ಧರ್ಮ ಒಡೆಯುವ ರಾಜಕಾರಣ ಖಂಡನೀಯ


Team Udayavani, Apr 2, 2018, 5:58 PM IST

shiv-2.jpg

ಭದ್ರಾವತಿ: ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಬೆರೆಸಬಾರದು. ಧರ್ಮ ಒಡೆಯುವ ರಾಜಕಾರಣ ಖಂಡನೀಯ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ತಿಳಿಸಿದರು.

ಪಟ್ಟಣದ ಮಹಾತ್ಮಗಾಂಧಿ ರಸ್ತೆಯ ಪಾಂಡುರಂಗ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಬಜರಂಗ ದಳದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕನ್ನಡ ಧ್ವಜ ಪ್ರತ್ಯೇಕಿಸುವುದು ಸೇರಿದಂತೆ ಲಿಂಗಾಯತ ಧರ್ಮವನ್ನು ಒಡೆಯುವ ಮೂಲಕ ಇಡೀ ದೇಶವನ್ನು ಒಡೆಯುವ ರಾಜಕಾರಣ ನಡೆಸಲು ಮುಂದಾಗಿದೆ. ಕಲ್ಲಡ್ಕ ಶಾಲೆಗೆ ಕೊಲ್ಲೂರಿನಿಂದ ಬರುತ್ತಿದ್ದ ಅನ್ನಪ್ರಸಾದವನ್ನು ಕೇವಲ ಹಿಂದುತ್ವ ಪ್ರತಿಪಾದಿಸುವ ಶಾಲೆಯೆಂದು ಪರಿಗಣಿಸಿ ತಡೆ ಹಿಡಿದಿದ್ದಾರೆ. ಇಂತಹ ರಾಜಕಾರಣ ಮಾಡುವುದು ಸರಿಯಲ್ಲ ಎಂದರು. 

ಹಿಂದೂ ಸಮಾಜ ದುರ್ಬಲವಲ್ಲ. ಅಧಿಕಾರಕ್ಕಾಗಿ ಹೋರಾಟ ಮಾಡಿದ ಸಮಾಜವಲ್ಲ. ಸಂಸ್ಕೃತಿ, ಆಚರಣೆ ಉಳಿಸಲು ಅನಾದಿ ಕಾಲದಿಂದಲೂ ಹೋರಾಟ ಮಾಡುತ್ತಾ ಬಂದ ಸಶಕ್ತ ಸಮಾಜವಾಗಿದೆ. ಹಿಂದೂ ಧರ್ಮ, ಸಂಸ್ಕೃತಿ ಉಳಿಯಬೇಕಾದರೆ ಸಮಾಜ ಉಳಿಯಬೇಕು. ಸಮಾಜ ಉಳಿಯಲು ಜನಸಂಖ್ಯೆ ಹೆಚ್ಚಾಗಬೇಕು. ಜನಸಂಖ್ಯೆ ಜಗತ್ತಿನ ಅತ್ಯಂತ ದೊಡ್ಡ ಶಕ್ತಿ ಇದ್ದಂತೆ. ಇಡೀ ಜಗತ್ತಿನ ಎಲ್ಲಾ ಎಲ್ಲಾ ಜೀವರಾಶಿಗಳ ಒಳಿತಿಗೆ ಹಿಂದೂ ಸಮಾಜ ಇರಲೇಬೇಕು ಎಂದರು. 

ಕ್ರಿಶ್ಚಿಯನ್‌ ಹಾಗೂ ಮುಸ್ಲಿಮರು ಭಾರತಕ್ಕೆ ಬಂದಿದ್ದು ಕೇವಲ ಸಂಪತ್ತು ಲೂಟಿ ಮಾಡಲು ಮಾತ್ರವಲ್ಲ. ಬದಲಾಗಿ ಈ ದೇಶವನ್ನು ಕ್ರೈಸ್ತ, ಮುಸ್ಲಿಂಮಯ ಮಾಡುವುದೇ ಅವರ ಮೂಲ ಉದ್ದೇಶವಾಗಿತ್ತು. ಹೊರಗಿನ ದೇಶದ ದೇವರನ್ನು ಇಲ್ಲಿಗೆ ತಂದು ಮತಾಂತರದ ಮೂಲಕ ಗಂಡಾಂತರ ಸೃಷ್ಟಿಸುತ್ತಿದ್ದಾರೆ. ಬಜರಂಗ ದಳ ಹಿಂದೂ ಸಮಾಜದ ಸಂರಕ್ಷಣೆಗೆ ಕಾರ್ಯನಿರ್ವಹಿಸುತ್ತಿದ್ದು ಪ್ರತಿಯೊಬ್ಬ
ಹಿಂದೂಗಳು ಅದಕ್ಕೆ ಬೆಂಬಲಿಸಬೇಕೆಂದರು. ಇದೀಗ ಲವ್‌ ಜಿಹಾದ್‌ ಹೆಸರಿನಲ್ಲಿ ಮೋಸ, ವಂಚನೆ, ಷಡ್ಯಂತ್ರಗಳು ನಡೆಯುತ್ತಿವೆ. ನಮ್ಮ ಮನೆಯ ಹೆಣ್ಣು ಮಕ್ಕಳಿಗೆ ಇದರ ಬಗ್ಗೆ ತಿಳುವಳಿಕೆ ಮೂಡಿಸಬೇಕಾಗಿದೆ. ಅತ್ಯಾಚಾರ, ಅನಾಚಾರದ ವಿರುದ್ಧ ಹೋರಾಟ ನಡೆಸುವ ಮೂಲಕ ಬಜರಂಗ ದಳ ಪ್ರತಿ ಮನೆಯಲ್ಲಿಯೂ ಸಂಸ್ಕಾರ ಬೆಳೆಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದರು.

 ಜಿಲ್ಲಾಧ್ಯಕ್ಷ ರಮೇಶ್‌ ಬಾಬು, ಜಿಲ್ಲಾ ಸಂಚಾಲಕ ದೀನದಯಾಳ್‌, ಸಹ ಸಂಚಾಲಕ ಸುನಿಲ್‌ ಕುಮಾರ್‌, ವಿನೋದ್‌, ವಡಿವೇಲು, ಕೀರ್ತಿಗುಜ್ಜಾರ್‌, ಬಿ.ವಿ. ಚಂದನ್‌ ರಾವ್‌, ಮನುಗೌಡ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.