ಪಾಲಿಕೆ ಕಾಮಗಾರಿಗೆ ನೀತಿ ಸಂಹಿತೆ ಅಡ್ಡಿಯಾಗದು


Team Udayavani, Apr 2, 2018, 12:33 PM IST

palike-kamagari.jpg

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿಯಾದರೂ, ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಸಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ತೊಂದರೆಯಿಲ್ಲ ಎಂದು ಪಾಲಿಕೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನಗರದ ಕೆಲವೆಡೆ ಪಾಲಿಕೆಯಿಂದ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ನೀತಿ ಸಂಹಿತೆ ಜಾರಿಯಾಗಿದೆ ಎಂದು ಹೇಳಿ ಗುತ್ತಿಗೆದಾರರು ಸ್ಥಗಿತಗೊಳಿಸುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿದೆ. ಆದರೆ, ಹೊಸ ಕಾಮಗಾರಿಗಳನ್ನು ಹೊರತುಪಡಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳಿಗೆ ನೀತಿ ಸಂಹಿತೆ ಅನ್ವಯವಾಗುವುದಿಲ್ಲ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.

ನೀತಿ ಸಂಹಿತೆ ಜಾರಿಗೆ ಮೊದಲೇ ಕಾರ್ಯಾದೇಶ ಪಡೆದು ಗುತ್ತಿಗೆದಾರರು ಕಾಮಗಾರಿ ಆರಂಭಿಸಿದ್ದರೆ, ಅಂತಹ ಕಾಮಗಾರಿಗಳಿಗೆ ನೀತಿ ಸಂಹಿತೆಗೆ ಅನ್ವಯವಾಗುವುದಿಲ್ಲ. ಆದರೆ, ಟೆಂಡರ್‌ ಆಗಿ ಕಾರ್ಯಾದೇಶ ಪಡೆಯದಿದ್ದರೆ ಅಥವಾ ಕಾರ್ಯಾದೇಶ ಪಡೆದರೂ ಕಾಮಗಾರಿ ಆರಂಭಿಸದೆ. ಈಗ ಆರಂಭಿಸಲು ಮುಂದಾದರೆ ಅಂತಹ ಯೋಜನೆಗಳಿಗೆ ಸಂಹಿತೆ ಅನ್ವಯವಾಗುತ್ತದೆ.

ನಗರದ ವಿವಿಧ ಭಾಗಗಳಲ್ಲಿ ಹಲವಾರು ಯೋಜನೆಗಳಿಗೆ ಬಿಬಿಎಂಪಿ ಈಗಾಗಲೇ ಚಾಲನೆ ನೀಡಿರುವುದರಿಂದ ಕಾಮಗಾರಿಗಳು ಸುಸೂತ್ರವಾಗಿ ನಡೆಯಲಿವೆ. ಒಂದೊಮ್ಮೆ ನೀತಿ ಸಂಹಿತೆ ನೆಪವಾಗಿರಿಸಿಕೊಂಡು ಕೆಲಸ ಸ್ಥಗಿತಗೊಳಿಸಲು ಗುತ್ತಿಗೆದಾರರು ಮುಂದಾದರೆ, ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಪಾಲಿಕೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಪ್ರಗತಿಯಲ್ಲಿರುವ ಪ್ರಮುಖ ಕಾಮಗಾರಿಗಳು: ಓಕಳಿಪುರ ಅಷ್ಟಪಥ ಕಾರಿಡಾರ್‌ ಯೋಜನೆ, ವೆಸ್ಟ್‌ ಆಫ್ ಕಾರ್ಡ್‌ ರಸ್ತೆ ಸಿಗ್ನಲ್‌ ಮುಕ್ತ ಕಾಮಗಾರಿ, ಬಹುಮಹಡಿ ನಿಲುಗಡೆ ತಾಣ, ಸಿಲ್ಕ್ಬೋರ್ಡ್‌ನಿಂದ ನಾಯಂಡಹಳ್ಳಿ ವರೆಗೆ ಸಿಗ್ನಲ್‌ ಮುಕ್ತ ಕಾರಿಡಾರ್‌, ನಗರದ 93.47 ಕಿ.ಮೀ. ರಸ್ತೆಗಳು ಹಾಗೂ ಜಂಕ್ಷನ್‌ಗಳಲ್ಲಿ ವೈಟ್‌ಟಾಪಿಂಗ್‌ ಕಾಮಗಾರಿ, ಶಿವಾನಂದ ಉಕ್ಕಿನ ಮೇಲ್ಸೇತುವೆ, ವಿವಿಧ ಕೆರೆಗಳ ಅಭಿವೃದ್ಧಿ, ರಸ್ತೆಗಳ ಡಾಂಬರೀಕರಣ ಸೇರಿದಂತೆ ಈಗಾಗಲೇ ಕಾಮಗಾರಿ ಆರಂಭವಾಗಿರುವ ಎಲ್ಲ ಕಾಮಗಾರಿಗಳಿಗೆ ನೀತಿ ಸಂಹಿತೆ ಬಿಸಿ ತಟ್ಟುವುದಿಲ್ಲ.

ನೀತಿ ಸಂಹಿತೆಯ ಜಾರಿಯಾಗುವ ಮೊದಲು ಆರಂಭವಾಗಿರುವ ಕಾಮಗಾರಿಗಳಿಗೆ ಯಾವುದೇ ತೊಂದರೆಯಿಲ್ಲ. ಆದರೆ, ನೀತಿ ಸಂಹಿತೆ ಜಾರಿಯಾದ ಬಳಿಕ ಯಾವುದೇ ಕಾಮಗಾರಿಗಳನ್ನು ಆರಂಭಿಸುವಂತಿಲ್ಲ. ಒಂದೊಮ್ಮೆ ಗುತ್ತಿಗೆದಾರರು ಕಾರ್ಯಾದೇಶ ಪಡೆದು ಕೆಲಸ ಆರಂಭಿಸದಿದ್ದರೆ ಅಂತಹ ಕಾಮಗಾರಿಗಳಿಗೆ ನೀತಿ ಸಂಹಿತೆ ಅನ್ವಯವಾಗುತ್ತದೆ.
-ಎನ್‌.ಮಂಜುನಾಥ ಪ್ರಸಾದ್‌, ಪಾಲಿಕೆ ಆಯುಕ್ತ

ಟಾಪ್ ನ್ಯೂಸ್

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

Boxing legend Mike Tyson hints at retirement

Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್‌ ದಿಗ್ಗಜ ಮೈಕ್‌ ಟೈಸನ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.