ಗುತ್ತೇದಾರ್ ಗೆ ತಿರುಗೇಟು; ಬಿಜೆಪಿ ತೊರೆದು “ಕೈ” ಹಿಡಿದ ಎಂವೈ ಪಾಟೀಲ್
Team Udayavani, Apr 2, 2018, 5:31 PM IST
ಕಲಬುರಗಿ: ಮಾಲೀಕಯ್ಯ ಗುತ್ತೇದಾರ್ ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ಬೆನ್ನಲ್ಲೇ ಅಫ್ಜಲ್ ಪುರ್ ಬಿಜೆಪಿಯ ಮಾಜಿ ಶಾಸಕ ಎಂವೈ ಪಾಟೀಲ್ ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಗುತ್ತೇದಾರ್ ವಾಗ್ದಾಳಿ ನಡೆಸಿದ್ದರು.ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿ ನೋಡೋಣ ಎಂದು ಖರ್ಗೆಗೆ ಗುತ್ತೇದಾರ್ ಸವಾಲು ಹಾಕಿದ್ದರು. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಪಾಟೀಲ್ ಅವರನ್ನು ಕಾಂಗ್ರೆಸ್ ಗೆ ಸೆಳೆಯುವ ಮೂಲಕ ತಿರುಗೇಟು ನೀಡಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಡಾ.ಜಿ.ಪರಮೇಶ್ವರ್ ಅವರು ಪಕ್ಷದ ಬಾವುಟವನ್ನು ನೀಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು. ಮಾಲೀಕಯ್ಯ ಗುತ್ತೇದಾರ್ ಅವರನ್ನು ನಮ್ಮ ಪಕ್ಷದಲ್ಲಿ ಉಳಿಸಿಕೊಳ್ಳಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗಿದೆ ಎಂದು ಪರಮೇಶ್ವರ್ ಹೇಳಿದರು.
ಆದರೆ ಗುತ್ತೇದಾರ್ ಅವರು ಪಕ್ಷದ ಹಿರಿಯ ಮುಖಂಡರ ವಿರುದ್ಧವೇ ಹೇಳಿಕೆ ನೀಡಿದ್ದರಿಂದ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಸಚಿವರಾದ ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.