ಪ್ರಕಾಶ ಖಂಡ್ರೆಗೆ ಟಿಕೆಟ್‌ ನೀಡಲು ಆಗ್ರಹ


Team Udayavani, Apr 3, 2018, 12:36 PM IST

bid-3.jpg

ಬೀದರ: ಬೀದರ ಉತ್ತರ ಕ್ಷೇತ್ರದಿಂದ ಮಾಜಿ ಶಾಸಕ ಪ್ರಕಾಶ ಖಂಡ್ರೆ ಅವರಿಗೆ ಟಿಕೆಟ್‌ ನೀಡಬೇಕು ಎಂದು ಪಕ್ಷದ ಪ್ರಮುಖರು ಮತ್ತು ಅಭಿಮಾನಿಗಳು ಆಗ್ರಹಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಮತ್ತು ಸಂಸದ ಭಗವಂತ ಖೂಬಾ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದ್ದಾರೆ. 2016ರ ಉಪ ಚುನಾವಣೆಯಲ್ಲಿ ಬೀದರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಖಂಡ್ರೆ ಕೇವಲ 10 ದಿನಗಳ ಪ್ರಚಾರ ನಡೆಸಿ ಸುಮಾರು 50,000 ಮತಗಳನ್ನು ಪಡೆದು ತೀವ್ರ ಪೈಪೋಟಿ ನೀಡಿದ್ದರು.

ಪ್ರಚಾರಕ್ಕೆ ಆಗಮಿಸಿದ ಪಕ್ಷದ ವರಿಷ್ಠರು ಮುಂದಿನ ಚುನಾವಣೆಯಲ್ಲೂ ಖಂಡ್ರೆಯವರೇ ಸ್ಪರ್ಧಿಸುವರು ಎಂದು ಘೋಷಣೆ ಮಾಡಿದ್ದರು. ಅದರಂತೆ ಅವರಿಗೆ ಟಿಕೇಟ್‌ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಉಪ ಚುನಾವಣೆ ನಂತರ ಬೀದರ ಕ್ಷೇತ್ರದಲ್ಲಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡು ತಮ್ಮ ತನು, ಮನ, ಧನದಿಂದ ದುಡಿದಿದ್ದು, ಚುನಾವಣೆಯಲ್ಲಿ ಪರಾಭವದ ಬಳಿಕವೂ ಬೀದರನಲ್ಲಿ ಟ್ಯಾಂಕರ್‌ ಮೂಲಕ ಉಚಿತ ನೀರು ಸರಬರಾಜು ಮಾಡಿ ನೀರಿನ ಬವಣೆ ನೀಗಿಸಿದ್ದಾರೆ. ಜಿಪಂ, ತಾಪಂನಲ್ಲಿ ತಲಾ 1, ಎಪಿಎಂಸಿಯಲ್ಲಿ 3 ಸ್ಥಾನಗಳ ಗೆಲುವಿನ ಶ್ರೇಯ ಪ್ರಕಾಶ ಅವರಿಗೆ ಸಲ್ಲುತ್ತದೆ. ಈ
ಬಾರಿ ಟಿಕೆಟ್‌ ನೀಡಿದರೆ ಅವರ ಜಯ ಖಚಿತ ಎಂದು ತಿಳಿಸಲಾಗಿದೆ. 

ಜಿಪಂ ಸದಸ್ಯೆ ತಾರಾಬಾಯಿ ರಾಠೊಡ, ತಾಪಂ ಸದಸ್ಯ ಸವಿತಾ ಧರ್ಮೇಂದರ, ಎಪಿಎಂಸಿ ಉಪಾಧ್ಯಕ್ಷ ಮಾರುತಿ ಚಾಂಚೋಳ, ಸದಸ್ಯರಾದ ಸುನಿತಾ ಜಗನ್ನಾಥ, ಬಸವರಾಜ ಶರ್ಮಾ, ಯುವ ಮೊರ್ಚಾ ಕಾರ್ಯದರ್ಶಿ ಬಸವರಾಜ ಭತಮುರ್ಗೆ, ರೈತ ಮೊರ್ಚಾ ಅಧ್ಯಕ್ಷ ಬಸವರಾಜ ಪನಸಾಲೆ ಪ್ರಮುಖರಾದ ನವೀನ್‌ ಚಿಟ್ಟಾ, ದೀಪಕ ಚಿದ್ರಿ, ನೋಹನ್‌ ರಾಜ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.