನಾವಣೆ ಹಿನ್ನೆಲೆಯಲ್ಲಿ ಕೌನ್ಸೆಲಿಂಗ್ ನಿಲ್ಲಿಸಬಾರದು. ಚುನಾವಣಾ ಆಯೋಗದ ಅನುಮತಿ ಪಡೆದು ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರಿಸಬೇಕು. ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಆದೇಶ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ.
– ಬಸವರಾಜ ಗುರಿಕಾರ್, ಅಧ್ಯಕ್ಷ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.