ಕೃತಕ ಬಿರುಕು ಸೃಷ್ಟಿಸಲು ಸಿದ್ದರಾಮಯ್ಯ ಯತ್ನ

Team Udayavani, Mar 29, 2018, 2:34 PM IST

krutaka.jpg

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಮತ್ತು ದಕ್ಷಿಣ ಭಾರತದ ನಡುವೆ ಕೃತಕ ಬಿರುಕು ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್‌ ಆರೋಪಿಸಿದ್ದಾರೆ. ರಾಜ್ಯಗಳ ನಡುವೆ ತೆರಿಗೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅಗತ್ಯಕ್ಕಿಂತ ಹೆಚ್ಚು ವಿವಾದ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

“ನ್ಯೂಸ್‌ 18′ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಮಾತ್ರವಲ್ಲ, ಉತ್ತರ ಭಾರತದಲ್ಲಿಯೂ ಅಭಿವೃದ್ಧಿ ಸಾಧಿಸಿದರಾಜ್ಯಗಳಿವೆ ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. 

2011ನೇ ಜನಗಣತಿಯನ್ನು ಮುಂದಿಟ್ಟುಕೊಂಡು ರಾಜ್ಯಗಳಿಗೆ ಕೇಂದ್ರದ ಅನುದಾನ ನೀಡಿಕೆ ಎಂಬ 15ನೇ ಹಣಕಾಸು ಆಯೋಗದ ಸಲಹೆಯನ್ನು ಆಕ್ಷೇಪಿಸಿ ಕೇಂದ್ರಕ್ಕೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಅದರಲ್ಲಿ ಕುಟುಂಬ ಯೋಜನೆ ಮತ್ತು ಇತರ ಕೇಂದ್ರ ಯೋಜನೆಗಳ ಅನುಷ್ಠಾನದಲ್ಲಿ ದಕ್ಷಿಣದ ರಾಜ್ಯಗಳೇ ಮುಂದು ಎಂದು ಪ್ರಸ್ತಾಪಿಸಿದ್ದಕ್ಕೆ ರಾಮ್‌ಮಾಧವ್‌ ಈ ತಿರುಗೇಟು ನೀಡಿದ್ದಾರೆ.

 15ನೇ ಹಣಕಾಸು ಆಯೋಗದ ಶಿಫಾರಸುಗಳು ಕೆಲವು ರಾಜ್ಯಗಳಿಗೆ ಅನಾನುಕೂಲವಾಗಲಿದೆ ಎಂಬ ಅಂಶವನ್ನು ಒಪ್ಪಿಕೊಂಡ ರಾಮ್‌ ಮಾಧವ್‌, ಆಯೋಗ ಈ ವರ್ಷವಷ್ಟೇ ಕೆಲಸ ಮಾಡಲು ಆರಂಭಿಸಿದೆ. ಮುಂದಿನ ಸರ್ಕಾರಕ್ಕೆ 2019ರಲ್ಲಿ ಅದು ವರದಿ ಸಲ್ಲಿಸಲಿದೆ. ಹೀಗಾಗಿ ಈ ನಿಟ್ಟಿನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲದ ರಾಜಕಾರಣ ಮಾಡುತ್ತಾರೆ ಎಂದು ದೂರಿದ್ದಾರೆ ಬಿಜೆಪಿ ಪ್ರಧಾನ ಕಾರ್ಯದರ್ಶಿ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಕೂಡ ಸಿದ್ದರಾಮಯ್ಯಗೆ ಬೆಂಬಲ ನೀಡಿದ್ದಾರಲ್ಲ ಎಂಬ ಪ್ರಶ್ನೆ “ಒಂದೇ ಗರಿಯ ಹಕ್ಕಿಗಳು ಅದನ್ನೇ ಮಾಡುತ್ತವೆ. ಈ ಪಕ್ಷಗಳು ರಾಜ್ಯಗಳು ಮತ್ತು ರಾಜ್ಯಗಳ ನಡುವೆ ವೈಷಮ್ಯ ತರುತ್ತವೆ’ ಎಂದರು. 

ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ವಿಚಾರದಲ್ಲಿ ಬಿಜೆಪಿ ಸಿಕ್ಕಿ ಹಾಕಿಕೊಂಡಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಮ್‌ ಮಾಧವ್‌, ಬಿಜೆಪಿ ಅಧ್ಯಕ್ಷ ಅಮಿತ್‌ ಶಾರ ಪ್ರವಾಸ ರಾಜಕೀಯ ಉದ್ದೇಶದ್ದಾಗಿರಲಿಲ್ಲ. ಭೇಟಿಯನ್ನು ರಾಜಕೀಯ ಬಳಸುವುದು ಬಿಡುವುದು ಆಯಾ ಪಕ್ಷಗಳಿಗೆ ಬಿಟ್ಟ ವಿಚಾರ ಎಂದರು. ನಿಗದಿತ ಸಮುದಾಯಕ್ಕೆ ಯಾವ ಬೇಡಿಕೆಯನ್ನು ಈಡೇರಿಸಲಾಗಿದೆಯೋ ಅದನ್ನು ರಾಜಕೀಯ ದಾಳವಾಗಿ ಬಳಕೆ ಮಾಡುವ ಬಗ್ಗೆ ಆಯಾ ಪಕ್ಷಗಳೇ ಯೋಚಿಸಬೇಕು ಎಂದಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ ಅನ್ನು ಹಿಂದೂ ವಿರೋಧಿ ಎಂದು ಬಿಜೆಪಿ ಚಿತ್ರಿಸುತ್ತಿದೆ. ಅದು ಮೇ 15ರಂದು ಫ‌ಲ ನೀಡಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ನಾಯಕ, ಕಾಂಗ್ರೆಸ್‌ ತನ್ನನ್ನು ಆ ರೀತಿ ಬಿಂಬಿಸುತ್ತಿದೆ. ಆದರೆ ಬಿಜೆಪಿ ಆ ರೀತಿ ಹೇಳಿಯೇ ಇಲ್ಲವೆಂದಿದ್ದಾರೆ. ವಿವಿಧ ದೇಗುಲಗಳಿಗೆ ಭೇಟಿ ನೀಡುವ ಮೂಲಕ ತಾವು ಹಿಂದೂ ವಿರೋಧಿಯಲ್ಲವೆಂಬ ಭಾವನೆ ಸೃಷ್ಟಿಸುತ್ತಿದ್ದಾರೆ ಎಂದರು.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಜೆಡಿಎಸ್‌ ಅನ್ನು ಬಿಜೆಪಿಯ ಬಿ ಟೀಂ ಎಂದು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ರಾಮ್‌ ಮಾಧವ್‌, ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಆಡಳಿತವನ್ನು ರಾಜ್ಯದ ಜನರು ನೋಡಿದ್ದಾರೆ. ಜನರು ಈಗ ಅವರು ಮಾಡುವ ಟೀಕೆಗೆ ನಗುತ್ತಿದ್ದಾರೆ. ಕಾಂಗ್ರೆಸಿಗರು ಜೆಡಿಎಸ್‌ ಅನ್ನು ಬಳಸಿಕೊಂಡದ್ದಕ್ಕೆ ಬಿಜೆಪಿಯನ್ನು ಹೊಣೆ ಮಾಡಬಾರದು ಎಂದರು.

ಟಾಪ್ ನ್ಯೂಸ್

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.