ಶ್ರೀ ಸ್ವರ್ಣಾಂಬಾ ದೇವಿ ಅದ್ಧೂರಿ ಬ್ರಹ್ಮರಥೋತ್ಸವ ಸಂಪನ್ನ


Team Udayavani, Mar 31, 2018, 5:33 PM IST

chikk-1.jpg

ಕಡೂರು: ತಾಲೂಕಿನ ಮಲ್ಲೇಶ್ವರದ ಗ್ರಾಮ ದೇವತೆ ಶ್ರೀಸ್ವರ್ಣಾಂಬಾ ದೇವಿ ಬ್ರಹ್ಮ ರಥೋತ್ಸವ ಸಂಭ್ರಮ ಸಡಗರದಿಂದ ನೆರವೇರಿತು. ಶುಕ್ರವಾರ ಬೆಳಿಗ್ಗೆ ದೇವಿಗೆ ಅಭಿಷೇಕ, ನಿತ್ಯಪೂಜೆ, ಅರ್ಚನೆ, ಶ್ರೀ ಮಾತೆಯ ಗಜಾರೋಹಣೋತ್ಸವ ನಡೆಸಲಾಯಿತು, ಶ್ರೀ ಸ್ವಣಾಂಬಾ ಕಲ್ಯಾಣ ಮಂಟಪದಲ್ಲಿ ಪುರಸ್ಸರ ಕಲ್ಯಾಣೋತ್ಸವ ಹಾಗೂ ಕನ್ನಿಕಾ ಪೂಜಾ ನಡೆಯಿತು. 

ಸಂಪ್ರದಾಯದಂತೆ ನಡೆದ ಪೂಜೆಯ ನಂತರ ಶ್ರೀದೇವಿಯ ಉತ್ಸವ ಮೂರ್ತಿಯನ್ನು ಭಕ್ತರು ಹೊತ್ತು ತಂದಾಗ ನೆರೆದಿದ್ದ ಸಾವಿರಾರು ಭಕ್ತರು ಉತ್ಸಾಹದಿಂದ ದೇವಿಯ ಮೇಲೆ ಅರಿಶಿನ ಕುಂಕುಮವನ್ನು ಎರಚಿ ಸಂಭ್ರಮಿಸಿದರು.

ಶ್ರೀ ಸ್ವರ್ಣಾಂಬಾ, ಶ್ರೀಅರಳೀಮರದಮ್ಮ ಮತ್ತು ಚೌಡ್ಲಾಪುರದ ಶ್ರೀಕರಿಯಮ್ಮ ದೇವಿಯವರನ್ನು ಭಕ್ತರು ದೇವಾಲಯದ ಭಾಗದಲ್ಲಿ ಮೂರು ಸುತ್ತು ಪ್ರದರ್ಶನ ಮಾಡಿದಾಗ ಭಕ್ತರು ಎರಚಿದ ಅರಿಶಿನ ಕುಂಕುಮದಿಂದ ದೇವರನ್ನು ಹೊತ್ತವರು ಅರಿಶಿನ ಕುಂಕುಮದಿಂದ ಮುಳಗಿ ಹೋಗಿದ್ದರು.

