ಇಕ್ಕಟ್ಟಿನಲ್ಲಿ ಸಿಲುಕಿಸಿದ ನಿರ್ಣಯ: ಬಡ್ತಿ ಮೀಸಲು


Team Udayavani, Mar 31, 2018, 6:00 AM IST

4.jpg

ಸಂವಿಧಾನಬದ್ಧ‌ ಮೀಸಲಾತಿ ವಿಚಾರದಲ್ಲಿ ಸರಕಾರಗಳು ಸ್ವಲ್ಪ ಯಡವಟ್ಟು ಮಾಡಿದರೂ ಹೇಗೆ ಇಕ್ಕಟ್ಟಿಗೆ ಸಿಲುಕಬೇಕಾಗುತ್ತದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ ರಾಜ್ಯ ಸರಕಾರದ ಬಡ್ತಿ ಮೀಸಲು ಕಾಯ್ದೆ. ಸರಕಾರಿ ನೌಕರಿಯಲ್ಲಿ ಮೀಸಲಾತಿ ಕಲ್ಪಿಸಲು ಸಂವಿಧಾನದ ಬೆಂಬಲವಿದೆ, ಕಾನೂನಿನ ಬಲವೂ ಇದೆ. ಆದರೆ, ಇದಾವುದೂ ಇಲ್ಲದೆ, ಕೇವಲ ಕಾಯ್ದೆಯ ಮೂಲಕ ಒಂದು ಸೀಮಿತ ಸಮುದಾಯಕ್ಕೆ ನೆರವಾಗಲು ಹೋದರೆ ಆಗುವ ಅಪಾಯವೇನು ಎಂಬುದು ಈ ಪ್ರಕರಣದಲ್ಲಿ ಸ್ಪಷ್ಟವಾಗಿದೆ. ಅಷ್ಟೇ ಅಲ್ಲ, ಶಾಸಕಾಂಗ ತನಗೆ ಅಧಿಕಾರವಿದೆ ಎಂದು ಹೇಳಿ ಸಂವಿಧಾನಬದ್ಧ ಹಕ್ಕುಗಳನ್ನು ಮೀರಿ ತೀರ್ಮಾನ ಕೈಗೊಂಡರೆ ಅದರಿಂದ ಅದೆಷ್ಟು ಮಂದಿ ಅನ್ಯಾಯ, ಅವಮಾನ ಎದುರಿಸಬೇಕಾಗುತ್ತದೆ ಎಂಬುದೂ ಗೊತ್ತಾಗುತ್ತಿದೆ.

