ಮಕ್ಕಳ ರಕ್ಷಣೆ ಎಲ್ಲರ ಕರ್ತವ್ಯವಾಗಲಿ
Team Udayavani, Mar 29, 2018, 3:15 PM IST
ವಿಜಯಪುರ: ಮಕ್ಕಳ ಹಕ್ಕುಗಳ ಒಡಂಬಡಿಕೆಯನ್ವಯ ಪ್ರತಿಯೊಂದು ಮಗುವಿಗೂ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಮಕ್ಕಳ ಸಂರಕ್ಷಣೆ ಮಾಡುವುದು ನಮ್ಮ ಕರ್ತವ್ಯದ ಜೊತೆಗೆ ಅದು ನಮ್ಮ ಸ್ವಾಭಾವಿಕ ಸೇವೆಯಾಗಬೇಕು ಎಂದು ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ಅಭಿಪ್ರಾಯಪಟ್ಟರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವರ್ಲ್ಡ್ ವಿಜನ್ ವಿಜಯಪುರ ಇವರ ಸಹಯೋಗದಲ್ಲಿ ನಗರದ ಚಿಂತನಾ ಹಾಲ್‌ನಲ್ಲಿ ಸರ್ಕಲ್ ಪೊಲೀಸ್ ಇನ್ಸ್‌ಪೆಕ್ಟರ್, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಮಹಿಳಾ ಪೊಲೀಸ್ ಪೇದೆ ಹಾಗೂ ಗ್ರಾಮ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸದಸ್ಯರಿಗೆ ಆಯೋಜಿಸಿದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ-2012, ಬಾಲ ನ್ಯಾಯ (ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ಹಾಗೂ ಮಕ್ಕಳ ಸಂರಕ್ಷಣೆ ಕುರಿತ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಾಣಿಗಳು ಸಹ ತಮ್ಮ ಮಕ್ಕಳನ್ನು ರಕ್ಷಣೆ ಮಾಡುವಲ್ಲಿ ತಮನ್ನು ಸಮರ್ಪಿಸಿಕೊಳ್ಳುತ್ತವೆ. ಆದರೆ ಮನುಷ್ಯ ಜೀವಿಯು ಮಕ್ಕಳ ಮೇಲೆ ದೌರ್ಜನ್ಯ ಮಾಡಿದ ಪ್ರಕರಣಗಳನ್ನು ನಾವು ಕಾಣುತ್ತಿದ್ದೇವೆ ಎಂದು ವಿಷಾದಿಸಿದರು.
ಮಕ್ಕಳು-ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಯಲು ಎಲ್ಲ ಅಧಿಕಾರಿ ವರ್ಗದವರು ಕರ್ತವ್ಯದ ಜೊತೆಗೆ ಅದು ನಮ್ಮ ಸ್ವಾಭಾವಿಕ ಸೇವೆ ಆಗಬೇಕು. ಮುಗª ಮಕ್ಕಳ ಅಮಾಯಕತೆ ದುರ್ಬಳಕೆ ಮಾಡಿಕೊಂಡು ದೌರ್ಜನ್ಯ ಎಸಗುವವರ ವಿರುದ್ಧ ಕಾನೂನು ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.
ಒಂದನೇ ಹೆಚ್ಚುವರಿ ದಿವಾಣಿ ನ್ಯಾಯಾಧೀಶರೂ ಆಗಿರುವ ಬಾಲ ನ್ಯಾಯ ಮಂಡಳಿ ಅಧ್ಯಕ್ಷ ಬೋಲಾ ಪಂಡಿತ ಮಾತನಾಡಿ, ಕಾನೂನಿನ ಜೊತೆ ಸಂಘರ್ಷಕ್ಕೊಳಗಾದ ಮಗುವನ್ನು ಬಾಲ ನ್ಯಾಯ ಮಂಡಳಿ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತದೆ. ಮಗುವಿನ್ನು ಪರಿವರ್ತನೆ ಮಾಡುವಾಗ ಕೇವಲ ಭೌತಿಕ ಅಂಶಗಳ ಆಧಾರದ ಮೇಲೆ ಅಧ್ಯಯನ ಮಾಡದೆ, ಆ ಮಗುವಿನ ಮಾನಸಿಕ ಅಂಶಗಳನ್ನು ಅಧ್ಯಯನ ಮಾಡಿ, ಸೂಕ್ತ ರೀತಿಯಾಗಿ ಆ ಮಗುವನ್ನು ಭವಿಷ್ಯತ್ತಿನ ಉತ್ತಮ ಪ್ರಜೆಯನ್ನಾಗಿ ಮಾಡುವಲ್ಲಿ ಎಲ್ಲರೂ ಶ್ರಮ
ವಹಿಸಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಮಾತನಾಡಿ, ಮಕ್ಕಳ ಸಂರಕ್ಷಣೆ ಕುರಿತು ನಮ್ಮ ದೇಶದಲ್ಲಿ ಹಲವಾರು ಕಾನೂನುಗಳಿವೆ. ಅವುಗಳ ಕುರಿತು ಪ್ರತಿಯೊಬ್ಬ ಜನಸಾಮಾನ್ಯರಿಗೂ ಅರಿವು ಮೂಡಿಸಲು ಪದೇ ಪದೇ ಇಂಥ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವುದು ಸೂಕ್ತ. ಮಕ್ಕಳ ಸಂರಕ್ಷಣೆ ವಿಷಯದಲ್ಲಿ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಕಾರ್ಯಾಗಾರದಲ್ಲಿ ಮಕ್ಕಳ ಸಂರಕ್ಷಣೆ ಕುರಿತು ಪಡೆದ ಮಾಹಿತಿ ಸಮರ್ಪಕವಾಗಿ ಜಾರಿಗೆ ತರಲು ಎಲ್ಲ ಪೊಲೀಸ್ ಠಾಣೆ ಸಿಬ್ಬಂದಿಗಳು ಪ್ರಾಮಾಣಿಕ ಕರ್ತವ್ಯ ನಿಭಾಯಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಅಶೋಕ ಕೆಲವಡಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಿರ್ಮಲಾ ಸುರಪುರ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಕಲಾವತಿ ಕಾಂಬಳೆ, ಕಾರ್ಯಕ್ರಮ ವ್ಯವಸ್ಥಾಪಕರು ವರ್ಲ್ಡ್ ವಿಜನ್ ಸಂಸ್ಥೆಯ ಎಸ್.ಸುನಂದಾ ಇದ್ದರು. ಎಸ್.ಆರ್. ಕೊಣ್ಣೂರ ಪ್ರಾರ್ಥಿಸಿದರು. ಮೌನೇಶ ಪೋತದಾರ ಸ್ವಾಗತಿಸಿದರು. ಗುರುರಾಜ ಇಟಗಿ ನಿರೂಪಿಸಿದರು. ವಾಣಿಶ್ರೀ ನಿಂಬಾಳ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.