ಕಾರ್ಮಿಕರ ಸಾರ್ವತ್ರಿಕ ಮುಷ್ಕರ : ಜನಜೀವನ ಅಸ್ತವ್ಯಸ್ತ


Team Udayavani, Apr 3, 2018, 7:00 AM IST

02ksde11.jpg

ಕಾಸರಗೋಡು: ಎಲ್ಲ ಕ್ಷೇತ್ರಗಳಲ್ಲಿ ನಿಗದಿತ ಅವಧಿ ಉದ್ಯೋಗವನ್ನು ವಿಸ್ತರಿಸುವ ಕೇಂದ್ರ ಸರಕಾರದ ನಿರ್ಧಾರ ವನ್ನು  ಪ್ರತಿಭಟಿಸಿ ಕೇರಳದ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ 24 ಗಂಟೆಗಳ ಸಾರ್ವತ್ರಿಕ ಮುಷ್ಕರದಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ರವಿವಾರ ಮಧ್ಯರಾತ್ರಿಯಿಂದ ಆರಂಭ ಗೊಂಡ ಮುಷ್ಕರ ಸೋಮವಾರ ರಾತ್ರಿ 12 ಗಂಟೆಯ ವರೆಗೆ ಮುಷ್ಕರ ನಡೆಯಿತು. 

ಸಾರ್ವತ್ರಿಕ ಮುಷ್ಕರದಲ್ಲಿ ಭಾರತೀಯ ಮಜ್ದೂರ್‌ ಸಂಘ (ಬಿಎಂಎಸ್‌) ಭಾಗವಹಿಸಿಲ್ಲ.ಮುಷ್ಕರದ ಹಿನ್ನೆಲೆಯಲ್ಲಿ ಕಾಸರ ಗೋಡು ಜಿಲ್ಲೆಯಲ್ಲಿ ಸರಕಾರಿ ಹಾಗೂ ಖಾಸಗಿ ಬಸ್‌ಗಳು ರಸ್ತೆಗಿಳಿಯಲಿಲ್ಲ. ಸರಕಾರಿ ಕಚೇರಿಗಳು, ಅಂಗಡಿ ಮುಂಗಟ್ಟುಗಳು, ಕೈಗಾರಿಕಾ ಕೇಂದ್ರಗಳು ತೆರೆಯಲಿಲ್ಲ. ಕೆಲವೊಂದು ಖಾಸಗಿ ವಾಹನಗಳು ಮಾತ್ರವೇ ರಸ್ತೆಯಲ್ಲಿ ಓಡಾಡುತ್ತಿದ್ದವು. ಮುಷ್ಕರ ನಿರತ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ಕಾಸರಗೋಡು ನಗರದಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆಯನ್ನು ಸಿಐಟಿಯು ಮುಖಂಡ ಟಿ.ಕೆ. ರಾಜನ್‌ ಉದ್ಘಾಟಿಸಿದರು. 

ಎಸ್‌ಟಿಯು ಮುಖಂಡ ಅಶ್ರಫ್‌ ಎಡ ನೀರು ಅಧ್ಯಕ್ಷತೆ ವಹಿಸಿದರು. ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರಾದ ಟಿ. ಕೃಷ್ಣನ್‌, ಬಿನೋಯ್‌ ಮ್ಯಾಥ್ಯೂ, ಕರಿವೆಳ್ಳೂರು ವಿಜಯನ್‌, ಡಿ.ಎಂ.ಕೆ. ಜಲೀಲ್‌, ಕೆ. ಬಾಲಕಿರಣ್‌, ಮುತ್ತಲಿಬ್‌, ಹಸೈನಾರ್‌ ಉಳಿಯತ್ತಡ್ಕ ಮಾತನಾಡಿ ದರು. ವಿನಯ ಕುಮಾರ್‌ ಸ್ವಾಗತಿಸಿದರು. ಮುಷ್ಕರದಲ್ಲಿ  16 ಕಾರ್ಮಿಕ ಸಂಘಟನೆಗಳು ಭಾಗವಹಿಸಿದ್ದವು. ಪತ್ರಿಕೆ, ಹಾಲು, ಆಸ್ಪತ್ರೆ, ಔಷಧಿ ಅಂಗಡಿಗಳು, ವಿವಾಹ ಹಾಗೂ ವಿಮಾನಗಳಿಗೆ ಮುಷ್ಕರದಿಂದ ವಿನಾಯಿತಿ ನೀಡಲಾಗಿತ್ತು.

ಪರೀಕ್ಷೆ ಮುಂದೂಡಿಕೆ  
ಕಾರ್ಮಿಕರ ಸಾರ್ವತ್ರಿಕ ಮುಷ್ಕರದ ಹಿನ್ನೆಲೆಯಲ್ಲಿ ಮಹಾತ್ಮಾಗಾಂಧಿ ವಿಶ್ವವಿದ್ಯಾನಿಲಯ, ಕೇರಳ ವಿಶ್ವವಿದ್ಯಾನಿಲಯ, ಕಲ್ಲಿಕೋಟೆಯ ವಿಶ್ವವಿದ್ಯಾನಿಲಯ, ಕಣ್ಣೂರು ವಿಶ್ವವಿದ್ಯಾನಿಲಯ ಮತ್ತು ಕೇರಳ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯಗಳು ಸೋಮವಾರ ನಿಗದಿಯಾಗಿದ್ದ ಎಲ್ಲ ಪರೀಕ್ಷೆಗಳನ್ನು ಮುಂದೂಡಿವೆ.

ಚಿತ್ರ: ಶ್ರೀಕಾಂತ್‌ ಕಾಸರಗೋಡು

ಟಾಪ್ ನ್ಯೂಸ್

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.