![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Mar 31, 2018, 12:54 PM IST
ಮೈಸೂರು: ಭಗ್ನ ಪ್ರೇಮಿಯೊಬ್ಬ ವಿದ್ಯುತ್ ಗೋಪುರವನ್ನೇರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿ ಹೈಡ್ರಾಮಾ ನಡೆಸಿದ ಘಟನೆ ರಾಮಕೃಷ್ಣನಗರದ ಆಂದೋಲನ ವೃತ್ತದ ಬಳಿ ಶುಕ್ರವಾರ ನಡೆದಿದೆ.
ಮೈಸೂರು ತಾಲೂಕಿನ ಯಡಹಳ್ಳಿ ನಿವಾಸಿ ಶಂಕರ್(30) ಆತ್ಮಹತ್ಯೆಗೆ ಯತ್ನಿಸಿದವ. ದಟ್ಟಗಳ್ಳಿಯ ಮಾರ್ಬಲ್ಸ್ ಅಂಗಡಿಯಲ್ಲಿ ಕೆಲಸ ಮಾಡುವ ಶಂಕರ್, ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ. ಆದರೆ, ಆಕೆ ಪ್ರೀತಿಸಲು ನಿರಾಕರಿಸಿದ ಹಿನ್ನಲೆಯಲ್ಲಿ ಬೇಸತ್ತು ಶುಕ್ರವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ದಟ್ಟಗಳ್ಳಿ ರಸ್ತೆಯಲ್ಲಿರುವ ಹೈಟೆನÒನ್ ಲೈನ್ ಇರುವ ವಿದ್ಯುತ್ ಗೋಪುರವನ್ನೇರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾನೆ.
ಈತನ ವರ್ತನೆಯಿಂದ ಗಾಬರಿಗೊಂಡ ಸ್ಥಳೀಯರು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅವರು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ, ಆತನನ್ನು ಕೆಳಗಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ತಾನು ಕೆಳಗೆ ಇಳಿಯಬೇಕಾದರೆ ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಸ್ಥಳಕ್ಕೆ ಕರೆಸುವಂತೆ ಬೇಡಿಕೆ ಇಟ್ಟಿದ್ದಾನೆ.
ಕೊನೆಗೆ ಶಂಕರ್ ಯಾರ ಮಾತನ್ನು ಕೇಳದಿದ್ದ ಸಂದರ್ಭದಲ್ಲಿ ಆತನ ತಾಯಿಯನ್ನು ಸ್ಥಳಕ್ಕೆ ಕರೆಸಿದ ಪೊಲೀಸರು, ಅವರೊಂದಿಗೆ ಮೊಬೈಲ್‌ನಲ್ಲಿ ಮಾತನಾಡಿಸಿ ಶಂಕರ್‌ನ ಮನವೊಲಿಸಿ ಆತನನ್ನು ಕೆಳಗಿಳಿಸಿದ್ದಾರೆ. ನಂತರ ಶಂಕರ್‌ನಿಗೆ ಬುದ್ಧಿವಾದ ಹೇಳಿದ ಪೊಲೀಸರು, ಆತನಿಂದ ಮುಚ್ಚಳಿಕೆ ಬರೆಯಿಸಿಕೊಂಡು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.