ಮೀಸಲಾತಿ ಅಡಿ ಬಡ್ತಿ ಪಡೆದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸರ್ಕಾರಿ ನೌಕರರಿಗೆ ಸಾಂದರ್ಭಿಕ ಹಿರಿತನ ನೀಡುವ ಅವಕಾಶವನ್ನು ಕಲ್ಪಿಸಲೆಂದು ಹಾಗೂ 1978ರ ಏಪ್ರಿಲ… 27ರಿಂದ ನೀಡಲಾಗಿರುವ ಸಾಂದರ್ಭಿಕ ಸೇವಾ ಹಿರಿತನವನ್ನು ಕಾಪಾಡುವ ಉದ್ದೇಶದಿಂದ ರಾಜ್ಯ ಸರಕಾರ “ಸರಕಾರಿ ನೌಕರರ ಮೀಸಲಾತಿ ಆಧರಿತ ಬಡ್ತಿ ನೌಕರರ ಜ್ಯೇಷ್ಠತೆ ನಿರ್ಣಯ ಕಾಯ್ದೆ 2002′ ಜಾರಿಗೆ ತಂದಿತ್ತು. 2017ರ ಫೆ. 9ರಂದು ಈ ಕಾಯ್ದೆ ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್‌, ಮೂರು ತಿಂಗಳಲ್ಲಿ ಬಡ್ತಿ ಮೀಸಲಿನಡಿ ಬಡ್ತಿ ಪಡೆದವರಿಗೆ ಹಿಂಬಡ್ತಿ ನೀಡಬೇಕು. ಹೊಸದಾಗಿ ಜೇಷ್ಠತಾ ಪಟ್ಟಿ ಪ್ರಕಟಿಸಿ ಈ ಕಾಯ್ದೆಯಿಂದ ಅನ್ಯಾಯಕ್ಕೊಳಗಾದವರಿಗೆ ಬಡ್ತಿ ನೀಡಬೇಕು ಎಂದು ಆದೇಶಿಸಿತ್ತು. ಅಲ್ಲದೆ, ಬಡ್ತಿಯಲ್ಲಿ ಮೀಸಲಾತಿ ನೀಡುವಾಗ ಸರಕಾರಿ ಹು¨ªೆಗಳಲ್ಲಿ ಆಯಾ ಸಮುದಾಯಗಳಿಗೆ ದೊರೆತಿರುವ ಪ್ರಾತಿನಿಧ್ಯ, ಹಿಂದುಳಿದಿರುವಿಕೆ, ಆಡಳಿತ ದಕ್ಷತೆಯಂತಹ ಮಾನದಂಡಗಳನ್ನು ಅನುಸರಿಸುವುದು ಕಡ್ಡಾಯ. ಈ ಬಡ್ತಿಗಳಿಂದ ಒಟ್ಟಾರೆ ಕಾರ್ಯದಕ್ಷತೆಗೆ ಧಕ್ಕೆ ಬಂದಿಲ್ಲ ಎಂಬುದರ ಬಗ್ಗೆ ಅಧ್ಯಯನ ಆಧರಿತ ಸಾಕ್ಷ್ಯಾಧಾರಗಳನ್ನು ಸರಕಾರ ಮಂಡಿಸಬೇಕಿತ್ತು ಎಂದು ಬಡ್ತಿ ಮೀಸಲು ರದ್ದುಗೊಳಿಸುವ ಸಂದರ್ಭದಲ್ಲಿ ಕೋರ್ಟ್‌ ಸ್ಪಷ್ಟವಾಗಿ ಹೇಳಿತ್ತು. ಆದರೆ, ಇದನ್ನು ಕಾನೂನಿಗಿಂತ ರಾಜಕೀಯವಾಗಿ ಪರಿಗಣಿಸಿದ ಕಾಂಗ್ರೆಸ್‌ ಸರಕಾರ, ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಿದರೆ ಎಸ್‌ಸಿ, ಎಸ್‌ಟಿ ನೌಕರರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ ಎಂದು ಹೇಳಿ ಕೋರ್ಟ್‌ ಆದೇಶ ಪಾಲಿಸಲು ಕಾಲಾವಕಾಶ ಕೇಳುತ್ತಾ ಅದರ ಮಧ್ಯೆ “ಕರ್ನಾಟಕ (ರಾಜ್ಯದ ಸಿವಿಲ್‌ ಸೇವೆಗಳಲ್ಲಿನ ಹುದ್ದೆಗಳಿಗೆ) ಮೀಸಲು ಆಧಾರದ ಮೇಲೆ ಬಡ್ತಿ ಹೊಂದಿರುವ ಸರಕಾರಿ ನೌಕರರಿಗೆ ತತ್ಪರಿಣಾಮವಾದ ಜೇಷ್ಠತೆ ವಿಸ್ತರಿಸುವ ವಿಧೇಯಕ-2017′ ರೂಪಿಸಿತ್ತು. ಈ ಸಂದರ್ಭದಲ್ಲೂ ಸುಪ್ರೀಂ ಕೋರ್ಟ್‌ ನೀಡಿದ್ದ ಸೂಚನೆಗಳನ್ನು ಪಾಲಿಸದ ಕಾರಣ ಕಾಯ್ದೆಯ ಬಲ ಸಿಗಲಿಲ್ಲ. ಇದೀಗ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ತನ್ನ ಆದೇಶವನ್ನು ಎ. 20ರೊಳಗೆ ಪಾಲಿಸಬೇಕು ಎಂದು ಕೋರ್ಟ್‌ ಖಡಕ್ಕಾಗಿ ಹೇಳಿದ್ದು, ಇಲ್ಲವಾದಲ್ಲಿ ಎ. 25ರಂದು ಸರಕಾರದ ಮುಖ್ಯ ಕಾರ್ಯದರ್ಶಿ ಖುದ್ದು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಹೇಳಿದೆ.

