ಪ್ರತಿಯೊಬ್ಬರು ಕಡ್ಡಾಯವಾಗಿ ಮತ ಚಲಾಯಿಸಿ
Team Udayavani, Mar 29, 2018, 5:01 PM IST
ಬಳ್ಳಾರಿ: ಕಡ್ಡಾಯ ಮತ್ತು ನೈತಿಕ ಮತದಾನ ಮಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವೀಪ್ ಸಮಿತಿ ಮತ್ತು ಸರಳಾದೇವಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ನಗರದಲ್ಲಿ ಬುಧವಾರ ಮತದಾರರ ಜಾಗೃತಿ ಜಾಥಾ ನಡೆಸಲಾಯಿತು.
ನಗರದ ಸರಳಾದೇವಿ ಕಾಲೇಜಿನ ಆವರಣದಲ್ಲಿ ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ ಜಾಥಾಗೆ ಚಾಲನೆ ನೀಡಿದರು. ಕೈಯಲ್ಲಿ ಘೋಷಣೆಗಳುಳ್ಳ ಫಲಕಗಳನ್ನು ಹಿಡಿದಿದ್ದ ವಿದ್ಯಾರ್ಥಿಗಳು ಕಡ್ಡಾಯ ಮತದಾನ ಮತ್ತು ಮತದಾನದ ಮಹತ್ವ ಕುರಿತು ಘೋಷಣೆಗಳನ್ನು ಕೂಗುತ್ತಾ ಗಮನ ಸೆಳೆದರು.
ಕಾಲೇಜಿ ನಿಂದ ಚಾಲನೆ ಪಡೆದುಕೊಂಡ ಜಾಥಾವು ಗಡಗಿ ಚನ್ನಪ್ಪ ವೃತ್ತಕ್ಕೆ ತಲುಪಿತು. ವೃತ್ತದಲ್ಲಿ ಕೆಲಹೊತ್ತು ಮಾನವ ಸರಪಳಿ ನಿರ್ಮಿಸಿದ ವಿದ್ಯಾರ್ಥಿಗಳು ಬೀದಿ ನಾಟಕದ ಮೂಲಕ ಕಲಾವಿದರು ಮತದಾನದ ಮಹತ್ವ ಸಾರಿದರು. ಕಡ್ಡಾಯ ಮತದಾನ, ನೈತಿಕ ಮತದಾನ, ವಿವೇಚನಯುತ ಮತದಾನದ ಕುರಿತು ಕಲಾವಿದರು ಜಾನಪದ ಹಾಡುಗಳು ಮತ್ತು ಸಂಭಾಷಣೆಯ ಮೂಲಕ ಜಾಗೃತಿ ಮೂಡಿಸಿದರು.
ಬಲಿಷ್ಠ ಭಾರತಕ್ಕೆ ಮತದಾನ ಮಾಡಿ, ನಿಮ್ಮ ಅಮೂಲ್ಯ ಮತ ಚಲಾಯಿಸಿ, ಮತ ಚಲಾಯಿಸೋಣ ರಾಷ್ಟ್ರ ನಿರ್ಮಾಣ
ಮಾಡೋಣ, ಮತ ಚಲಾಯಿಸಿ ಜಾಣರೆನಿಸಿ, ನಿಮ್ಮ ಮತ ಸುಭದ್ರ ಸರ್ಕಾರದ ಆಯ್ಕೆಗೆ, ಮತ ಮಾರಾಟಕ್ಕಿಲ್ಲ, ಕಡ್ಡಾಯ ಮತ ಚಲಾಯಿಸಿ, ಸಮರ್ಥ ಅಭ್ಯರ್ಥಿ ಆರಿಸಿ ದೇಶದ ಘನತೆಯನ್ನು ಹೆಚ್ಚಿಸಿ ಎಂಬ ಫಲಕಗಳಲ್ಲಿನ ಘೋಷವಾಕ್ಯಗಳನ್ನು ವಿದ್ಯಾರ್ಥಿಗಳು ಕೂಗಿ ಜನರಲ್ಲಿ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ| ರಾಮ್ ಪ್ರಸಾತ್ ಮನೋಹರ್, ಎಸ್‌ಪಿ ಅರುಣ್ ರಂಗರಾಜನ್, ಜಿಪಂ ಯೋಜನಾ ನಿರ್ದೇಶಕ ಚಂದ್ರಶೇಖರ ಗುಡಿ, ಕಾಲೇಜು ಪ್ರಾಂಶುಪಾಲ ಡಾ| ಅಬ್ದುಲ್ ಮುತಾಲಿಬ್,
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಾಮಲಿಂಗಪ್ಪ ಬಿ.ಕೆ, ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಸೇರಿದಂತೆ ಐದು ನೂರಕ್ಕು ಹೆಚ್ಚು ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.
ಚುನಾವಣಾ ದೂರು ನಿವಾರಣಾ ಕೇಂದ್ರ
ಬಳ್ಳಾರಿ: ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2018ರ ವಿಧಾನಸಭೆ ಚುನಾವಣೆಗೆ ಸಂಬಂಧಪಟ್ಟ ದೂರುಗಳನ್ನು
ನಿವಾರಿಸಲು ಮಹಾನಗರ ಪಾಲಿಕೆಯಲ್ಲಿ 24×7 ದೂರು ನಿವಾರಣಾ ಕೇಂದ್ರ ತೆರೆಯಲಾಗಿದೆ ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಸಾರ್ವಜನಿಕರು ವಿಧಾನಸಭೆ ಚುನಾವಣೆ ಸಂಬಂಧಿತ ಯಾವುದೇ ದೂರುಗಳನ್ನು ಈ ಕೇಂದ್ರದ (08392-273479) ದೂರವಾಣಿಗೆ ಕರೆ ಮಾಡಿ ದೂರು ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೀತಿ ಸಂಹಿತೆ: ಪಡಿತರ ಚೀಟಿ ಸ್ಥಗಿತ
ಬಳ್ಳಾರಿ: 2018ರ ವಿಧಾನಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿಗಳ ವಿತರಣೆ ಹಾಗೂ ಎಂಎಂಎಬಿವೈ (ಮುಖ್ಯ ಮಂತ್ರಿಗಳ ಅನಿಲ ಭಾಗ್ಯ ಯೋಜನೆ) ಕಾರ್ಯವನ್ನು ತಕ್ಷಣದಿಂದ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ. ಚುನಾವಣಾ ಪ್ರಕ್ರಿಯೆ ಮುಗಿದ ನಂತರ ಪುನಃ ಈ ಪಡಿತರ ಚೀಟಿ ವಿತರಣಾ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.