ಚಿನ್ನ ಕದಿಯುತ್ತಿದ್ದ ಟೆಕ್ಕಿ ಬಂಧನ
Team Udayavani, Apr 3, 2018, 12:33 PM IST
ಬೆಂಗಳೂರು: ಜ್ಯುವೆಲ್ಲರಿ ಶಾಪ್‌ಗ್ಳಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಒಬ್ಬನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಇಂಕಾ ಇಂಟರ್‌ನ್ಯಾಷನಲ್ ಎಂಬ ಹೋಟೆಲ್ ಮಾಲೀಕರ ಒಬ್ಬನೇ ಪುತ್ರ, ಪ್ರಸ್ತುತ ಯಲಹಂಕದಲ್ಲಿ ವಾಸವಿರುವ ಪ್ರಭು ಕನಕರತ್ನಂ (34) ಬಂಧಿತ. ಈತನಿಂದ 2.5 ಲಕ್ಷ ರೂ. ಮೌಲ್ಯದ 85 ಗ್ರಾಂನ 2 ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಭು ಕನಕರತ್ನಂ 2002ರಲ್ಲಿ ಬೆಂಗಳೂರಿಗೆ ಬಂದಿದ್ದು, ಎಂ.ಎಂಸ್.ರಾಮಯ್ಯ ಕಾಲೇಜಿನಲ್ಲಿ ಬಿಇ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡಿದ್ದಾನೆ. 2011ರಲ್ಲಿ ಬ್ರಿಟನ್‌ನ ಡರ್ಬಿ ವಿಶ್ವವಿದ್ಯಾಲಯದಲ್ಲಿ ಎಂಬಿಎ ಪದವಿ ಪಡೆದ ಆರೋಪಿ, ತಮಿಳುನಾಡಿಗೆ ವಾಪಸಾಗಿ ಹೋಟೆಲ್ ವ್ಯವಹಾರ ನೋಡಿಕೊಳ್ಳುತ್ತಿದ್ದ. ಈ ನಡುವೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹೋಟೆಲ್ ಮಾರಾಟ ಮಾಡಿ ತಾಯಿಯೊಂದಿಗೆ ಬೆಂಗಳೂರಿಗೆ ಬಂದು ನೆಲೆಸಿದ್ದ. ಇಲ್ಲಿನ ಇಂದುಜಾ ಗ್ಲೋಬಲ್ ಸಲ್ಯೂಷನ್ ಎಂಬ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ.
ಈ ಮಧ್ಯೆ ಅನಾರೋಗ್ಯ ಸಮಸ್ಯೆಯಿಂದ ಕೆಲಸ ಬಿಟ್ಟಿದ್ದ ಪ್ರಭು ಕನಕರತ್ನಂ ಸ್ವಂತ ವ್ಯವಹಾರ ಆರಂಭಿಸಿದ್ದ. ನಿರೀಕ್ಷೆಯಂತೆ ಲಾಭ ಬಾರದ್ದರಿಂದ ಜೀವನ ನಿರ್ವಹಣೆ ಕಷ್ಟವಾಗಿ, ಕಳ್ಳತನಕ್ಕೆ ಕೈ ಹಾಕಿದ್ದ. 2018ರಲ್ಲಿ ಮಲ್ಲೇಶ್ವರದ ಜೋಯ್‌ಅಲುಕಾಸ್ ಅಂಗಡಿಯಿಂದ 24 ಗ್ರಾಂ. ಚಿನ್ನದ ಸÃ ಕಳವು ಮಾಡಿದ್ದ ಆರೋಪಿ, ಜಯನಗರ 4ನೇ ಬ್ಲಾಕ್‌ನ ವಿಜಿಜೆ ಜ್ಯೂವೆಲ್ಲರಿ ಮಳಿಗೆಯಲ್ಲಿ 60 ಗ್ರಾಂ ಚಿನ್ನದ ಸರ ಕಳವು ಮಾಡಿ ಅವುಗಳನ್ನು ತಮಿಳುನಾಡಿನಲ್ಲಿ ಗಿರವಿ ಇಟ್ಟು, ಬಂದ ಹಣವನ್ನು ಸಂಸಾರ ನಿರ್ವಹಣೆ ಮತ್ತು ಮಾವನ ಮಗಳ ಕಾಲೇಜು ಶುಲ್ಕ ಕಟ್ಟಲು ಬಳಸಿಕೊಂಡಿದ್ದ ಎಂದು ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.
