ಪುಣೆ ತುಳುಕೂಟ : ಸೂಪರ್ 7 ಬಾಕ್ಸ್ ಕ್ರಿಕೆಟ್ ಪಂದ್ಯಕ್ಕೆ ಚಾಲನೆ
Team Udayavani, Apr 3, 2018, 12:03 PM IST
ಪುಣೆ: ತುಳುಕೂಟ ಪುಣೆ ಇದರ ಯುವ ವಿಭಾಗ ವತಿಯಿಂದ ಸೂಪರ್ ಸೆವೆನ್ ಬಾಕ್ಸ್ ಕ್ರಿಕೆಟ್ ಪಂದ್ಯಾವಳಿಯು ಎ. 1 ರಂದು ಸೆಂಟ್ರಲ್ ಮಾಲ್‌ನಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆಗೊಂಡಿತು.
ಪುಣೆ ತುಳುಕೂಟದ ಅಧ್ಯಕ್ಷ ತಾರಾನಾಥ ರೈ ಮೇಗಿನಗುತ್ತು ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸಿ ಬ್ಯಾಟ್ ಬೀಸುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು. ಪುಣೆ ತುಳುಕೂಟದ ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಶ್ರೀಧರ ಶೆಟ್ಟಿ ಕಲ್ಲಾಡಿ, ಗೌರವ ಕೋಶಾಧಿಕಾರಿ ಸಂತೋಷ್ ಶೆಟ್ಟಿ ಎಣ್ಣೆಹೊಳೆ, ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾಯವಾದಿ ರೋಹನ್ ಶೆಟ್ಟಿ, ಯುವ ವಿಭಾಗದ ಕಾರ್ಯದರ್ಶಿ ಭಾಗೆಶ್ ಶೆಟ್ಟಿ, ಸುಮಿತ್ ಶೆಟ್ಟಿ ಮತ್ತು ಸದಸ್ಯರು ಉಪಸ್ಥಿತರಿದ್ದರು.ಅಲ್ಲದೆ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ನಯನಾ ಸಿ. ಶೆಟ್ಟಿ, ಉಪ ಕಾರ್ಯಾಧ್ಯಕ್ಷೆ ಸುಜಾತಾ ಡಿ. ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯೆಯರುಗಳಾದ ಶಶಿಕಲಾ ಎ. ಶೆಟ್ಟಿ, ರಮಾ ಶೆಟ್ಟಿ, ಸಮಾಜ ಸೇವಕಿ ಗೀತಾ ಬಿ. ಶೆಟ್ಟಿ ಮತ್ತು ಮಹಿಳಾ ವಿಭಾಗದ ಇತರ ಸದಸ್ಯೆಯರು, ಆಟಗಾರರು ಉಪಸ್ಥಿತರಿದ್ದರು.
ಸುಮಾರು 31 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಸತತ ದ್ವಿತೀಯ ವರ್ಷ ಈ ಮೆಗಾ ಕ್ರಿಕೆಟ್ ಹಬ್ಬ ಸೂಪರ್-7 ಎನ್ನುವ ಹೊಸ ಆವೃತ್ತಿಯ ಈ ಪಂದ್ಯಾಟದಲ್ಲಿ ಆಡುವ ಪ್ರತೀ ತಂಡದಲ್ಲಿ 7 ಆಟಗಾರರಿದ್ದು, ಇದರಲ್ಲಿ 4 ಹುಡುಗರು ಹಾಗೂ 3 ಹುಡುಗಿಯರು ಆಡಲು ಅನುಮತಿ ನೀಡಲಾಗಿದೆ. ಪಂದ್ಯಾಟದಲ್ಲಿ ಕ್ರೀಡಾಭಿಮಾನಿಗಳು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಚಿತ್ರ-ವರದಿ: ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್
Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು
Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್.ರಾಜಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.