ಶಕ್ತಿ ದೇವತೆ ಶ್ರೀ ಸ್ವರ್ಣಾಂಬಾ ದೇವಿಯು ಹುತ್ತದಲ್ಲಿ ನೆಲೆಸಿದ್ದು, ತವರು ಮನೆಯಿಂದ ಹೊರಟ ಹೆಣ್ಣು ಮಗಳಿಗೆ ಅರಿಶಿನ ಕುಂಕುಮ ನೀಡುವ ಭಾವನೆಯಲ್ಲಿ ಭಕ್ತರು ದೇವಿಗೆ ಅರಿಶಿನ ಸಮರ್ಪಣೆ ಮಾಡುತ್ತಾರೆ. ದಕ್ಷಿಣ ಭಾರತದಲ್ಲೇ ದೇವರಿಗೆ ಅರಿಶಿನ ಮತ್ತು ಕುಂಕುಮ ಎರಚುವುದು ತಾಲೂಕಿನ ಮಲ್ಲೇಶ್ವರ ಜಾತ್ರಾ ಮಹೋತ್ಸವದಲ್ಲಿ ಎನ್ನುವುದು ಈ ಜಾತ್ರಾ ಮಹೋತ್ಸವದ ವಿಶೇಷವಾಗಿದೆ. ಬೆಳಗ್ಗೆ ಸಾಂಪ್ರದಾಯಿಕ ರಥ ಪೂಜೆ ಮತ್ತು ಬಲಿ ಪೂಜೆ ನಡೆದ ನಂತರ ಶ್ರೀದೇವಿಯ ವಿಗ್ರಹವನ್ನು ರಥಾರೋಹಣ ಮಾಡಿಸಲಾಯಿತು. ನೆರೆದ ಭಕ್ತರು ಬಾಳೆಹಣ್ಣುಗಳನ್ನು ರಥದ ಕಳಸಕ್ಕೆ ಎಸೆದು ಭಕ್ತಿ ಸಮರ್ಪಿಸುತ್ತಿದ್ದಂತೆಯೇ ಭಕ್ತರು ಹರ್ಷೋದ್ದಾರಗಳ ನಡುವೆ ರಥವನ್ನು ಎಳೆದರು. ನಂತರ ನಾಡಿನ ನಾನಾ ಮೂಲೆಗಳಿಂದ ಬಂದ ಭಕ್ತರು ಶ್ರೀದೇವಿಗೆ ಹೂವು ಹಣ್ಣು ಸಮರ್ಪಿಸಿ ಪೂಜೆ ಸಲ್ಲಿಸಿದರು. ಶ್ರೀ ಸ್ವರ್ಣಾಂಬಾ ದೇವಾಲಯದ ಧರ್ಮಾಧಿಕಾರಿ ಎಂ.ಟಿ. ಶ್ರೀನಿವಾಸ್‌, ಶಾಸಕ ವೈ.ಎಸ್‌.ವಿ ದತ್ತ, ಕೆ.ಎಂ. ಕೆಂಪರಾಜು, ದೇಗುಲದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಎಂ.ಟಿ. ಸತ್ಯನಾರಾಯಣ, ಆಡಳಿತ ಮಂಡಳಿ ಸದಸ್ಯರಾದ ಚಂದ್ರಶೇಖರಪ್ಪ, ಲೋಕೇಶ್‌ ಬಸಪ್ಪ, ಧರ್ಮಣ್ಣ, ಕಡೂರು ಪಟ್ಟಣ, ಮಲ್ಲೇಶ್ವರ ಗ್ರಾಮಸ್ಥರು ಮತ್ತು ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಭಕ್ತರು ದೇವಿಯ ಕೃಪೆಗೆ ಪಾತ್ರರಾದರು.

ಟಾಪ್ ನ್ಯೂಸ್

Virat Kohli Birthday: Kohli blossomed in sand sculpture

Virat Kohli Birthday: ಮರಳುಶಿಲ್ಪದಲ್ಲಿ ಅರಳಿದ ಕೊಹ್ಲಿ

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Virat Kohli Birthday: Kohli blossomed in sand sculpture

Virat Kohli Birthday: ಮರಳುಶಿಲ್ಪದಲ್ಲಿ ಅರಳಿದ ಕೊಹ್ಲಿ

Court-1

Puttur: ರಸ್ತೆ ಅಪಘಾತದಲ್ಲಿ ಸಾವು; ಆರೋಪಿ ಚಾಲಕ ಖುಲಾಸೆ

2

Kasaragod: ರೈಲು ಹಳಿಯಲ್ಲಿ ಬಾಟಲಿ, ನಾಣ್ಯ ಇರಿಸಿ ದುಷ್ಕೃತ್ಯಕ್ಕೆ ಸಂಚು

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.