ಮಾಹಿತಿ ನೀಡಿದ ಸೆಕ್ಯೂರಿಟಿ: ಗ್ರಾಹಕನ ಸೋಗಿನಲ್ಲಿ ಚಿನ್ನಾಭರಣ ಮಳಿಗೆಗೆ ತೆರಳುತ್ತಿದ್ದ ಪ್ರಭು, ಚಿನ್ನಾಭರಣ ಖರೀದಿ ನೆಪದಲ್ಲಿ ಹಲವು ಆಭರಣಗಳನ್ನು ತೆಗೆಸಿ, ಸಿಬ್ಬಂದಿ ಕಣ್ತಪ್ಪಿಸಿ 2.5 ಲಕ್ಷ ಮೌಲ್ಯದ 60 ಗ್ರಾಂ. ತೂಕದ ಚಿನ್ನದ ಸರ ಕಳವು ಮಾಡಿ ಪರಾರಿಯಾಗಿದ್ದ. ಈ ಕೃತ್ಯ ಮಳಿಗೆಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಘಟನೆ ಸಂಬಂಧ ಚಿನ್ನಾಭರಣ ಮಳಿಗೆ ಮ್ಯಾನೇಜರ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಎಲ್ಲ ಜ್ಯುವೆಲ್ಲರಿ ಮಳಿಗೆಗಳಿಗೆ ಆರೋಪಿಯ ಫೋಟೋ ಕೊಟ್ಟು ಮತ್ತೂಮ್ಮೆ ಬಂದರೆ ಮಾಹಿತಿ ನೀಡುವಂತೆ ಸೂಚಿಸಿದ್ದರು. ಅಂದರಂತೆ ಆರೋಪಿ ಜಯನಗರದ ಜ್ಯುವೆಲ್ಲರಿ ಮಳಿಗೆಗೆ ಹೋದಾಗ ಭದ್ರತಾ ಸಿಬ್ಬಂದಿಯೊಬ್ಬರು ಪತ್ತೆ ಹಚ್ಚಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ
Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ
Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್
Bengaluru: ರೈಲಲ್ಲಿ ಬಿಟ್ಟು ಹೋಗಿದ್ದ 5 ಲಕ್ಷ ಚಿನ್ನ ಪ್ರಯಾಣಿಕನಿಗೆ ಹಸ್ತಾಂತರ
Bengaluru: ಬಸ್ ಕಂಡಕ್ಟರ್, ಡ್ರೈವರ್‌ಗೆ ತೀವ್ರ ಹಲ್ಲೆ: ಇಬ್ಬರು ಆರೋಪಿಗಳ ಬಂಧನ
MUST WATCH
ಹೊಸ ಸೇರ್ಪಡೆ
Lucknow: ಹೊಟೇಲ್ ಬಳಿಕ 7 ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ
Jammu: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸೋದರ, ಬಿಜೆಪಿ ಶಾಸಕ ದೇವೇಂದ್ರ ಸಿಂಗ್ ರಾಣಾ ನಿಧನ
New Delhi: ಹಬ್ಬದ ಋತು; ದೇಶದಲ್ಲಿ 4.5 ಲಕ್ಷ ವಾಹನಗಳ ದಾಖಲೆ ಮಾರಾಟ!
Karnataka Rajyotsava: ಮನೆ ತುಂಬಾ 5 ಲಕ್ಷ ಕನ್ನಡ ಪುಸ್ತಕ: ಹರಿಹರಪ್ರಿಯರ ಪ್ರಪಂಚ!
Ranchi: ಹೇಮಂತ್ ಸೊರೇನ್ ವಯಸ್ಸು 5 ವರ್ಷದಲ್ಲಿ 7 ವರ್ಷ ಹೆಚ್ಚಳ!; ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.