ಒಂದೊಮ್ಮೆ ಆದೇಶ ಪಾಲಿಸದೆ ಎ. 25 ರಂದು ಮುಖ್ಯ ಕಾರ್ಯದರ್ಶಿ ನ್ಯಾಯಾಲಯಕ್ಕೆ ಹಾಜರಾದರೆ ಸುಪ್ರೀಂ ಕೋರ್ಟ್‌ ಅವರನ್ನು ನ್ಯಾಯಾಂಗ ನಿಂದನೆ ಆರೋಪದ ಮೇಲೆ ಜೈಲಿಗೆ ಕಳುಹಿಸುವ ಸಾಧ್ಯತೆಯೂ ಇದೆ. ಇದುವರೆಗೆ ಶಾಸಕಾಂಗದ ಸೂಚನೆ ಮೇಲೆ ಬಡ್ತಿ ಮೀಸಲು ಕುರಿತ ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಲು ವಿಳಂಬ ಮಾಡಿದ ಕಾರ್ಯಾಂಗ ಇದೀಗ ಚುನಾವಣಾ ನೀತಿ ಸಂಹಿತೆ ಜಾರಿಯಾಗಿ ಶಾಸಕಾಂಗದ ಹಸ್ತಕ್ಷೇಪ ದೂರವಾಗುತ್ತಿದ್ದಂತೆ ಆದೇಶ ಪಾಲಿಸಲು ಮುಂದಾಗಿದೆ. ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ಆಯೋಗ ಸೇರಿದಂತೆ ಸರಕಾರಿ ಸ್ವಾಮ್ಯದ ಸಂಸ್ಥೆಗಳು ಸಿದ್ಧಪಡಿಸಿರುವ ಜೇಷ್ಠತಾ ಪಟ್ಟಿಯನ್ನು ರಾಜ್ಯ ಪತ್ರದಲ್ಲಿ ಪ್ರಕಟಿಸಿ ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ಕಳುಹಿಸಿಕೊಡುವಂತೆ ನಿರ್ದೇಶನ ನೀಡಿದೆ. ಈ ಜೇಷ್ಠತಾ ಪಟ್ಟಿ ಸಿದ್ಧವಾದ ಮೇಲೆ ಸರಕಾರ ಬಡ್ತಿ ಮೀಸಲಾತಿಯಡಿ ಬಡ್ತಿ ಹೊಂದಿದ ಎಸ್‌ಸಿ, ಎಸ್‌ಟಿ ನೌಕರರಿಗೆ ಹಿಂಬಡ್ತಿ ನೀಡಬೇಕು. ಈ ರೀತಿ ಮಾಡಿದಾಗ ಖಾಲಿಯಾಗುವ ಹುದ್ದೆಗಳಿಗೆ ಜೇಷ್ಠತಾ ಪಟ್ಟಿ ಆಧರಿಸಿ ನೌಕರರನ್ನು ನೇಮಕ ಮಾಡಬೇಕು. ಈ ಸಂದರ್ಭದಲ್ಲಿ ದಶಕಗಳ ಕಾಲ ಬಡ್ತಿಯಲ್ಲಿ ಅನ್ಯಾಯಕ್ಕೊಳಗಾದವರು ನ್ಯಾಯ ಪಡೆಯುತ್ತಾರಾದರೂ, ಸರಕಾರ ಮಾಡಿದ ತಪ್ಪಿಗೆ ಬಡ್ತಿ ಹೊಂದಿದ ಸಾವಿರಾರು ನೌಕರರು ಹಿಂಬಡ್ತಿ ಯಿಂದ ಅನ್ಯಾಯ ಮಾತ್ರವಲ್ಲ, ಅವಮಾನಕ್ಕೂ ಒಳಗಾಗುತ್ತಾರೆ. ಒಟ್ಟಿನಲ್ಲಿ ಕಾರ್ಯಾಂಗದ ವಿಚಾರದಲ್ಲಿನ ರಾಜಕೀಯ ನಿರ್ಣಯ ಕಾರ್ಯಾಂಗ ವನ್ನು ಹೇಗೆ ಇಕ್ಕಟ್ಟಿನಲ್ಲಿ ಸಿಲುಕಿಸುತ್ತದೆ ಎಂಬುದೂ ಬಹಿರಂಗವಾಗಿದೆ.

ಟಾಪ್ ನ್ಯೂಸ್

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Bar-Associatin

Wine Merchants: ನಾಳೆಯ ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌ ಪಡೆದ ಅಸೋಸಿಯೇಷನ್‌

vital

Vitla: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Mahaveera Hanuma: ಆಲ್ಬಂನಲ್ಲಿ ಹನುಮ ಗಾನ

Mahaveera Hanuma: ಆಲ್ಬಂನಲ್ಲಿ ಹನುಮ ಗಾನ

Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ

Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Bar-Associatin

Wine Merchants: ನಾಳೆಯ ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌ ಪಡೆದ ಅಸೋಸಿಯೇಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.