ಕ್ರೀಡಾ ನಿಯೋಗ ಮುನ್ನಡೆಸಲಿರುವ ರಾಜ್ಯವರ್ಧನ್ ಸಿಂಗ್ ರಾಥೋಡ್
Team Udayavani, Apr 2, 2018, 7:05 AM IST
ಹೊಸದಿಲ್ಲಿ: ಆಸ್ಟ್ರೇಲಿಯದ ಗೋಲ್ಡ್ ಕೋಸ್ಟ್ನಲ್ಲಿ ನಡೆಯಲಿರುವ 2018ರ “ಕಾಮನ್ವೆಲ್ತ್ ಗೇಮ್ಸ್’ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ಭಾರತದ ಕ್ರೀಡಾ ಸಚಿವಾಲಯ ಸಮಿತಿಯ 7 ಸದಸ್ಯರ ನಿಯೋಗವನ್ನು ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಮುನ್ನಡೆಸಲಿದ್ದಾರೆ.
ಸಚಿವಾಲಯವು ಅನುಮೋದನೆಗಾಗಿ ಸಲ್ಲಿಸಿದ್ದ ಗೇಮ್ಸ್ನಲ್ಲಿ ಪಾಲ್ಗೊಳ್ಳಲಿರುವ 8 ಮಂದಿ ಸಚಿವರು, ಮಂತ್ರಿಗಳ ಪಟ್ಟಿಗೆ ಶನಿವಾರ ಪ್ರಧಾನ ಮಂತ್ರಿಗಳ ಕಚೇರಿಯಿಂದ ಅನುಮೋದನೆ ದೊರೆತಿದೆ. ಪ್ರಧಾನ ಮಂತ್ರಿ ಕಚೇರಿಯಿಂದ ಬಂದಿರುವ ಉಪ ಕಾರ್ಯದರ್ಶಿ ವಿಜಯ್ ಕುಮಾರ್ ಮತ್ತು ಕ್ರೀಡಾ ಪ್ರಾಧಿಕಾರದ ನಿರ್ದೇಶಕ ಜನರಲ್ ರಾಹುಲ್ ಭಟ್ನಾಗರ್ ಅವರ ಸಹಿಯುಳ್ಳ ಪತ್ರದ ಪ್ರಕಾರ, ಸಚಿವಾಲಯ ನಿಯೋಗ ತಂಡ ಭಟ್ನಾಗರ್ ಅವರೊಂದಿಗೆ ಶನಿವಾರ ರಾತ್ರಿಯೇ ಹೊರಟಿದ್ದು, ತಂಡದ ಪ್ರವಾಸ ಎ. 2ರಿಂದ 7ರ ವರೆಗೆ ನಡೆಯಲಿದೆ.
ಕ್ರೀಡಾ ವಿಭಾಗದ ಆಡಳಿತಾಧಿಕಾರಿ ಧೀರಜ್ ಸಿಂಗ್ ಅವರೊಂದಿಗೆ ರಾಜ್ಯವರ್ಧನ್ ಸಿಂಗ್ ರಾಥೋಡ್ ಎ. 8-15ರ ವರೆಗೆ ಗೋಲ್ ಕೋಸ್ಟ್ನಲ್ಲಿ ಇರಲಿದ್ದಾರೆ. ಕ್ರೀಡಾ ಸಹ ಕಾರ್ಯದರ್ಶಿ ಇಂದರ್ ದಮಿಜ ಮತ್ತು ಕ್ರೀಡಾ ಕಾರ್ಯದರ್ಶಿ ಎಸ್.ಪಿ.ಎಸ್. ತೋಮರ್ ಅವರಿಗೆ ಎ. 4ರಿಂದ 9ರ ವರೆಗೆ ಸ್ಥಳದಲ್ಲಿರಲು ಅವಕಾಶ ನೀಡಲಾಗಿದೆ. ಸಾಯ್ನ ಡಿ.ಜಿ. ನೀಲಮ್ ಕಪೂರ್ ಮತ್ತು ಜಂಟಿ ಕಾರ್ಯದರ್ಶಿ ಪಂಕಜ್ ರಾಗ್ ಎ. 10ರಿಂದ 15ರ ತನಕ ಗೋಲ್ಡ್ ಕೋಸ್ಟ್ನಲ್ಲಿ ಉಪಸ್ಥಿತರಿರುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್ಗೆ ಆಗಮಿಸಿದ ರೋಹಿತ್ ಶರ್ಮ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.