ಜಿಗಿ ಜಿಗಿತ ಶುರು; ಕೈ ಬಿಟ್ಟ ಗುತ್ತೇದಾರ್ ಬಿಜೆಪಿಯತ್ತ ಪಯಣ
Team Udayavani, Mar 30, 2018, 6:00 AM IST
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಗೊಂಡ ಬೆನ್ನಲ್ಲೇ ಮೂರೂ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ಪ್ರಾರಂಭಗೊಂಡಿವೆ. ಮತ್ತೂಂದೆಡೆ “ಪಕ್ಷಾಂತರ ಪರ್ವ’ಕ್ಕೂ ಚಾಲನೆ ದೊರೆತಿದ್ದು, ವಾಕ್ಸಮರವೂ ಮುಂದುವರಿದಿದೆ.
ಹಿರಿಯ ಮುಖಂಡ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿ ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಅವರು ಕಾಂಗ್ರೆಸ್ ಬಿಡುವ ತೀರ್ಮಾನ ಪ್ರಕಟಿಸಿ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರುವುದಾಗಿ ಘೋಷಿಸಿದರು. ಈ ಬೆಳವಣಿಗೆ ಮಧ್ಯೆಯೇ ಕೆಪಿ ಸಿಸಿ ಅಧ್ಯಕ್ಷ ಪರಮೇಶ್ವರ್ ಅವರು,ಮಾಲೀಕಯ್ಯ ಗುತ್ತೇದಾರ್ ಅವರನ್ನು ಆರು ವರ್ಷ ಪಕ್ಷ ದಿಂದ ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ.
ಅತ್ತ ಮೈಸೂರಿನಲ್ಲಿ ಮಾಜಿ ಮೇಯರ್ ಸಂದೇಶ್ ಸ್ವಾಮಿ ಜೆಡಿಎಸ್ ತೊರೆದು ಬಿಜೆಪಿ ಸೇರಲು ತೀರ್ಮಾನಿಸಿದ್ದಾರೆ. ಆವರ ಸಹೋದರ ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ನನ್ನನ್ನು ಪಕ್ಷದಿಂದ ಬಿಡುಗಡೆ ಮಾಡಿ ಎಂದು ಜೆಡಿಎಸ್ ಅಧ್ಯಕ್ಷ ಎಚ್.ಡಿ.ದೇವೇಗೌಡರನ್ನು ಕೇಳುತ್ತಿದ್ದೇನೆ ಎಂದು ಹೇಳಿದ್ದಾರೆ.
ಸಂದೇಶ್ ಸಹೋದರರ ವರ್ತನೆ ಬಗ್ಗೆ ಕಿಡಿ ಕಾರಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇವರ ನಡೆ ಗೊತ್ತಿದ್ದದ್ದೇ. ಸಂದೇಶ್ ನಾಗರಾಜ್ ಅವರು ಮೊದಲು ಜೆಡಿಎಸ್‌ನ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸವಾಲು ಹಾಕಿದ್ದಾರೆ. ಇವರ ನಿರ್ಗಮನದಿಂದ ಪಕ್ಷಕ್ಕೆ ಯಾವುದೇ ಹಾನಿಯಿಲ್ಲ ಎಂದೂ ಹೇಳಿದ್ದಾರೆ.
ಈ ಮಧ್ಯೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸ ಗುರುವಾರ ಇಡೀ ದಿನ ಚಟುವಟಿಕೆ ತಾಣವಾಗಿತ್ತು. ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಹರತಾಳು ಹಾಳಪ್ಪ, ಬೇಳೂರು ಗೋಪಾಲಕೃಷ್ಣ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಪ್ರಗತಿಪರರ ನಿಯೋಗ ಎ.ಕೆ.ಸುಬ್ಬಯ್ಯಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬಿಜೆಪಿ ಅಧಿಕಾರಕ್ಕೆ ಬರದಂತೆ ತಡೆಯಲು ಜಾತ್ಯತೀತ ಶಕ್ತಿಗಳೊಡನೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಿ ಎಂಬ ಸಲಹೆಯನ್ನೂ ನೀಡಿತು. ಇದಕ್ಕೆ ಸಿದ್ದರಾಮಯ್ಯ ಜೆಡಿಎಸ್ ಜತೆ ಮಾತ್ರ ಮೈತ್ರಿ ಸಾಧ್ಯವಿಲ್ಲ, ಇತರೆ ಸಮಾನ ಪಕ್ಷಗಳ ಜತೆ ಮಾತುಕತೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದರು.
ಇದಾದ ನಂತರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪಾದಯಾತ್ರೆ, ರೋಡ್ ಶೋ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಾಮುಂಡೇಶ್ವರಿಯಲ್ಲಿ ನಾನೇ ನಿಲೆ¤àನೆ, ಗೆಲೆ¤àನೆ, ಕುಮಾರಸ್ವಾಮಿ ಕೇಳಿ ರಾಜಕಾರಣ ಮಾಡಬೇಕಿಲ್ಲ ಎಂದು ತಿರುಗೇಟು ನೀಡಿದರು.
ಮೈಸೂರು ಭಾಗದಲ್ಲಿ ಶಾ ಪ್ರವಾಸ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಮೈಸೂರು ಭಾಗದ ಪ್ರವಾಸಕ್ಕಾಗಿ ಗುರುವಾರ ರಾತ್ರಿಯೇ ಆಗಮಿಸಿದ್ದಾರೆ. ಬೆಳಗ್ಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆಯಲಿದ್ದಾರೆ. ಬಳಿಕ ಅರಮನೆಗೆ ತೆರಳಿ ಸುಮಾರು ಅರ್ಧಗಂಟೆಗಳ ಕಾಲ ರಾಜವಂಶಸ್ಥರ ಜತೆಗೆ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ ನವ ಶಕ್ತಿ ಸಮಾವೇಶ, ದಲಿತ ಮುಖಂಡರೊಂದಿಗೆ ಸಂವಾದ ನಡೆಸಿ, ಅವ ರೊಂದಿಗೆ ಭೋಜನ ಕೂಟ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.