ಬಂದೂಕು ಒಪ್ಪಿಸಲು ಸೂಚನೆ
Team Udayavani, Mar 29, 2018, 2:34 PM IST
ಬೆಂಗಳೂರು: ಚುನಾವಣೆ ದಿನಾಂಕ ಘೋಷಣೆ ಹಿನ್ನೆಲೆಯಲ್ಲಿ ನಾಗರಿಕರು ಹೊಂದಿರುವ ಪರವಾನಗಿ ಬಂದೂಕುಗಳನ್ನು ಕೂಡಲೇ ಪೊಲೀಸರಿಗೆ ಒಪ್ಪಿಸುವಂತೆ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಆದೇಶಿಸಿದ್ದಾರೆ.
ಕೇಂದ್ರ ಚುನಾವಣಾ ಆಯೋಗ ಸೂಚನೆ ಮೇರೆಗೆ ಶಾಂತಿಯುತ ಮುತದಾನ ನಡೆಸುವ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪರವಾನಗಿ ಹೊಂದಿರುವವರು ಚುನಾವಣೆ ಅಂತ್ಯಗೊಳ್ಳುವವರೆಗೂ ತಮ್ಮ ವ್ಯಾಪ್ತಿಯ ಠಾಣೆಗಳಲ್ಲಿ ಬಂದೂಕುಗಳನ್ನು ಒಪ್ಪಿಸಿ ಪೊಲೀಸರಿಂದ ಸ್ವೀಕೃತಿ ಪಡೆಯಬೇಕು. ಮೇ 18ರಂದು ಮತ ಎಣಿಕೆ ಅಂತ್ಯಗೊಂಡ ನಂತರ ವಾಪಸ್ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.
ಒಂದು ವೇಳೆ ಪರವಾನಗಿದಾರರು ಬಂದೂಕುಗಳನ್ನು ತಮ್ಮ ಬಳಿಯೇ ಇಟ್ಟುಕೊಳ್ಳುವ ವಿನಾಯಿತಿ ಬೇಕಾದರೆ ಏ.10ರೊಳಗೆ ತಮ್ಮ ವ್ಯಾಪ್ತಿಯ ಉಪ ಪೊಲೀಸ್ ಆಯುಕ್ತರಿಗೆ ಅರ್ಜಿ ಸಲ್ಲಿಸಬೇಕು. ಸೂಕ್ತಕಾರಣ ನೀಡಬೇಕೆಂದು ತಿಳಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಹಾಗೂ ಖಾಸಗಿ ಉದ್ಯಮಗಳು. ಅಂದರೆ ಬ್ಯಾಂಕ್ಗಳು, ಭದ್ರತಾ ಏಜೆಸ್ಸಿ ಸಂಸ್ಥೆಗಳು. ಸರ್ಕಾರದ ಅನಮತಿ ಪಡೆದು ಖಾಸಗಿ ಆಡಳಿತ ಮಂಡಳಿಗಳಿಗೆ ನೀಡಿದ ಭದ್ರತೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗೆಜೆಟೆಡ್ ಅಧಿಕಾರಿಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
MUST WATCH
ಹೊಸ ಸೇರ್ಪಡೆ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.