ರೈತರ ಮೇಲಿನ ಮೊಕದ್ದಮೆ ರದ್ದು: ಸರಕಾರಕ್ಕೆ ಕೃತಜ್ಞತೆ ಪತ್ರ
Team Udayavani, Mar 30, 2018, 1:53 PM IST
ವಿಜಯಪುರ: ಕೂಡಗಿ ಎನ್ಟಿಪಿಸಿ ವಿರೋಧಿಸಿ ಹೋರಾಟ ನಡೆಸಿದ್ದ ರೈತರ ಮೇಲಿನ ಮೊಕದ್ದಮೆ ಹಿಂಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಿ ರೈತರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಪತ್ರ ರವಾನಿಸಿದರು.
ಬಸವನಬಾಗೇವಾಡಿ ತಾಲೂಕು ಕೂಡಗಿ ಎನ್ಟಿಪಿಸಿ ಘಟಕ ಸ್ಥಾಪನೆ ವಿರೋಧಿಸಿ ಪ್ರತಿಭಟನೆ ನಡೆಸಿದ 291 ಜನ ರೈತರ ಮೇಲೆ 27 ಮೊಕದ್ದಮೆ ಹೂಡಲಾಗಿತ್ತು. ಇದೀಗ ಸಿ.ಎಂ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಾಗೂ ಅವರ ಸಂಪುಟ ಸದಸ್ಯರು ಒಕ್ಕೊರಲ ಬೆಂಬಲ ನೀಡಿ ಕೂಡಗಿ ವಿರೋಧಿ ಹೋರಾಟ ನಡೆಸಿದ ರೈತರ ಮೇಲಿನ ಮೊಕದ್ದಮೆ ಹಿಂಪಡೆದಿದ್ದಾರೆ. ಹೀಗಾಗಿ ಬಾಧಿತ ರೈತರೆಲ್ಲರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ರೈತರು ತಿಳಿಸಿದ್ದಾರೆ.
ಶಾಸಕ ದಿ| ಕೆ.ಎಸ್. ಪುಟ್ಟಣ್ಣಯ್ಯ ಅವರಿಗೂ ನಮನ ಸಲ್ಲಿಸುವ ಅಗತ್ಯವಿದೆ. ರೈತರ ಮೇಲಿನ ಮೊಕದ್ದಮೆ ಹಿಂಡೆಯಲು ಸದನದಲ್ಲಿ ಪ್ರಸ್ತಾಪ ಮಾಡಿ, ಸತತ ನಾಲ್ಕು ವರ್ಷಗಳ ಕಾಲ ಹೋರಾಡಿ ಸರ್ಕಾರದ ಮೇಲೆ ಒತ್ತಡ ಹೇರಿ ಮೊಕದ್ದಮೆ ಹಿಂಪಡೆಯುವ ಅಗತ್ಯದ ಮನವರಿಕೆ ಮಾಡಿ ಕೊಟ್ಟಿದ್ದಾರೆ ಎಂದು ತಿಳಿಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಸಿ.ಸಿಂಧೂರ, ಕರ್ನಾಟಕ
ಜನ ಹಾಗೂ ಪರಿಸರ ರಕ್ಷಣಾ ಸಮಿತಿಯ ಮಲ್ಲಿಕಾರ್ಜುನ ಕೆಂಗನಾಳ, ಮಲ್ಲಿಕಾರ್ಜುನ ಬೇರಲದಿನ್ನಿ, ಶರಣಯ್ಯ ನಿಂಗಯ್ಯ ಕಂಬಿಮಠ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.