ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಿಬಿಎಸ್ಇ ಅಧಿಕಾರಿ ಸಸ್ಪೆಂಡ್
Team Udayavani, Apr 2, 2018, 7:26 AM IST
ಹೊಸದಿಲ್ಲಿ: ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡಳಿಯ ಅಧಿಕಾರಿಯೊಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಅವರ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಸೂಚನೆ ಮೇರೆಗೆ ಕೆ.ಎಸ್.ರಾಣಾ ಎಂಬ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಇಲಾಖೆ ಕಾರ್ಯದರ್ಶಿ ಅನಿಲ್ ಸ್ವರೂಪ್ ಪ್ರಕಟಿಸಿದ್ದಾರೆ. ರಾಣಾ ಅವರು ಹೊಸದಿಲ್ಲಿ ಹೊರವಲಯದ ಬವಾನಾ ಎಂಬ ಕೇಂದ್ರ ಅಧಿಕಾರಿಯಾಗಿದ್ದರು.
ಇದೇ ಕೇಂದ್ರದ ಇಬ್ಬರು ಅಧ್ಯಾಪಕರು ಮತ್ತು ಕೋಚಿಂಗ್ ಸೆಂಟರ್ನ ಒಬ್ಬನನ್ನು ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಈ ಮೂವರು 12ನೇ ತರಗತಿಯ ಇಕನಾಮಿಕ್ಸ್ ಪರೀಕ್ಷೆಯ ಒಂದು ವಾರ ಮೊದಲೇ ಪ್ರಶ್ನೆ ಪತ್ರಿಕೆಯನ್ನು ವಾಟ್ಸ್ಆ್ಯಪ್ ಮೂಲಕ ಸೋರಿಕೆ ಮಾಡಲು ಯೋಜನೆ ರೂಪಿಸಿದ್ದರು ಎಂದು ಹೇಳಲಾಗಿದೆ.
ಹೊಸದಿಲ್ಲಿ ಪೊಲೀಸ್ ಇಲಾಖೆಯ ಅಪ ರಾಧ ವಿಭಾಗದ ಜಂಟಿ ಆಯುಕ್ತ ಅಲೋಕ್ ಕುಮಾರ್ ನೀಡಿದ ಮಾಹಿತಿ ಪ್ರಕಾರ ಪರೀಕ್ಷೆ ಆರಂಭವಾಗುವ 40 ನಿಮಿಷಗಳ ಮೊದಲು ಪ್ರಶ್ನೆ ಪತ್ರಿಕೆಗಳು ಇರುವ ಕವರ್ ತೆರೆದು, ಅದರ ಫೋಟೋ ತೆಗೆದು ಕೋಚಿಂಗ್ ಸೆಂಟರ್ನ ತಖೀರ್ ಎಂಬಾತನಿಗೆ ಬಂಧಿತ ಶಿಕ್ಷಕರು ವಾಟ್ಸ್ ಆ್ಯಪ್ನಲ್ಲಿ ಕಳುಹಿಸಿದ್ದರು. ತಖೀರ್ ಅದನ್ನು ವಿದ್ಯಾರ್ಥಿಗಳಿಗೆ ಫಾರ್ವರ್ಡ್ ಮಾಡಿದ್ದ.
ಇದೇ ವೇಳೆ ಕಾಂಗ್ರೆಸ್ ನಾಯಕ ಪವನ್ ಖೇರಾ ಮಾತನಾಡಿ ಪ್ರಧಾನಿ ಮೋದಿ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಮೌನ ಮುರಿಯಲೇಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ
Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.