ಕಿವೀಸ್‌ಗೆ ಕಾದಿದೆ 382 ರನ್ ಸವಾಲು
Team Udayavani, Apr 3, 2018, 6:35 AM IST
ಕ್ರೈಸ್ಟ್‌ಚರ್ಚ್: ಪ್ರವಾಸಿ ಇಂಗ್ಲೆಂಡ್ ಎದುರಿನ ಕ್ರೈಸ್ಟ್‌ಚರ್ಚ್ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ 382 ರನ್ನುಗಳ ಗೆಲುವಿನ ಗುರಿ ಪಡೆದಿದೆ. 4ನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 42 ರನ್ ಗಳಿಸಿದ್ದು, ಪಂದ್ಯ ಕುತೂಹಲ ಹಂತ ಮುಟ್ಟಿದೆ.
3 ವಿಕೆಟಿಗೆ 202 ರನ್ ಮಾಡಿದಲ್ಲಿಂದ ಸೋಮವಾರದ ಆಟ ಮುಗಿಸಿದ ಇಂಗ್ಲೆಂಡ್ 9ಕ್ಕೆ 352 ರನ್ ಗಳಿಸಿ ಡಿಕ್ಲೇರ್ ಮಾಡಿತು. ನಾಟೌಟ್ ಬ್ಯಾಟ್ಸ್‌ಮನ್‌ಗಳಾಗಿ ಉಳಿದಿದ್ದ ಜೋ ರೂಟ್ 54 ಮತ್ತು ಡೇವಿಡ್ ಮಾಲನ್ 53 ರನ್ನುಗಳ ಕೊಡುಗೆ ಸಲ್ಲಿಸಿದರು. ಇವರಿಬ್ಬರ 4ನೇ ವಿಕೆಟ್ ಜತೆಯಾಟದಲ್ಲಿ 97 ರನ್ ಹರಿದು ಬಂತು. ನ್ಯೂಜಿಲ್ಯಾಂಡ್ ಪರ ಕಾಲಿನ್ ಡಿ ಗ್ರ್ಯಾಂಡ್‌ಹೋಮ್ 4 ವಿಕೆಟ್, ಟ್ರೆಂಟ್ ಬೌಲ್ಟ್ ಮತ್ತು ನೀಲ್ ವ್ಯಾಗ್ನರ್ ತಲಾ 2 ವಿಕೆಟ್ ಕಿತ್ತರು.
ದ್ವಿತೀಯ ಇನ್ನಿಂಗ್ಸ್ ಆರಂಭಿಸಿರುವ ನ್ಯೂಜಿಲ್ಯಾಂಡಿಗೆ ಆರಂಭಿಕರಾದ ಟಾಮ್ ಲ್ಯಾಥಂ (25) ಮತ್ತು ಜೀತ್ ರಾವಲ್ (17) ಉತ್ತಮ ಅಡಿಪಾಯ ನಿರ್ಮಿಸುವ ಸೂಚನೆಯೊಂದನ್ನು ನೀಡಿದ್ದಾರೆ. ಕೊನೆಯ ದಿನದಾಟದಲ್ಲಿ ನ್ಯೂಜಿಲ್ಯಾಂಡ್ 340 ರನ್ ಗಳಿಸಬೇಕಿದೆ. ಇದು ಕಠಿನ ಸವಾಲಾಗಿದ್ದು, ಪಂದ್ಯವನ್ನು ಡ್ರಾಗೊಳಿಸಲು ಪ್ರಯತ್ನಿಸಬಹುದು.
ಸಂಕ್ಷಿಪ್ತ ಸ್ಕೋರ್: ಇಂಗ್ಲೆಂಡ್-307 ಮತ್ತು 9 ವಿಕೆಟಿಗೆ ಡಿಕ್ಲೇರ್. ನ್ಯೂಜಿಲ್ಯಾಂಡ್-278 ಮತ್ತು ವಿಕೆಟ್ ನಷ್ಟವಿಲ್ಲದೆ 42.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್ ಡೆಲ್ಲಿ
Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.